Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಪರಿಶಿಷ್ಟರ ಹಣ ಅನ್ಯ ಉದ್ದೇಶಕ್ಕೆ ಬಳಕೆ: ಡಾ.ಇಂದ್ರೇಶ್

ಪರಿಶಿಷ್ಟ ಜಾತಿ ಮತ್ತು ಪಂಗಡದವರ ಅಭಿವೃದ್ಧಿಗೆ ಮೀಸಲಿರಿಸಿದ್ದ ₹ 11 ಸಾವಿರ ಕೋಟಿಗೂ ಹೆಚ್ಚು ಮೊತ್ತದ ಹಣವನ್ನು ಅನ್ಯ ಉದ್ದೇಶ ಗಳಿಗೆ ಕಾಂಗ್ರೆಸ್ ಸರ್ಕಾರ ಬಳಸಿಗೊಂಡಿದೆ ಎಂದು ಮಂಡ್ಯ ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ.ಎನ್.ಎಸ್.ಇಂದ್ರೇಶ್ ಆರೋಪಿಸಿದರು.

ಮಂಡ್ಯದಲ್ಲಿ ಸುದ್ದಿಗೋ‍ಷ್ಠಿಯಲ್ಲಿ ಮಾತನಾಡಿದ ಅವರು, ದಲಿತರು, ಶೋಷಿತ ವರ್ಗದವರ ಕುರಿತು ಮಾತನಾಡುವ ಸಿದ್ದರಾಮಯ್ಯನವರು ತಳ ಸಮುದಾಯಗಳಿಗೆ ಅನ್ಯಾಯ ಮಾಡುತ್ತಿದ್ದಾರೆಂದರು.

ರಾಜ್ಯ ಕಾಂಗ್ರೆಸ್ ಸರ್ಕಾರ ಬರ ಪರಿಹಾರ ಕಾರ್ಯನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದ್ದು, ಈಗಾಗಲೇ ರಾಜ್ಯದಲ್ಲಿ 875ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಡೀ ರಾಜ್ಯದಲ್ಲಿ ಬರಗಾಲ ಆವರಿಸಿ ಕುಡಿಯುವ ನೀರಿಗೆ ಆಹಾಕಾರ ಉಂಟಾಗಿದ್ದು, ಹೆಚ್ಚು ರೈತರು ಗುಳೇ ಹೋಗುತ್ತಿದ್ದಾರೆ. ಆದರೂ, ಸರ್ಕಾರ ರೈತರ ಬಗ್ಗೆ ಯಾವುದೇ ಕಾಳಜಿ ವಹಿಸಿಲ್ಲ ಎಂದರು.

ರಾಜ್ಯ ಸರ್ಕಾರವು ಬರ ಪರಿಹಾರಕ್ಕಾಗಿ ಹಣ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ, ಇದುವರೆಗೂ ನಯಾಪೈಸೆ ಹಣ ನೀಡಿಲ್ಲ, ರಾಜ್ಯದ ಜನತೆ 26 ಬಿಜೆಪಿ ಸಂಸದರನ್ನು ಆರಿಸಿ ಕಳುಹಿಸಿದ್ದಾರೆ, ಹೀಗಿರುವಾಗ ಕೇಂದ್ರ ಸರ್ಕಾರವೇಕೇ ಸ್ಪಂದಿಸುತ್ತಿಲ್ಲ ಎಂಬ ಸುದ್ದಿಗಾರರ ಪ್ರಶ್ನೆಗೆ, ಕೇಂದ್ರ ಸರ್ಕಾರದ ಇತರೆ ಯೋಜನೆಗಳನ್ನು ಡಾ.ಇಂದ್ರೇಶ್ ಪ್ರಸ್ತಾಪಿಸಿದರೆ ಹೊರತು, ನಿರ್ದಿಷ್ಟ ಪ್ರಶ್ನೆಗೆ ಉತ್ತರಿಸುವಲ್ಲಿ ವಿಫಲರಾದರು.

ಗೋಷ್ಠಿಯಲ್ಲಿ ರಾಜ್ಯ ಪರಿಶಿಷ್ಟ ಮೋರ್ಚಾ ಕಾರ್ಯದರ್ಶಿ ಪರಮಾನಂದ, ಜಿಲ್ಲಾ ಪ್ರಧಾನ ಕಾರ‍್ಯದರ್ಶಿ ಆನಂದ, ಜಿಲ್ಲಾ ವಕ್ತಾರ ಸಿ.ಟಿ. ಮಂಜುನಾಥ್, ಬಾಲು, ನಾಗಾನಂದ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!