Thursday, November 19, 2026

ಪ್ರಾಯೋಗಿಕ ಆವೃತ್ತಿ

ಎನ್‌ಎಸ್‌ಎಸ್ ಶಿಬಿರಗಳಿಂದ ಶಿಸ್ತು, ಸಂಯಮ ಬೆಳೆಯುತ್ತದೆ: ಡಾ.ಎಂ.ಬಿ.ಸುರೇಶ್

ಎನ್‌ಎಸ್‌ಎಸ್ ಶಿಬಿರಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದರಿಂದ ಶಿಸ್ತು, ಸಂಯಮ ಹಾಗೂ ನಾಯಕತ್ವದ ಗುಣಗಳು ಬೆಳೆಯುತ್ತದೆ ಎಂದು ರಾಷ್ಟೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ.ಎಂ.ಬಿ.ಸುರೇಶ್ ತಿಳಿಸಿದರು.

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ, ಹೊರಾವರಣ ಕೇಂದ್ರ, ಬಿ.ಹೊಸೂರು ಕಾಲೋನಿಯಲ್ಲಿ ಆಯೋಜಿಸಿದ್ದ ಎನ್‌ಎಸ್‌ಎಸ್ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಯಾರು ವಿದ್ಯಾರ್ಥಿ ದಿಶೆಯಲ್ಲಿಯೇ ಶಿಸ್ತು, ಸಮಯ ಪ್ರಜ್ಞೆ ಬೆಳೆಸಿಕೊಳ್ಳುತ್ತಾರೋ ಅಂತಹ ವಿದ್ಯಾರ್ಥಿಗಳು ಸಮಾಜದಲ್ಲಿ ಉತ್ತಮ ಸ್ಥಾನ ಪಡೆಯುತ್ತಾರೆ. ಗ್ರಾಮೀಣ ಪ್ರದೇಶಗಳಲ್ಲಿ ಎನ್‌ಎಸ್‌ಎಸ್ ಶಿಬಿರಗಳ ಆಯೋಜನೆ ಮಾಡಿ ಸ್ವಚ್ಛಗೊಳಿಸುವ ಕೆಲಸ ನಿರ್ವಹಣೆಯಿಂದ ಗ್ರಾಮೀಣ ಜನರಿಗೆ ಅನುಕೂಲವಾಗುತ್ತದೆ ಹಾಗೂ ಸುತ್ತಮುತ್ತಲುನ ಆವರಣ ಸ್ವಚ್ಛವಾಗಿಟ್ಟುಕೊಳ್ಳುವ ಗುಣ ಬೆಳೆಯುತ್ತದೆ ಎಂದು ತಿಳಿಸಿದರು.

ಎನ್‌ಎಸ್‌ಎಸ್ ಕಾರ್ಯಕ್ರಮ ಅಧಿಕಾರಿ ಡಾ.ಗೀತಾಮಣಿ ಪಿ.ಎನ್.ಮಾತನಾಡಿ, ಎನ್‌ಎಸ್‌ಎಸ್ ಮಹಾತ್ಮಗಾಂಧಿಜಿ ಅವರ ಸರ್ವೋದಯ ಪರಿಕಲ್ಪನೆಯ ಕೂಸು. ಅಂದಿನ ಕಾಲದಲ್ಲೇ ಮಹಾತ್ಮ ಗಾಂಧಿ ಅವರು ಸ್ವಚ್ಛತೆ ಬಗ್ಗೆ ಅರಿವು ಮೂಡಿಸುತ್ತಿದ್ದರು. ಹಾಗಾಗಿ ವಿದ್ಯಾರ್ಥಿಗಳು ಇಂತಹ ಮಹನೀಯರ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕೇಂದ್ರ ಸಂಯೋಜಕರಾದ ಡಾ.ಕಿರಣ್ ಜಿ.ಎನ್ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ಬೋಧಕ,ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ