Friday, September 20, 2024

ಪ್ರಾಯೋಗಿಕ ಆವೃತ್ತಿ

ಮದ್ದೂರು| ಪಶುಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ಪ್ರವೀಣ್ ಕುಮಾರ್ ಸಸ್ಪೆಂಡ್

ಮಂಡ್ಯ ನಗರದ ಪಶು ಆಸ್ಪತ್ರೆಯಲ್ಲಿ ಸಹಾಯಕ ನಿರ್ದೇಶಕರಾಗಿದ್ದ ವೇಳೆ ಅಧಿಕಾರ ದುರುಪಯೋಗಪಡಿಸಿಕೊಂಡು ಹಣ ದುರ್ಬಳಕೆ ಮಾಡಿ ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡಿದ್ದ ಮದ್ದೂರು ಪಶು ಆಸ್ಪತ್ರೆ ಮುಖ್ಯವೈದ್ಯಾಧಿಕಾರಿ ಡಾ.ಬಿ.ಬಿ ಪ್ರವೀಣ್ ಕುಮಾರ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಮಂಡ್ಯ ಪಶು ಆಸ್ಪತ್ರೆಯಲ್ಲಿ ಸಹಾಯಕ ನಿರ್ದೇಶಕರಾಗಿದ್ದ ಡಾ.ಬಿ.ಬಿ ಪ್ರವೀಣ್ ಕುಮಾರ್ 2018-19ನೇ ಸಾಲಿನಲ್ಲಿ ಎಸ್ ಸಿ ಪಿ ಹಾಗೂ ಟಿ ಎಸ್ ಪಿ ಯೋಜನೆಯಡಿಯಲ್ಲಿ 500 ಸಂಖ್ಯೆಯ ಮಾಂಸದ ಕೋಳಿ ಘಟಕ ಸ್ಥಾಪಿಸಲು ಇರುವ ಯೋಜನೆಯಲ್ಲಿ ಫಲಾನುಭವಿಗಳನ್ನು ಆಯ್ಕೆ ಮಾಡದೆ ಮತ್ತು ಸದರಿ ಫಲಾನುಭವಿಗಳಿಗೆ ಸಹಾಯಧನವನ್ನು ಮಂಜೂರು ಮಾಡದೇ ಕೇವಲ ನಕಲಿ ದಾಖಲೆಗಳನ್ನು ನಮೂದಿಸಿ ಸರ್ಕಾರಕ್ಕೆ ವರದಿ ಸಲ್ಲಿಸಿ ಪರಿಶಿಷ್ಠ ಜಾತಿಗೆ ಮೀಸಲಿರಿಸಿದ ಯೋಜನಾ ಹಣವನ್ನು ದುರುಪಯೋಗ ಮಾಡಿರುವುದು ತನಿಖೆಯಲ್ಲಿ ಮೇಲ್ನೋಟಕ್ಕೆ ಕಂಡುಬಂದಿದೆ.

nudikarnataka.com

ಡಾ.ಬಿ.ಬಿ ಪ್ರವೀಣ್ ಕುಮಾರ್ ವಿರುದ್ಧದ ಆರೋಪಗಳ ಕುರಿತಂತೆ ಶಿಸ್ತು ಪ್ರಕರಣವನ್ನು ಬಾಕಿ ಇರಿಸಿ ತಕ್ಷಣದಿಂದ ಸೇವೆಯಿಂದ ಅಮಾನತು ಮಾಡಿ ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅವರು ಆದೇಶಿಸಿದ್ದು, ನಂತರ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ತಿಳಿಸಿದ್ದಾರ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!