Monday, April 29, 2024

ಪ್ರಾಯೋಗಿಕ ಆವೃತ್ತಿ

ಸರ್ಕಾರದ ಸೌಲಭ್ಯಗಳ ಅರಿವು ಅಗತ್ಯ : ಡಾ‌‌.ಕುಮಾರ

ಸರ್ಕಾರದಿಂದ ಸಿಗುವ ಸಾಲ ಸೌಲಭ್ಯ ಹಾಗೂ ಕೌಶಲ್ಯ ತರಬೇತಿಗಳ ಬಗ್ಗೆ ಜಿಲ್ಲೆಯ ಅಧಿಕಾರಿಗಳು ‌ಸಾರ್ವಜನಿಕ ವಲಯದಲ್ಲಿ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.

ಮಂಡ್ಯ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಕೌಶಲ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗ್ರಾಮೀಣ ಭಾಗದ ಯುವಕ ಯುವತಿಯರಿಗೆ ಕೌಶಲ್ಯ ತರಬೇತಿಗಳ ಬಗ್ಗೆ ಉಚಿತವಾಗಿ ತರಬೇತಿ ನೀಡುತ್ತಿದ್ದು, ಗ್ರಾಮೀಣ ಭಾಗದಲ್ಲಿ ಇದರ ಬಗ್ಗೆ ಅರಿವು ಮೂಡಿಸಿ ಕೌಶಲ್ಯ ತರಬೇತಿಗಳನ್ನು ಹೆಚ್ಚಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯವರು ಸ್ಥಳೀಯವಾಗಿ ಯಾವುದಕ್ಕೆ ಹೆಚ್ಚು ಒಲವಿದೆ ಅಂತ ತಿಳಿದುಕೊಂಡು ಅಂತಹ ಕೌಶಲ್ಯ ಯೋಜನೆಯನ್ನು ಹೆಚ್ಚು ಹೆಚ್ಚು ಜಾರಿಗೊಳಿಸಬೇಕು. ಈ ಮೂಲಕ ಉದ್ಯಮಶೀಲತೆಗೆ ಆದ್ಯತೆ ಕೂಡಬೇಕು ಎಂದರು.

ಸಿ.ಎಂ.ಕೆ‌.ಕೆ.ವೈ ತರಬೇತಿ, ಜಿಲ್ಲಾ ಕೌಶಲ್ಯ ತರಬೇತಿ, ಇಂಡಸ್ಟ್ರೀ ಲಿಂಕೇಜ್ ಸೆಲ್, ಸ್ವಯಂ ಉದ್ಯೋಗ, ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣ ಉದ್ದಿಮೆ, ಸ್ಪೋಕನ್ ಇಂಗ್ಲಿಷ್ ತರಬೇತಿ ಸೇರಿದಂತೆ ವಿವಿಧ ರೀತಿಯ ಕೌಶಲ್ಯ ‌ಯೋಜನೆಗಳಿದ್ದು, ಇವೆಲ್ಲವನ್ನೂ ಸಕಾಲದಲ್ಲಿ ಅನುಷ್ಠಾನಕ್ಕೆ ತರಲಾಗುತ್ತಿದೆ, ಜಿಲ್ಲೆಯ ಸಾರ್ವಜನಿಕರು ಇದರ ಉಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಕ್ ತನ್ವೀರ್ ಆಸೀಫ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಅಶೋಕ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ವೇಣುಗೋಪಾಲ್, ಯೋಜನ ನಿರ್ದೇಶಕಿ ತುಷಾರಮಣಿ, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಶ್ರೀನಿವಾಸ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಸಿದ್ದಲಿಂಗೇಶ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!