ಮಂಡ್ಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಪಿ.ಸಿ ಜಾಫರ್ ಅವರು, ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೊರಾರ್ಜಿ ದೇಸಾಯಿ ಶಾಲೆ, ಹೆಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹನುಮಂತಪುರ ಕಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು.
ನಂತರ ಹೆಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪಿಯ ಅಮೃತ ಸರೋವರ ಕಾಮಗಾರಿ, ಡಿಜಿಟಲ್ ಲೈಬ್ರರಿಯನ್ನು ಪರಿಶೀಲಿಸಿದರು.
ಕದಲಿಪುರ ಅಂಗನವಾಡಿ, ಹನುಮಂತಪುರ ಶಾಲೆಯ ಡಿಜಿಟಲ್ ಕ್ಲಾಸ್ ಹಾಗೂ ಮದ್ದೂರು ತಾಲ್ಲೂಕಿನ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಕುಮಾರ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶೇಖ್ ತನ್ವೀರ್ ಆಶಿಫ್ ಉಪಸ್ಥಿತರಿದ್ದರು.