Friday, September 20, 2024

ಪ್ರಾಯೋಗಿಕ ಆವೃತ್ತಿ

ಜ.30 ರಿಂದ ಸ್ಪರ್ಶ್ ಕುಷ್ಠರೋಗ ಅರಿವು ಪಾಕ್ಷಿಕ ಆಚರಣೆ : ಡಾ.ಹೆಚ್.ಎನ್ ಗೋಪಾಲಕೃಷ್ಣ

ಮಂಡ್ಯ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಂಡ್ಯ ಜಿಲ್ಲೆಯಲ್ಲಿ ಜನವರಿ 30 ರಿಂದ ಫೆಬ್ರವರಿ 13 ರವರೆಗೆ ಸ್ಪರ್ಶ್ ಕುಷ್ಠ ಅರಿವು ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಹೆಚ್.ಎನ್ ಗೋಪಾಲಕೃಷ್ಣ ತಿಳಿಸಿದರು.

ಮಂಡ್ಯ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿಂದು ನಡೆದ ಸ್ಪರ್ಶ್ ಕುಷ್ಠ ಅರಿವು ಆಂದೋಲನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆಯ ನಿರ್ದೇಶನದಂತೆ ಈ ಅರಿವು ಕಾರ್ಯಕ್ರಮ ನಡೆಯುತ್ತಿದೆ. ಮಹಾತ್ಮ ಗಾಂಧಿಜೀಯವರು ಕುಷ್ಠರೋಗ ಮುಕ್ತ ಸಮಾಜವನ್ನು ನಿರ್ವಹಿಸಲು ಶ್ರಮಿಸಿದ್ದು, ಈ ನೆನಪಿಗಾಗಿ ಗಾಂಧಿಜೀಯವರು ಹುತಾತ್ಮರಾದ ಜನವರಿ 30 ರಂದು ಸ್ಪರ್ಶ್ ಕುಷ್ಠರೋಗ ಅರಿವು ಪಾಕ್ಷಿಕ ಆಚರಿಸಲಾಗುತ್ತಿದೆ . ಆಂದೋಲನದಲ್ಲಿ ಆಶಾ ಕಾರ್ಯಕರ್ತೆಯರು, ಸ್ವಯಂ ಸೇವಕರು, ಪತ್ರಿ ಮನೆ ಮನೆಗೆ, ಎಲ್ಲಾ ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ಯುವ ಜನೆತೆಗೆ ಅರಿವು ಮೂಡಿಸುತ್ತಾರೆ. ರೋಗದ ಲಕ್ಷಣಗಳಿದ್ದಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ವೈದ್ಯರ ಬಳಿ ಒಮ್ಮೆ ತಪಾಸಣಾ ಪಡಿಸಿಕೊಳ್ಳಿ ಎಂದರು.

ಯಾರಾದರೂ ವ್ಯಕ್ತಿಯ ದೇಹದ ಮೇಲೆ ಯಾವುದೇ ಭಾಗದಲ್ಲಿ ತಿಳಿ ಬಿಳಿ ಅಥವಾ ತಾಮ್ರ ವರ್ಣದ ಸ್ಪರ್ಶ ಜ್ಞಾನವಿಲ್ಲದ ಮಚ್ಚೆಗಳ ರೋಗ ಲಕ್ಷಣಗಳು ಇದ್ದಲ್ಲಿ, ಅವರು ಆಶಾಕಾರ್ಯಕರ್ತೆರು ಹಾಗೂ ಇತರೆ ಅರೋಗ್ಯ ಸಿಬ್ಬಂದಿಯ ಗಮನಕ್ಕೆ ತನ್ನಿ, ಅವರು ಹೆಚ್ಚಿನ ತಪಾಸಣೆಗೆ ಒಳಪಡಿಸಿ ಅದು ಕುಷ್ಠರೋಗವೊ ಇಲ್ಲವೊ ಎಂದು ಖಚಿತಪಡಿಸುತ್ತಾರೆ. ಅದು ಕುಷ್ಠರೋಗ ಆಗಿದಲ್ಲಿ ಅರೋಗ್ಯ ಇಲಾಖೆಯವರು ಉಚಿತವಾಗಿ ಚಿಕಿತ್ಸೆ ಕೊಡುತ್ತಾರೆ. ಕುಷ್ಠರೋಗ ಶಾಪವಲ್ಲ, ಸಮಾಜದಲ್ಲಿ ಕುಷ್ಠರೋಗ ವ್ಯಕ್ತಿಗೆ ತಾರತಮ್ಯ ಮಾಡದೆ ಅವರಿಗೆ ಸಾಂತ್ವನ ಹೇಳಿ ಎಂದು ತಿಳಿಸಿದರು.

ಶಿಕ್ಷಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ಸಮಾಜ ಕಲ್ಯಾಣ ಇಲಾಖೆಯವರು ಈ ಕಾರ್ಯಕ್ರಮಕ್ಕೆ ಸಹಕರಿಸಿ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿ ಎಂದರು.

ಪಿ.ಬಿ ಕುಷ್ಠರೋಗ ಮತ್ತು ಎಂ.ಬಿ ಕುಷ್ಠರೋಗಗಳು ಮಂಡ್ಯದಲ್ಲಿ 21 ಪ್ರಕರಣಗಳು ಮಾತ್ರ ಇವೆ. ಅವರಿಗೆ ಚಿಕಿತ್ಸೆ ನೀಡಿ ಗುಣಪಡಿಸಲಾಗುತ್ತಿದೆ. ಅದನ್ನು ನಾವು ನಿರ್ಮೂಲನೆ ಮಾಡಿ ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿಸಿಬೇಕು ಅದಕ್ಕಾಗಿ ಸಾರ್ವಜನಿಕರು ಸಂಪೂರ್ಣವಾಗಿ ಜಿಲ್ಲಾಡಳಿತದೊಂದಿಗೆ ಸಹಕರಿಸಿ ಎಂದರು. ಜನವರಿ30 ರಂದು ಪ್ರಾಥಮಿಕ ಆರೋಗ್ಯ ಕೇಂದ್ರ, ನಗರ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲ್ಲೂಕು ಮಟ್ಟದಲ್ಲಿ ಜಾಥ ಮತ್ತು ವೇದಿಕೆ ಕಾರ್ಯಕ್ರಮ ನಡೆಯಲಿದೆ.

ನಾನು ಸ್ವಪ್ನ-ನನ್ನ ಸ್ವಪ್ನ ಕುಷ್ಠಮುಕ್ತ ಭಾರತ ಪ್ರತಿ ಗ್ರಾಮಗಳಲ್ಲಿ ಶಾಲೆಯ 8 ನೇ ತರಗತಿಯ ವಿದ್ಯಾರ್ಥಿನಿಯನ್ನು ಸ್ವಪ್ನ ಎಂಬ ಹೆಸರಿನಿಂದ ನಾಮಕರಣ ಮಾಡಿ, ಆ ವಿದ್ಯಾರ್ಥಿನಿ ತಮ್ಮ ಗ್ರಾಮದಲ್ಲಿ ಸಾರ್ವಜನಿಕರಿಗೆ ಕುಷ್ಠರೋಗದ ಬಗ್ಗೆ ಅರಿವು ಮೂಡಿಸುವುದರ ಮೂಲಕ ಖಾಯಿಲೆ ಬಗ್ಗೆ ಇರುವ ಕಳಂಕ ಹಾಗೂ ತಾರತಮ್ಯವನ್ನು ಹೋಗಲಾಡಿಸಲು ಸ್ವಪ್ನ ಸಹಕರಿಸುತ್ತಾಳೆ ಎಂದರು. ಕುಷ್ಠರೋಗದಿಂದ ಗುಣಮುಖರಾದ ಮಳವಳ್ಳಿ ತಾಲ್ಲೂಕಿನ ಬಸವರಾಜು ಅವರು ತಾವು ರೋಗದಿಂದ ಬಳಲುತ್ತಿದ್ದ ಸಂದರ್ಭದಲ್ಲಿ ಆರೋಗ್ಯ ಇಲಾಖೆಯಿಂದ ಸಿಕ್ಕ ಸೌಲಭ್ಯ ಹಾಗೂ ಮಾನಸಿಕ ದೈರ್ಯ ಕುರಿತಂತೆ ತಮ್ಮ ‌ಅನಿಸಿಕೆ ಹಂಚಿಕೊಂಡರು.

ಸಭೆಯಲ್ಲಿ ಜಿ ಪಂ. ಉಪ ಕಾರ್ಯದರ್ಶಿ (ಆಡಳಿತ) ಸರಸ್ವತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಟಿ.ಎನ್ ಧನಂಜಯ್ , ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ.ಕೆ.ಪಿ ಅಶ್ವಥ್, ಜಿಲ್ಲಾ ಮಲೇರಿಯಾ ನಿಯಂತ್ರಣ ಅಧಿಕಾರಿ ಡಾ.ಭವಾನಿ ಶಂಕರ್,‌ ಜಿಲ್ಲಾ‌ ಸರ್ವೇಕ್ಷಣಾ ಅಧಿಕಾರಿ ಡಾ.ಎಂ.ಜಿ ಸಂಜಯ್, ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿ ಡಾ.ಆಶಾಲತಾ, ಸಂತಾನೋತ್ಪತ್ತಿ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಡಾ.ಅನಿಲ್ ಕುಮಾರ್, ಮಳವಳ್ಳಿ ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ವೀರಭದ್ರಪ್ಪ, ಮದ್ದೂರು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರವೀಂದ್ರ, ಶ್ರೀರಂಗಪಟ್ಟಣ ತಾಲೂಕು ಆರೋಗ್ಯ ಅಧಿಕಾರಿ ಡಾ.ವೆಂಕಟೇಶ್, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಉಪಾಧ್ಯಕ್ಷ ಮೀರಾ ಶಿವಲಿಂಗಯ್ಯ ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!