Friday, September 20, 2024

ಪ್ರಾಯೋಗಿಕ ಆವೃತ್ತಿ

ಮಣಿಪುರಕ್ಕೆ ಹೋಗದ ಮಹಿಳಾ ಆಯೋಗ ಉಡುಪಿಗೆ ಬಂದಿದೆ: ಡಾ.ಜಿ ಪರಮೇಶ್ವರ್‌ ಕಿಡಿ

ರಾಷ್ಟ್ರೀಯ ಮಹಿಳಾ ಆಯೋಗದವರು ಮಣಿಪುರಕ್ಕೆ ಹೋಗಿಲ್ಲ, ಉಡುಪಿಗೆ ಬಂದಿದ್ದಾರೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಕಿಡಿಕಾರಿದರು.

ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮಣಿಪುರದಲ್ಲಿ ನಡೆದ ಘಟನೆಯ ಬಗ್ಗೆ ಏನು ಹೇಳಬೇಕು ತಿಳಿಯುತ್ತಿಲ್ಲ. ಅಲ್ಲಿ ಅಂತಹ ಘಟನೆ ನಡೆದರೂ ಅಲ್ಲಿಗೆ ಯಾವ ಮಹಿಳಾ ಕಮಿಷನ್‌ ಹೋಗಿಲ್ಲ. ಆದರೆ, ಉಡುಪಿಗೆ ಬಂದಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಮಣಿಪುರ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಆದರೆ, ಉಡುಪಿ ಘಟನೆಗೆ ಸಂಬಂಧಿಸಿದಂತೆ ಈವರೆಗೂ ಯಾವುದೇ ಸಾಕ್ಷಿ ಸಿಕ್ಕಿಲ್ಲ. ಹಾಗಂತ ಉಡುಪಿಗೆ ಆಯೋಗ ಬಂದಿರುವುದನ್ನು ನಾನು ಪ್ರಶ್ನಿಸುವುದಿಲ್ಲ. ಬರಬಾರದಿತ್ತು ಎಂದೂ ಹೇಳುವುದಿಲ್ಲ. ಘಟನೆಗೆ ಸಂಬಂಧಿಸಿದಂತೆ ಆಯೋಗಕ್ಕೆ ಏನು ಪ್ರಾಥಮಿಕ ಸಾಕ್ಷಿ ಸಿಕ್ಕಿದೆ ಎಂಬುದು ನನಗೆ ಗೊತ್ತಿಲ್ಲ” ಎಂದರು.

“ಉಡುಪಿಯಲ್ಲಿ ವಿಡಿಯೋ ಚಿತ್ರೀಕರಣ ಮಕ್ಕಳ ಆಟ ಎಂದು ಹೇಳಿಲ್ಲ. ಸ್ನೇಹಿತರ ನಡುವೆ ಘಟನೆಗಳು ನಡೆಯುತ್ತವೆ, ಅದು ಅಲ್ಲಿಗೆ ಮುಗಿಯುತ್ತದೆ. ಪ್ರಕರಣದಲ್ಲಿ ಕಾಲೇಜಿನ ಪ್ರಾಂಶುಪಾಲರು ಹೆಚ್ಚಿನ ಕ್ರಮ ತೆಗೆದುಕೊಳ್ಳುತ್ತಾರೆ. ಈಗಾಗಲೇ ಸಸ್ಪೆಂಡ್ ಮಾಡಿದ್ದಾರೆ, ಹೆಚ್ಚಿನ ಕ್ರಮ ಅವರಿಗೆ ಬಿಟ್ಟಿದ್ದು. ನಾವು ಇದಕ್ಕೆ ಮಧ್ಯಪ್ರವೇಶಿಸುವುದಿಲ್ಲ. ಅವರೇ ದೂರು ದಾಖಲಿಸುತ್ತಾರೆ. ಈಗಾಗಲೇ ಪೊಲೀಸರು ಸುಮೊಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ಪೊಲೀಸರ ತನಿಖೆ ಬಳಿಕ ಸತ್ಯಾಸತ್ಯತೆ ಎಲ್ಲವೂ ಹೊರಬರಲಿದೆ” ಎಂದು ತಿಳಿಸಿದರು.

ಉಡುಪಿಯಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತು ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣ ನಡೆದಿರುವ ನೇತ್ರ ಜ್ಯೋತಿ ಕಾಲೇಜಿಗೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರಂ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!