ಕರ್ನಾಟಕ ಸಂಘದ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪಡೆದ ಡಾ.ಮೀರಾ ಶಿವಲಿಂಗಯ್ಯ ಅಭಿನಂದನಾ ಸಮಾರಂಭವನ್ನು ಮೇ 10ರಂದು ಸಂಜೆ 5 ಗಂಟೆಗೆ ಮಂಡ್ಯದ ಕೆ.ವಿ ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಸಂಘದ ಕಾರ್ಯದರ್ಶಿ ಚಂದಗಾಲು ಲೋಕೇಶ್ ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಂದು ಶಾಸಕ ಎಚ್.ವಿಶ್ವನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಎಸ್.ಬಿ ಎಜುಕೇಶನ್ ಟ್ರಸ್ಟ್ ಕಾರ್ಯದರ್ಶಿ ಡಾ. ಮೀರಾ ಶಿವಲಿಂಗಯ್ಯ ಅವರನ್ನು ಅಖಿಲ ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಡಾ ಹೆಚ್. ಎಲ್ ಪುಷ್ಪ ಸನ್ಮಾನಿಸಲಿದ್ದು, ವಿಶ್ರಾಂತ ಪ್ರಾಚಾರ್ಯ ಡಾ.ಮ.ರಾಮಕೃಷ್ಣ ಅಭಿನಂದನಾ ನುಡಿ ನುಡಿಯಲಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶ್ ಗೌಡ, ಎಸ್.ಬಿ.ಇ.ಟಿ ಅಧ್ಯಕ್ಷ ಡಾ.ಬಿ ಶಿವಲಿಂಗಯ್ಯ ಭಾಗವಹಿಸಲಿದ್ದು ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.
ಗೋಷ್ಠಿಯಲ್ಲಿ ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶ್ ಗೌಡ, ಸೋಮಶೇಖರ್ ,ವಿಜಯಲಕ್ಷ್ಮಿ ಉಪಸ್ಥಿತರಿದ್ದರು.