ನಾಗಮಂಗಲ ತಾಲ್ಲೂಕಿನ ಹಲವೆಡೆ ಪಡಿತರ ವಿತರಣೆ ವ್ಯವಸ್ಥೆಯಡಿ ಸರಬರಾಜು ಆಗುತ್ತಿರುವ ರಾಗಿ ಸಾಕಷ್ಟು ಧೂಳಿನಿಂದ ಕೂಡಿದೆ ಎಂಬ ದೂರಿನ ಹಿನ್ನಲೆಯಲ್ಲಿ ಪಡಿತರ ಅಂಗಡಿಗಳಿಗೆ ತೆರಳಿ ಪರಿಶೀಲನೆ ನಡೆಸುವಂತೆ ಆಹಾರ ಇಲಾಖೆಯ ಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ ನೀಡಿದ್ದಾರೆ.
ಪರಿಶೀಲನೆ ವೇಳೆ ರಾಗಿಯ ಗುಣಮಟ್ಟ ಕಳಪೆ ಎಂದು ಕಂಡು ಬಂದರೆ ಕೂಡಲೇ ಬದಲಾವಣೆ ಮಾಡುವಂತೆ ಜಿಲ್ಲಾಧಿಕಾರಿಗಳು ಆಹಾರ ಇಲಾಖೆಯ ಉಪ ನಿರ್ದೇಶಕರಿಗೆ ನಿರ್ದೇಶನ ನೀಡಿದ್ದಾರೆ.




