Friday, November 20, 2026

ಪ್ರಾಯೋಗಿಕ ಆವೃತ್ತಿ

ಪ್ರಸಿದ್ಧ ವ್ಯಕ್ತಿಗಳ ತತ್ವಗಳು ಸ್ವಾಸ್ಥ್ಯ ಸಮಾಜ ಕಟ್ಟುವುದಕ್ಕೆ ಅಗತ್ಯ : ಡಾ.ಹೆಚ್.ಎನ್.ಗೋಪಾಲಕೃಷ್ಣ

ಪುರಾಣ ಪ್ರಸಿದ್ಧರನ್ನು ಸ್ಮರಿಸಿಕೊಂಡು, ಅವರ ಆಚಾರ, ವಿಚಾರ, ತತ್ವಗಳನ್ನು ಅಳವಡಿಸಿಕೊಂಡರೆ ನಾವು ಉತ್ತಮವಾದ ಸ್ವಾಸ್ಥ್ಯ ಸಮಾಜವನ್ನು ಕಟ್ಟುವುದಕ್ಕೆ ಅನುಕೂಲವಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಹೆಚ್.ಎನ್ ಗೋಪಾಲಕೃಷ್ಣ ತಿಳಿಸಿದರು.

ಮಂಡ್ಯನಗರದ ಕೆ .ವಿ ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕಂತಿ ಇಲಾಖೆ ವತಿಯಿಂದ ನಡೆದ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಸಮಾಜದಲ್ಲಿನ ಮಹಾಪುರುಷರು ಶಾಂತಿಯನ್ನು ಪಾಲಿಸಿ, ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳುವ ಬಗ್ಗೆ ಸಮಾಜದಲ್ಲಿ ಬೋಧನೆ ಮಾಡಿ, ಉತ್ತಮ ಸಮಾಜ ಕಟ್ಟುವಲ್ಲಿ ದಿಟ್ಟ ಹೆಜ್ಜೆ ಇಟ್ಟರು ಎಂದು ಸ್ಮರಿಸಿದರು.

ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್ ನಾಗಾರಾಜು ಮಾತನಾಡಿ, ರೇಣುಕಾಚಾರ್ಯರು ಸಾವಿರಾರು ವರ್ಷಗಳ ಹಿಂದೆ ವೀರಶೈವ ಧರ್ಮ ಸ್ಥಾಪನೆ ಮಾಡಿ ಸಮಾಜದಲ್ಲಿ ಮನುಷ್ಯ-ಮನುಷ್ಯರ ನಡುವೆ ತಾರತಮ್ಯ ಹೋಗಲಾಡಿಸಿ ಮಾನವ ಧರ್ಮವನ್ನು ಎತ್ತಿಹಿಡಿದರು ಎಂದರು.

ಕಾರ್ಯಕ್ರಮದಲ್ಲಿ ಶ್ರೀದುರ್ದಂಡೇಶ್ವರ ಮಹಂತ ಶಿವಯೋಗಿ ಮಠದ ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮಿಗಳು, ಬಿ.ಜಿ ಪುರ ಹೊರಮಠದ ಚಂದ್ರಶೇಖರ ಸ್ವಾಮಿ, ಬಾಳೆಹೊನ್ನೂರು ಶಾಖಾಮಠದ ಶ್ರೀ ಗಂಗಾಧರ ಶಿವಾಚಾರ್ಯ ಸ್ವಾಮಿಗಳು, ಕದಂಬ ಜಂಗಮ ಮಠದ ರೇಣುಕಶಿವಾಚಾರ್ಯ ಸ್ವಾಮಿ, ಜಿಲ್ಲಾ, ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತ ಎಲ್ ಹುಲ್ಮನಿ, ಕನ್ನಡ ಮತ್ತು ಸಂಸ್ಕೃತಿಯ ಸಹಾಯಕ ನಿರ್ದೇಶಕ ಎನ್.ಉದಯಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ