Thursday, September 19, 2024

ಪ್ರಾಯೋಗಿಕ ಆವೃತ್ತಿ

ಕ್ರೀಡೆಯಲ್ಲಿ ಭಾಗವಹಿಸುವುದು ಉತ್ತಮ ಬೆಳವಣಿಗೆ : ಡಾ.ಎಚ್.ಎನ್.ಗೋಪಾಲಕೃಷ್ಣ

ಒತ್ತಡದ ನಡುವೆ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ನೌಕರರು, ಕ್ರೀಡಾ ಮತ್ತು ಸಾಂಸ್ಕೃತಿಕ  ಚಟುವಟಿಕೆ ಗಳಲ್ಲಿ ಭಾಗವಹಿಸುವುದು ಉತ್ತಮ ಬೆಳವಣಿಗೆ ಎಂದು ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ತಿಳಿಸಿದರು.

ಮಂಡ್ಯ ನಗರದ ಪಿಇಟಿ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿಜೇತ ತಂಡಗಳಿಗೆ ಬಹುಮಾನ ವಿತರಣೆ ಮಾಡಿ ಮಾತನಾಡಿದ ಅವರು, ನಾನು ಕ್ರೀಡಾ ಇಲಾಖೆ ಆಯುಕ್ತನಾಗಿದಾಗ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ನಡೆಸಲಾಗಿತ್ತು. ರಾಜ್ಯ ಸರ್ಕಾರದಿಂದ ಅನುದಾನವನ್ನು ಸಹ ಬಿಡುಗಡೆ ಮಾಡಿಸಲಾಗಿತ್ತು. ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಮೂರು ಕೋಟಿ ಅನುದಾನ ನೀಡಲಾಗುತ್ತಿದೆ ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತ ಎಲ್.ಹುಲ್ಮನಿ ಮಾತನಾಡಿ, ಮನುಷ್ಯನ ಬೆಳವಣಿಗೆಗೆ ಕ್ರೀಡಾ ಚಟುವಟಿಕೆಗಳು ಸಹಾಯವಾಗುತ್ತವೆ. ಆದ್ದರಿಂದ ಕ್ರೀಡೆ ಮನುಷ್ಯನ ಅವಿಭಾಜ್ಯ ಅಂಗ ಎಂದು ತಿಳಿಸಿದರು.

ಸೋಲು ಗೆಲುವು ಸಹಜ, ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಕ್ರೀಡಾ ಮನೋಭಾವನೆ ಬೆಳೆಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು. ಸದೃಢವಾದ ಆರೋಗ್ಯವಿದ್ದರೆ ಮನಸ್ಸು ಚೆನ್ನಾಗಿರುತ್ತದೆ ಆಗ ದಕ್ಷತೆಯಿಂದ ಕಾರ್ಯನಿರ್ವಹಿಸಬಹುದು ಎಂದು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಯರಾಮ ರಾಯಪುರ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಸ್.ಶಂಭುಗೌಡ, ಪ್ರಧಾನ ಕಾರ್ಯದರ್ಶಿ ಆರ್.ದೇವರಾಜು, ಈಶ್ವರ್, ಜಿ.ಎನ್. ನಾಗೇಶ್, ಟಿ.ಕೃಷ್ಣಯ್ಯ ಸೇರಿದಂತೆ ಇತರರು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!