Thursday, November 19, 2026

ಪ್ರಾಯೋಗಿಕ ಆವೃತ್ತಿ

ಇಲಾಖಾ ಅಧಿಕಾರಿಗಳು ಪಾರದರ್ಶಕವಾಗಿ ಕಾರ್ಯನಿರ್ವಹಿಸಿ : ಡಾ:ಪಿ.ಸಿ.ಜಾಫರ್

ಇಲಾಖಾ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದಂತೆ ಕಾರ್ಯ ಯೋಜನೆ ರೂಪಿಸಿ, 2023-24 ನೇ ಸಾಲಿನ ಅನುದಾನ ನಿಗಧಿಯಾಗಿದೆ, ಕೆಲಸಗಳನ್ನು ಪಾರದರ್ಶಕವಾಗಿ ನಿರ್ವಹಿಸಿ ಎಂದು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಪಿ.ಸಿ ಜಾಫರ್ ತಿಳಿಸಿದರು.

ಬೆಂಗಳೂರಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಸಾಮಾನ್ಯ ಸಭೆ ನಡೆಸಿ ಮಾತನಾಡಿದ ಅವರು, ಇಲಾಖೆಯ ಮುಖ್ಯಸ್ಥರು ಕಾಮಗಾರಿಗಳನ್ನು ನಡೆಸುವಾಗ ಸರ್ಕಾರದ ನಿಯಮಗಳನ್ನು ಪಾಲಿಸಬೇಕು. ಜಿಲ್ಲಾ ಪಂಚಾಯತ್ ಅನುದಾನದ ಟೆಂಡರ್ ಮಾಡುವಾಗ ಕಡತಗಳನ್ನು ಉಪಕಾರ್ಯದರ್ಶಿಗಳಿಂದ ಅನುಮೋದನೆ ಪಡೆಯಲು ತಿಳಿಸಿದರು.

ಜಿಲ್ಲೆಯಲ್ಲಿ ಕಡಿಮೆ ಅನುದಾನದಿಂದ ಕೆಲವು ಸಣ್ಣ ದುರಸ್ತಿ ಕಾಮಗಾರಿ, ಯೋಜನೆ ಕೈಗೊಂಡರೆ ಸಾರ್ವಜನಿಕರಿಗೆ ಹೆಚ್ಚು ಉಪಯುಕ್ತತೆಯಾಗುವ ಸಾಧ್ಯತೆ ಇರುತ್ತದೆ. ಅವುಗಳನ್ನು ಪಟ್ಟಿ ಮಾಡಿ ಚರ್ಚಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸೀಫ್, ಉಪಕಾರ್ಯದರ್ಶಿ ಸಂಜೀವಪ್ಪ, ಬಾಬು, ಮುಖ್ಯ ಯೋಜನಾಧಿಕಾರಿ ಧನುಷ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ