Saturday, November 21, 2026

ಪ್ರಾಯೋಗಿಕ ಆವೃತ್ತಿ

ಕೃಷಿಯು ಜೈವಿಕ ಇಂಧನಗಳ ಉತ್ಪಾದನೆಗೆ ಸಂಪನ್ಮೂಲ ಒದಗಿಸುತ್ತಿದೆ : ಡಾ.ನಿರ್ಮಲಾನಂದ ಸ್ವಾಮೀಜಿ

ಆಹಾರ ಮತ್ತು ಇಂಧನ ಭದ್ರತೆಯು ರಾಷ್ಟ್ರದ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರ ವಹಿಸುತ್ತಿದ್ದು ಕೃಷಿಯು ಜೈವಿಕ ಇಂಧನಗಳ ಉತ್ಪಾದನೆಗೆ ಅಗತ್ಯ ಸಂಪನ್ಮೂಲಗಳನ್ನು ಒದಗಿಸುತ್ತಿದೆ ಎಂದು ಅದಿಚುಂಚನಗಿರಿ ಮಠಾಧ್ಯಕ್ಷ ಡಾ.ನಿರ್ಮಲಾನಂದ ಸ್ವಾಮೀಜಿ ತಿಳಿಸಿದರು.

ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯ ಮಂಡ್ಯದಲ್ಲಿ ಆಯೋಜಿಸಲಾಗಿರುವ ಕೃಷಿ ಮೇಳ-2025, ಮಂಡಳಿ, ಜೈವಿಕ ಇಂಧನ ಉದ್ಯಾನ, ಹಾಸನ, ಜೈವಿಕ ಇಂಧನ ಮಾಹಿತಿ, ಸಂಶೋಧನೆ ಹಾಗೂ ಪ್ರಾತ್ಯಕ್ಷಿಕೆ ಕೇಂದ್ರ, ಪಿಇಎಸ್ ಮಂಡ್ಯ ಸಹಯೋಗದಲ್ಲಿ ನಿರ್ಮಿಸಿರುವ ಜೈವಿಕ ಇಂಧನ ಪ್ರಾತ್ಯಕ್ಷಿಕೆ ಮಳಿಗೆಯನ್ನು ಉದ್ಘಾಟಿಸಿ ಮಾತನಾಡಿದರು.

ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ   ಎಸ್ ಈ  ಸುಧೀಂದ್ರ ಅವರು ನೂತನ ಮಂಡ್ಯ ಕೃಷಿ ವಿಶ್ವವಿದ್ಯಾಲಯದ ಪ್ರಪ್ರಥಮ ಕೃಷಿ ಮೇಳ – 2025 ರ ಘೋಷವಾಕ್ಯ ‘ ಸಮಗ್ರ ಕೃಷಿಯಿಂದ ಸುಸ್ಥಿರತೆ’ ಈ ಘೋಷ ವಾಕ್ಯವು ಕೃಷಿಯು ಜೈವಿಕ ಇಂಧನ ಕ್ಷೇತ್ರದ  ಬೆಳವಣಿಗೆಯಲ್ಲಿ ಪೂರಕವಾಗಿರುವುದರ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದರು.

ರಾಷ್ಟ್ರದ ಜೈವಿಕ ಇಂಧನ ಉತ್ಪಾದನೆಯಲ್ಲಿ ಮಂಡ್ಯ ಜಿಲ್ಲೆಯು 1939 ರ ಎರಡನೇ ಮಹಾಯುದ್ಧದ ಸಂದರ್ಭದಲ್ಲಿ ಮೊಟ್ಟಮೊದಲ ಬಾರಿಗೆ ಬ್ರಿಟಿಷ್ ವಸಾಹತುವಾಗಿದ್ದ ಬಾಂಬೆ ಪ್ರೆಸಿಡೆನ್ಸಿ ಎಂದು ಕರೆಯಲ್ಪಡುತ್ತಿದ್ದ ಮುಂಬೈ ಯಲ್ಲಿನ ಸಾರ್ವಜನಿಕ ಸಾರಿಗೆ ರೆಡ್ ಬಸ್ ಗಳಿಗೆ ಎಥನಾಲ್ ಪೂರೈಕೆ ಮಾಡಿದ್ದನ್ನು ಪ್ರಸ್ಥಾಪಿಸಿ ಇಂದು ರಾಷ್ಟ್ರಮಟ್ಟದಲ್ಲಿ ಪೆಟ್ರೋಲ್ ನಲ್ಲಿ ಶೇ 20ರ ಮಿಶ್ರಣ ಗುರಿಯನ್ನು 2025 ರಲ್ಲಿ ಸಾಧಿಸಿರುವುದಕ್ಕೆ  ಸಕ್ಕರೆ ನಾಡು ಮಂಡ್ಯ ಜಿಲ್ಲೆಯ ಕೊಡುಗೆಯು  ಅಮೂಲ್ಯವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ