Thursday, September 19, 2024

ಪ್ರಾಯೋಗಿಕ ಆವೃತ್ತಿ

ಅ.30ಕ್ಕೆ ಡಾ.ಜಿ.ನಾರಾಯಣ ಶತಮಾನೋತ್ಸವ ಸಮಾರಂಭ

ಬೆಂಗಳೂರು ನಾಡೋಜ ಡಾ.ಜಿ.ನಾರಾಯಣ ಜನ್ಮಶತಮಾನೋತ್ಸವ ಸಮಿತಿ ಮತ್ತು ಕರ್ನಾಟಕ ಸಂಘ ಮಂಡ್ಯ ಇವರ ವತಿಯಿಂದ ಡಾ.ಜಿ.ನಾರಾಯಣ ಶತಮಾನೋತ್ಸವ ಉದ್ಘಾಟನಾ ಸಮಾರಂಭ ಅ.30ರಂದು ಬೆಳಿಗ್ಗೆ 11ಗಂಟೆ ಮಂಡ್ಯ ನಗರದ ಕರ್ನಾಟಕ ಸಂಘದ ಆವರಣದಲ್ಲಿ ನಡೆಯಲಿದೆ ಎಂದು ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶ ಗೌಡ ಹೇಳಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಬಕಾರಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಸಮಾರಂಭ ಉದ್ಘಾಟಿಸುವರು. ಮಾಜಿ ಶಾಸಕ ಡಿ.ಸಿ.ತಮ್ಮಣ್ಣ ಜಿ.ನಾರಾಯಣ ಬದುಕು ಪುಸ್ತಕ ಬಿಡುಗಡೆ ಮಾಡುವರು. ಶಾಸಕ ಎಂ.ಶ್ರೀನಿವಾಸ್ ಜಿ.ನಾರಾಯಣ ಅವರ ಒಡನಾಡಿ ಸಾಹಿತ್ಯ ಪರಿಚಾರಕರಿಗೆ ಗೌರವ ಸಮರ್ಪಣೆ ಮಾಡುವರು. ಮಾಜಿ ಶಾಸಕ ಕೆ.ಟಿ.ಶ್ರೀಕಂಠೇಗೌಡ ಅವರು ಜಿ.ನಾರಾಯಣ ಅವರನ್ನು ಕುರಿತಂತೆ ಮಾತನಾಡುವರು ಎಂದರು.

ನಾಡೋಜ ಡಾ.ಹಂಪ ನಾಗರಾಜಯ್ಯ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಎಂ.ಎಸ್. ಅತ್ಯಾನಂದ, ಮಾಜಿ ಶಾಸಕ ಜಿ.ಬಿ.ಶಿವಕುಮಾರ್ ಭಾಗವಹಿಸುವರು. ನಾಡೋಜ ಡಾ. ಜಿ.ನಾರಾಯಣ ಪ್ರತಿಷ್ಠಾನದ ಅಧ್ಯಕ್ಷ ನಾ.ಗೋಪಾಲಕೃಷ್ಣ, ಕರ್ನಾಟಕ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಡಿ.ಪಿ.ಸ್ವಾಮಿ ಉಪಸ್ಥಿತರಿರುವರು ಎಂದರು.

ಎಂ.ಎಲ್.ಶ್ರೀಕಂಠೇ‌ಗೌಡ ರಂಗ ಪ್ರಶಸ್ತಿ ಪ್ರದಾನ

ನ.2ರಂದು ಸಂಜೆ 4 ಗಂಟೆಗೆ ಮಂಡ್ಯ ನಗರದ ಕರ್ನಾಟಕ ಸಂಘದ ಆವರಣದಲ್ಲಿ ಎಂ.ಎಲ್.ಶ್ರೀಕಂಠೇ‌ಗೌಡ ರಂಗ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶ ಗೌಡ ತಿಳಿಸಿದರು.

ಸಚಿವ ಕೆ.ಗೋಪಾಲಯ್ಯ ಸಮಾರಂಭ ಉದ್ಘಾಟಿಸುವರು. ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಮುಖ್ಯಮಂತ್ರಿಗಳ ಕಾರ್ಯದರ್ಶಿ ಜಯರಾಮ್ ರಾಯಪುರ ಅವರಿಗೆ ಪ್ರಶಸ್ತಿ ಪ್ರದಾನ ಮಾಡುವರು. ಖ್ಯಾತ ರಂಗ ನಿರ್ದೇಶಕ ಶಶಿಧರ್ ಬಾರಿಘಾಟ್ ಅಭಿನಂದನಾ ನುಡಿ ನುಡಿಯುವರು. ಶಾಸಕ ಎಂ.ಶ್ರೀನಿವಾಸ್ ಅಧ್ಯಕ್ಷತೆ ವಹಿಸುವರು ಎಂದರು.

ಮುಖ್ಯ ಅತಿಥಿಗಳಾಗಿ ಶಾಸಕರಾದ ಮಧು ಜಿ.ಮಾದೇಗೌಡ, ಮಾಜಿ ಶಾಸಕರಾದ ಬಿ.ರಾಮಕೃಷ್ಣ, ಕೆ.ಟಿ.ಶ್ರೀಕಂಠೇಗೌಡ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಶಾಂತ ಎನ್. ಹುಲ್ಮನಿ, ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್.ನಾಗರಾಜು, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಸ್.ಶಂಭೂಗೌಡ, ಹಾಗೂ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಕೆ.ನಾಗೇಶ್ ಭಾಗವಹಿಸುವರು ಎಂದರು.

ಗೋಷ್ಠಿಯಲ್ಲಿ ನಿವೃತ್ತ ಮುಖ್ಯ ಶಿಕ್ಷಕ ಉದಯಶಂಕರ್ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!