Thursday, May 16, 2024

ಪ್ರಾಯೋಗಿಕ ಆವೃತ್ತಿ

ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕೆ ಡಾ.ಮೂರ್ತಿ ಅರ್ಹರಲ್ಲ ಎನ್ನುವುದು ಖಂಡನೀಯ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಬೇಕಾದರೂ, ಎಲ್ಲಿಂದ ಬೇಕಾದರೂ ಚುನಾವಣೆಯಲ್ಲಿ ಸ್ಪರ್ಧಿಸಬಹುದು. ಅದರಂತೆ ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಡಾ.ಮೂರ್ತಿಯವರು  ಸ್ಪರ್ಧಿಸುವುದಕ್ಕೆ ಯಾರ ಅನುಮತಿಯೂ ಬೇಕಿಲ್ಲ, ಅವರು ಬೇರೆ ಪಕ್ಷದಿಂದ ಬಂದವರು, ಟಿಕೆಟ್ ಪಡೆಯಲು ಅರ್ಹರಲ್ಲ ಎನ್ನುವುದು ಖಂಡನೀಯ ಎಂದು ಜಿ.ಪಂ‌ ಮಾಜಿ ಸದಸ್ಯ ಮಹದೇವಸ್ವಾಮಿ ತಿಳಿಸಿದರು.

ಮಳವಳ್ಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಾಬಾ ಸಾಹೇಬ್ ಅಂಬೇಡ್ಕರ್ ರವರು ಸಂವಿಧಾನದ ಮೂಲಕ ಯಾರು ಬೇಕಾದರೂ, ಎಲ್ಲಿಂದ ಬೇಕಾದರೂ ಸ್ಪರ್ಧಿಸುವ ಅವಕಾಶ ನೀಡಿದ್ದಾರೆ. ಅದರಂತೆ ಡಾ. ಮೂರ್ತಿಯವರು ಕಾಂಗ್ರೆಸ್ ಪಕ್ಷದಲ್ಲಿದ್ದು, ಅವರು ಟಿಕೆಟ್ ಬಯಸಿ ಅರ್ಜಿ ಸಲ್ಲಿಸಿದ್ದಾರೆ. ಆದರೆ ಕಾಂಗ್ರೆಸ್ ನ ಕೆಲವು ಮುಖಂಡರು ಡಾ.ಮೂರ್ತಿಯವರು ಮಳವಳ್ಳಿ ಕ್ಷೇತ್ರಕ್ಕೆ ಏನು ಕೊಡುಗೆ ನೀಡಿದ್ದಾರೆ, ಅವರು ಬೇರೆ ಪಕ್ಷದಿಂದ ಬಂದವರು, ಅವರು ಟಿಕೆಟ್ ಗೆ ಅರ್ಜಿ ಹಾಕಲು ಅರ್ಹರಲ್ಲ ಎಂದು ಹೇಳಿರುವುದು ಖಂಡನೀಯ ಎಂದರು.

2008 ರಿಂದ 2013ರವರೆಗೆ ಮಳವಳ್ಳಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಕಟ್ಟಿದವರು ಯಾರು? ಎನ್ನುವ ಬಗ್ಗೆ ಡಾ.ಮೂರ್ತಿಯವರ ಬಗ್ಗೆ ಆರೋಪ ಮಾಡಿರುವ ಕಾಂಗ್ರೆಸ್ ಮುಖಂಡರು ಕೇಳಿಕೊಂಡರೆ ಒಳ್ಳೆಯದು. ಆಗ ದೊಡ್ಡಯ್ಯ, ರಮೇಶ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. ಮಲ್ಲಾಜಮ್ಮ, ಯಮದೂru ಸಿದ್ಧರಾಜು, ಡಾ. ಮೂರ್ತಿ ಎಲ್ಲರೂ ಕಾಂಗ್ರೆಸ್ ನಲ್ಲಿದ್ದರು. ಆಗ ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಸದಸ್ಯತ್ವ ಅಭಿಯಾನ, ಕಾಂಗ್ರೆಸ್ ನಡಿಗೆ ಹಳ್ಳಿ ಕಡೆಗೆ ಎಂಬ ಕಾರ್ಯಕ್ರಮಗಳನ್ನು ಡಾ.ಮೂರ್ತಿ ಮಾಡಿದ್ದಾರೆ ಎಂದರು.

ಹೊಸ ಮುಖ

ಮಳವಳ್ಳಿ ವಿಧಾನಸಭಾ ಕ್ಷೇತ್ರದ ಜನರು ಹೊಸ ಮುಖವನ್ನು ಬಯಸುತ್ತಿದ್ದಾರೆ. ಅದರಂತೆ ಸರಳ, ಸಜ್ಜನಿಕೆಯ ಡಾ.ಮೂರ್ತಿಯವರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಬೇಕು. ನಾವು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದು, ಪಿ‌ಎಂ.ನರೇಂದ್ರಸ್ವಾಮಿ, ಡಾ. ಮೂರ್ತಿ,ಮಲ್ಲಾಜಮ್ಮ ಇವರಲ್ಲಿ ವರಿಷ್ಟರು ಯಾರಿಗೆ ಟಿಕೆಟ್ ಕೊಟ್ಟರು ನಾವು ಒಮ್ಮತದಿಂದ ಕೆಲಸ ಮಾಡುತ್ತೇವೆ. ಆದರೆ ಹೈಕಮಾಂಡ್ ನಾಯಕರು ನಿರ್ಧಾರ ತೆಗೆದುಕೊಳ್ಳುವುದಕ್ಕೂ ಮುನ್ನ ಇವರು ಬೇರೆ ಪಕ್ಷದಿಂದ ಬಂದವರು, ಇವರಿಗೆ ಟಿಕೆಟ್ ಕೊಡುವುದು ಸರಿಯಲ್ಲ, ಡಾ‌.ಮೂರ್ತಿಯವರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಕಟ್ಟಲು ಶ್ರಮಿಸಿದ್ದಾರೆ. ಡಾ. ಮೂರ್ತಿಯವರು ಯಾರು ಎಂಬುದನ್ನು ಮಳವಳ್ಳಿ ಕ್ಷೇತ್ರದ ಮತದಾರರು ತೀರ್ಮಾನ ಮಾಡುತ್ತಾರೆ.ಆದರೆ ಅವರು ಈ ಕ್ಷೇತ್ರಕ್ಕೆ ಯಾರು, ಅರ್ಹತೆ ಇಲ್ಲ ಎಂದೆಲ್ಲ ಹೇಳುವುದು ಸರಿಯಲ್ಲ ಎಂದರು.

ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಚೊಟ್ಟನಹಳ್ಳಿ ರಮೇಶ್ ಮಾತನಾಡಿ, ಡಾ.ಮೂರ್ತಿ ಅವರು ಮಳವಳ್ಳಿ ಕ್ಷೇತ್ರದಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಅಂಬರೀಶ್ ಅವರು ಡಾ.ಮೂರ್ತಿಯವರನ್ನ ಸನ್ಮಾನಿಸಿ ಗೌರವಿಸಿದ್ದಾರೆ. ಹಲಗೂರಿನಲ್ಲಿ ಹತ್ತು ಸಾವಿರ ಜನರನ್ನು ಸೇರಿಸಿ ಅಂಬರೀಶ್ ಅವರನ್ನು ಕರೆಸಿ ಕಾರ್ಯಕ್ರಮ ಮಾಡಿದ್ದಾರೆ. ಅಂತಹ ಮೂರ್ತಿ ಅವರನ್ನು ಕ್ಷೇತ್ರಕ್ಕೆ ಯಾರು? ಅರ್ಹತೆ ಇಲ್ಲ ಎಂದೆಲ್ಲಾ ಮಾತನಾಡುವುದು ಎಷ್ಟು ಸರಿ? ಎಂದು ಪ್ರಶ್ನಿಸಿದರು.

ಸುದ್ದಿಗೋಷ್ಟಿಯಲ್ಲಿ ಗ್ರಾ.ಪಂ‌.ಮಾಜಿ ಅಧ್ಯಕ್ಷರಾದ ಗಿರೀಶ್, ಗಂಗಾಧರ್, ಚಂದ್ರಶೇಖರ್, ಸಿದ್ದಯ್ಯ ಮತ್ತಿತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!