Friday, November 20, 2026

ಪ್ರಾಯೋಗಿಕ ಆವೃತ್ತಿ

ಸೇವಾ ಮನೋಭಾವ ಬೆಳೆಸಿಕೊಳ್ಳಲು ಡಾ.ಮೀರಾ ಶಿವಲಿಂಗಯ್ಯ ಸಲಹೆ

ಯುವ ರೆಡ್ ಕ್ರಾಸ್ ಘಟಕದ ಅಧಿಕಾರಿಗಳು ಸಾಮಾಜಿಕ ಸೇವಾ ಮನೋಭಾವ ಬೆಳೆಸಿಕೊಳ್ಳುವುದರ ಜತೆಗೆ ಮಾನವೀಯ ಸೇವೆಯ ಬಗ್ಗೆ ಬದ್ಧತೆ ಬೆಳೆಸಿಕೊಳ್ಳಬೇಕೆಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮಂಡ್ಯ ಜಿಲ್ಲಾ ಶಾಖೆಯ ಸಭಾಧ್ಯಕ್ಷೆ ಡಾ.ಮೀರಾ ಶಿವಲಿಂಗಯ್ಯ ಸಲಹೆ ನೀಡಿದರು.

ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕರ್ನಾಟಕ ರಾಜ್ಯ ಶಾಖೆ ಮತ್ತು ಮಂಡ್ಯ ಜಿಲ್ಲಾ ಶಾಖೆಯ ಸಂಯುಕ್ತ ಆಶ್ರಯದಲ್ಲಿ, ಮಂಡ್ಯ ವಿಶ್ವವಿದ್ಯಾನಿಲಯದ ಯುವ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿಗಳ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಮಂಡ್ಯ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಶಿವಚಿತ್ತಪ್ಪ ಎಸ್.ಕೆ. ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಪ್ರೊ.ಕೆ.ಯೋಗನರಸಿಂಹಾಚಾರ್ (ಕುಲಸಚಿವರು, ಪಠ್ಯಕ್ರಮ, ಮಂಡ್ಯ ವಿಶ್ವವಿದ್ಯಾನಿಲಯ) ಹಾಗೂ ಡಾ.ಕೆ.ಸಿ. ಲೋಕೇಶ್ (ಸಂಯೋಜನಾ ಅಧಿಕಾರಿ, ಯುವ ರೆಡ್ ಕ್ರಾಸ್ ಘಟಕ, ಮಂಡ್ಯ ವಿಶ್ವವಿದ್ಯಾನಿಲಯ) ಉಪಸ್ಥಿತರಿದ್ದರು.

ಕಾರ್ಯಕ್ರಮದ ಸಂಯೋಜನೆ ಮತ್ತು ಮಾರ್ಗದರ್ಶನವನ್ನು ಆನಂದ್ ಪಿ.ಹೆಚ್ ನೀಡಿದರು. ಕಾರ್ಯಕ್ರಮದಲ್ಲಿ ಮಂಡ್ಯ ವಿಶ್ವವಿದ್ಯಾನಿಲಯಕ್ಕೆ ಸಂಬಂಧಿಸಿದ ವಿವಿಧ ಕಾಲೇಜುಗಳ ಕಾರ್ಯಕ್ರಮಾಧಿಕಾರಿಗಳು ಭಾಗವಹಿಸಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ