Saturday, May 18, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಕೆ.ಸಿಂಗಾರಿಗೌಡ ಪುಸ್ತಕ ಪ್ರಶಸ್ತಿ- ಡಾ. ರಾಗೌ ಸಾಹಿತ್ಯ ಪ್ರಶಸ್ತಿ ಪ್ರದಾನ

ಕರ್ನಾಟಕ ಸಂಘ, ಎಂ.ಎಲ್. ಶ್ರೀಕಂಠೇಗೌಡ ಸಂಶೋಧನಾ ಕೇಂದ್ರದ ವತಿಯಿಂದ ನ. 20ರಂದು ಸಂಜೆ 5.30ಕ್ಕೆ ನಗರದ ಕೆ.ವಿ. ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಕೆ.ಸಿಂಗಾರಿಗೌಡ ಪುಸ್ತಕ ಪ್ರಶಸ್ತಿ ಮತ್ತು ಡಾ. ರಾಗೌ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಪ್ರೊ. ಬಿ.ಜಯಪ್ರಕಾಶಗೌಡ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಪರ ಜಿಲ್ಲಾಧಿಕಾರಿ ಡಾ. ಎಚ್.ಎಲ್. ನಾಗರಾಜು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿ.ವಿ. ಕುಲಪತಿ ಡಾ. ನಾಗೇಶ್ ವಿ. ಬೆಟ್ಟಕೋಟೆ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದರು.

ಬೆಂಗಳೂರಿನ ಬಿ.ಎಂ.ಶ್ರೀ ಪ್ರತಿಷ್ಠಾನದ ಅಧ್ಯಕ್ಷ ಡಾ. ಭೈರಮಂಗಲ ರಾಮೇಗೌಡ ಅವರಿಗೆ ಡಾ. ರಾಗೌ ಸಾಹಿತ್ಯ ಪ್ರಶಸ್ತಿ ಹಾಗೂ ಕೆ. ಸಿಂಗಾರಿಗೌಡ ಪುಸ್ತಕ ಪ್ರಶಸ್ತಿಯನ್ನು ಖ್ಯಾತ ಸಾಹಿತಿ ತೈಲೂರು ವೆಂಕಟಕೃಷ್ಣ ನೀಡಲಾಗುತ್ತಿದೆ. ಪ್ರಶಸ್ತಿ ಪುರಸ್ಕೃತರಿಗೆ 15 ಸಾವಿರ ನಗದು ಪ್ರಶಸ್ತಿ ಫಲಕ ನೀಡಿ ಗೌರವಿಸಲಾಗುವುದು. ಸಾಹಿತಿ ಡಾ. ರಾಗೌ ಅವರು ಸಮಾರಂಭದಲ್ಲಿ ಭಾಗವಹಿಸುವರು ಎಂದರು.

ಹಸ್ತಪ್ರತಿ ಸಮ್ಮೇಳನ

ಕನ್ನಡ ವಿಶ್ವವಿದ್ಯಾಲಯ, ಹಂಪಿ, ಹಸ್ತಪ್ರತಿಶಾಸ್ತ್ರ ವಿಭಾಗ ಹಾಗೂ ಕರ್ನಾಟಕ ಸಂಘ, ಎಚ್.ಕೆ. ವೀರಣ್ಣಗೌಡ ಕಾಲೇಜು ಮದ್ದೂರು ಇವರ ವತಿಯಿಂದ ನ. 17, 18ರಂದು ನಗರದ ಕೆ.ವಿ. ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಅಖಿಲ ಕರ್ನಾಟಕ ಇಪ್ಪತ್ತನೆಯ ಹಸ್ತಪ್ರತಿ ಸಮ್ಮೇಳನ ನಡೆಯಲಿದೆ ಎಂದು ತಿಳಿಸಿದರು.

ಬೆಳಗ್ಗೆ 10.30ಕ್ಕೆ ನಡೆಯುವ ಸಮಾರಂಭವನ್ನು ನಿವೃತ್ತ ಪ್ರಾಂಶುಪಾಲ ಡಾ. ಮ. ರಾಮಕೃಷ್ಣ ಉದ್ಘಾಟಿಸುವರು. ಕನ್ನಡ ವಿವಿ ಕುಲಪತಿ ಡಾ. ಡಿ.ವಿ. ಪರಮಶಿವಮೂರ್ತಿ ಅಧ್ಯಕ್ಷತೆ ವಹಿಸುವರು. ಹಿರಿಯ ವಿದ್ವಾಂಸ ಡಾ. ರಾಮೇಗೌಡ ಸಮ್ಮೇಳನಾಧ್ಯಕ್ಷರ ನುಡಿಯನ್ನಾಡುವರು. ಹಸ್ತಪ್ರತಿಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಕೆ.ರವೀಂದ್ರ ಪ್ರಾಸ್ತಾವಿಕವಾಗಿ ಮಾತನಾಡುವರು ಎಂದರು.

ಡಾ. ಎಫ್.ಟಿ. ಹಳ್ಳಿಕೇರಿ ಅವರ ಹಸ್ತಪ್ರತಿ ವ್ಯಾಸಂಗ-32 ಹಾಗೂ ಡಾ. ಗುರುಪಾದ ಮರಿಗುದ್ದಿ ಅವರ ಡಾ. ರಾಗೌ ಸಾಹಿತ್ಯ ಮಂಥನ ಪುಸ್ತಕಗಳನ್ನು ನಿವೃತ್ತ ಪ್ರಾಧ್ಯಾಪಕ ಡಾ. ಎನ್.ಎಂ. ತಳವಾರ ಪುಸ್ತಕ ಬಿಡುಗಡೆ ಮಾಡುವರು. ಕರ್ನಾಟಕ ಸಂಘದ ಅಧ್ಯಕ್ಷ ಡಾ. ಜಯಪ್ರಕಾಶಗೌಡ, ಯುವ ಮುಖಂಡ ಗುರುಕುಮಾರ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದರು.

ಮಧ್ಯಾಹ್ನ 2.30ಕ್ಕೆ ಡಾ. ಎಲ್. ಬಸವರಾಜು ಅವರ ಸಾಹಿತ್ಯ ಸಂಸ್ಮರಣೆ-1 ಗೋಷ್ಠಿ ನಡೆಯಲಿದೆ. ಮಧ್ಯಾಹ್ನ 4 ಗಂಟೆಗೆ ಡಾ. ಎಲ್. ಬಸವರಾಜು ಅವರ ಸಾಹಿತ್ಯ ಸಂಸ್ಮರಣೆ-2 ಗೋಷ್ಠಿ ಹಾಗೂ ಬೆಳಗ್ಗೆ 10 ಗಂಟೆಗೆ ಹಿರಿಯ ವಿದ್ವಾಂಸ ಡಾ. ಎನ್.ಎಸ್. ತಾರಾನಾಥ ಅವರು ಪ್ರೊ. ರಾಗೌ ಅವರ ಸಮಗ್ರ ಸಾಹಿತ್ಯ ಕುರಿತು ಉಪನ್ಯಾಸ ನಡೆಸಿಕೊಡುವರು. ಡಾ. ಜಯಪ್ರಕಾಶಗೌಡ ಅಧ್ಯಕ್ಷತೆ ವಹಿಸುವರು. ಬೆಳಗ್ಗೆ 11.30ಕ್ಕೆ ನಡೆಯಲಿದ್ದು, ಡಾ. ವೈ.ಸಿ. ಭಾನುಮತಿ ಅವರು ಮಂಡ್ಯ ಜಿಲ್ಲೆಯ ಹಸ್ತಪ್ರತಿ ಸಂಪತ್ತು ಕುರಿತು ಗೋಷ್ಠಿ ನಡೆಯಲಿದ್ದು, ಡಾ. ಸಣ್ಣಪಾಪಯ್ಯ ಪ್ರತಿಕ್ರಿಯಿಸುವರು. ಮಧ್ಯಾಹ್ನ 12.30ಕ್ಕೆ ಪ್ರಾಚೀನ ಕಾವ್ಯ ಪರಿಷ್ಕರಣೆ ಕುರಿತು 5ನೇ ಗೋಷ್ಠಿ ನಡೆಯಲಿದೆ ಎಂದರು.

ಮಧ್ಯಾಹ್ನ 2.30ಕ್ಕೆ ಹಿರಿಯ ವಿದ್ವಾಂಸ ಪ್ರೊ. ಒ.ಎಲ್. ನಾಗಭೂಷಣಸ್ವಾಮಿ ಸಮಾರೋಪ ನುಡಿಯನ್ನಾಡುವರು. ಹಿರಿಯ ವಿದ್ವಾಂಸ ಡಾ. ರಾಮೇಗೌಡ (ರಾಗೌ) ಸಮ್ಮೇಳನಾಧ್ಯಕ್ಷರ ನುಡಿಯನ್ನಾಡುವರು. ಕರ್ನಾಟಕ ಸಂಘದ ಉಪಾಧ್ಯಕ್ಷ ಡಾ. ಎಚ್.ಎಸ್. ಮುz್ದೆÃಗೌಡ, ಎಚ್.ಕೆ.ವೀರಣ್ಣಗೌಡ ಕಾಲೇಜಿನ ಕರ‍್ಯದರ್ಶಿ ಸಿ. ಅಪೂರ್ವಚಂದ್ರ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಕನ್ನಡ ವಿವಿ ಕುಲಸಚಿವ ಡಾ. ವಿಜಯ್ ಪೂಣಚ್ಚ ತಂಬAಡ ಅಧ್ಯಕ್ಷತೆ ವಹಿಸುವರು ಎಂದು ತಿಳಿಸಿದರು.

ಗೋಷ್ಠಿಯಲ್ಲಿ ಕರ್ನಾಟಕ ಸಂಘದ ಕಾರ‍್ಯದರ್ಶಿ ಸೋಮಶೇಖರ್, ನಿರ್ದೇಶಕ ನಾಗಪ್ಪ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!