ಏಪ್ರಿಲ್ 30 ರಂದು ನಿವೃತ್ತಿಯಾಗುತ್ತಿರುವ ಮಿಮ್ಸ್ ನ ಖ್ಯಾತ ವೈದ್ಯ ಡಾ.ಕೆ.ಎಂ.ಶಿವಕುಮಾರ್ ಅವರ ವೈದ್ಯಕೀಯ ಸೇವೆ ಪರಿಗಣಿಸಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸನ್ಮಾನಿಸಲಾಗುವುದು ಎಂದು ಜಿಲ್ಲಾ ಕಸಾಪ ಅಧ್ಯಕ್ಷ ರವಿಕುಮಾರ್ ಚಾಮಲಾಪುರ ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,ಏಪ್ರಿಲ್ 30ರಂದು ಸಂಜೆ 4 ಗಂಟೆಗೆ, ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿ ಕಚೇರಿ ಪಕ್ಕದಲ್ಲಿರುವ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ವೇದಿಕೆಯಲ್ಲಿ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಅಭಿನಂದನೆ ಸಲ್ಲಿಸುವರು.
ಅಬಕಾರಿ ಮತ್ತು ಸಚಿವ ಕೆ.ಗೋಪಾಲಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶ್ರೀ ಪುರುಷೋತ್ತಮಾನಂದ ಸ್ವಾಮೀಜಿ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ನಗರ ಸಭೆ ಅಧ್ಯಕ್ಷ ಹೆಚ್.ಎಸ್.ಮಂಜು, ಜಿಲ್ಲಾಧಿಕಾರಿ ಅಶ್ವತಿ,ಮಿಮ್ಸ್ ನಿರ್ದೇಶಕ ಡಾ.ಎಂ.ಆರ್.ಹರೀಶ್, ಎಸ್.ಬಿ.ಎಜುಕೇಷನ್ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಮೀರಾ ಶಿವಲಿಂಗಯ್ಯ, ಸಮಾಜ ಸೇವಕ ರವಿಕುಮಾರ್ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ ಎಂದರು.
ಗೋಷ್ಠಿಯಲ್ಲಿ ಹುಸ್ಕೂರು ಕೃಷ್ಣೇಗೌಡ,ಅಪ್ಪಾಜಪ್ಪ ಉಪಸ್ಥಿತರಿದ್ದರು.