Friday, November 20, 2026

ಪ್ರಾಯೋಗಿಕ ಆವೃತ್ತಿ

ಸಮಾಜದ ವಿಮೋಚನೆಗೆ ದುಡಿದ ದಾರಿದೀಪ ಅಂಬೇಡ್ಕರ್ – ಡಾ. ಕೆ.ಅನ್ನದಾನಿ

ಸಮಾಜದ ವಿಮೋಚನೆಗೆ ಅಗಲಿರುಳು ದುಡಿದಿರುವ ದಾರಿದೀಪವಾದ ಮಹಾನ್ ನಾಯಕ ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ದಲಿತರು ಸೇರಿದಂತೆ ಪ್ರತಿಯೊಬ್ಬರು ಸ್ಮರಿಸಿಕೊಳ್ಳಬೇಕಿದೆ ಎಂದು ಶಾಸಕ ಡಾ.ಕೆ ಅನ್ನದಾನಿ ತಿಳಿಸಿದರು.

ಮಳವಳ್ಳಿ ಪಟ್ಟಣದ ಪ್ರವಾಸಿ ಮಂದಿರದ ಮುಂಭಾಗ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಅಂಗವಾಗಿ ಕಂಚಿನ ಪ್ರತಿಮೆಗೆ ಮಾಲಾರ್ಪಣೆ ಮಾಡುವುದರ ಮೂಲಕ ಪುಷ್ಪ ನಮನ ಸಲ್ಲಿಸಿದ ನಂತರ ಮಾತನಾಡಿದ ಅವರು, ಪ್ರತಿಯೊಂದು ಗ್ರಾಮಗಳಲ್ಲಿಯೂ ಯುವಕರು ಅಂಬೇಡ್ಕರ್ ಜಯಂತಿಯನ್ನು ವಿಜೃಂಭಣೆಯಿಂದ ಆಚರಣೆ ಮಾಡುತ್ತಿದ್ದಾರೆ, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ತಾಲ್ಲೂಕು ಜೆಡಿಎಸ್ ಪಕ್ಷದ ವತಿಯಿಂದ ಡಾ.ಬಿ.ಆರ್. ಅಂಬೇಡ್ಕರ್ ಕಂಚಿನ ಪ್ರತಿಮೆಗೆ ಮಾಲಾರ್ಪಣೆ ಮಾಡುವುದರ ಮೂಲಕ ಸರಳವಾಗಿ ಜಯಂತಿಯನ್ನು ಆಚರಿಸಲಾಗುತ್ತಿದೆ ಎಂದರು.

ಏಪ್ರೀಲ್ ೧೪ರಂದು ಅಂಬೇಡ್ಕರ್ ಜಯಂತಿ ದಿನದಂದು ಮಾತ್ರ ಅವರ ಸ್ಮರಣೆ ಮಾಡುವುದಲ್ಲ, ಅವರನ್ನು ಪ್ರತಿಕ್ಷಣವು ಸ್ಮರಿಸಿಕೊಳ್ಳುವಂತಾಗಬೇಕು, ಅಂಬೇಡ್ಕರ್ ಅವರ ಆಶಯಗಳನ್ನು ಈಡೇರಿಸಲು ಪ್ರತಿಯೊಬ್ಬರು ಮುಂದಾಗಬೇಕು, ಅಂಬೇಡ್ಕರ್ ಅವರು ಒಂದು ಸಮುದಾಯಕ್ಕೆ ಮಾತ್ರ ಸೀಮಿತವಾಲ್ಲ, ಅವರು ಸಮಾಜದ ಆಸ್ತಿಯಾಗಿದ್ದಾರೆಂದು ಹೇಳಿದರು.

ಇದೇ ಸಂದರ್ಭದಲ್ಲಿ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ವಿಶ್ವನಾಥ್, ಪುರಸಭೆ ಉಪಾಧ್ಯಕ್ಷ ಪ್ರಶಾಂತ್, ಪುರಸಭೆ ಸದಸ್ಯ ನಂದಕುಮಾರ್, ಪುರಸಭೆ ಮಾಜಿ ಸದಸ್ಯ ಮಹೇಶ್, ಕೃಷ್ಣೇಗೌಡ, ನಾಗರಾಜು, ಅಂಶು ಅಂದಾನಿ, ಮೆಡಿಕಲ್ ಕುಮಾರ್ ಸೇರಿದಂತೆ ಇತರರು ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ