Tuesday, November 24, 2026

ಪ್ರಾಯೋಗಿಕ ಆವೃತ್ತಿ

ಡಾ.ಸದಾಶಿವ ಆಯೋಗ ವರದಿ ಜಾರಿಗೆ ಒತ್ತಾಯ

ಡಾ. ಸದಾಶಿವ ಆಯೋಗ ವರದಿ ಜಾರಿಗಾಗಿ ಒತ್ತಾಯಿಸಿ ಡಾ.ಬಾಬು ಜಗಜೀವನರಾಂ ವಿಚಾರ ವೇದಿಕೆ ವತಿಯಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.

ಮಳವಳ್ಳಿ ಪಟ್ಟಣದ ಸಾರಿಗೆ ಬಸ್ ನಿಲ್ದಾಣದಿಂದ ಹೊರಟ ಡಾ. ಬಾಬು ಜಗಜೀವನರಾಂ ವಿಚಾರ ವೇದಿಕೆಯ ಕಾರ್ಯಕರ್ತರು ಅಧ್ಯಕ್ಷ ಮಂಜು ನೇತೃತ್ವದಲ್ಲಿ ಸರ್ಕಾರದ ವಿರುದ್ದ ಘೋಷಣೆ ಕೂಗಿದರು.

ಈ ವೇಳೆ ಮಂಜುನಾಥ್ ಕುಮಾರ್ ಮಾತನಾಡಿ , ಡಾ.ಸದಾಶಿವ ಆಯೋಗದ ವರದಿಯಂತೆ ಸರ್ಕಾರ ಈ ಕೂಡಲೇ ಒಳಮೀಸಲಾತಿ ಜಾರಿ ಮಾಡಬೇಕು‌ ಇಲ್ಲದಿದ್ದರೆ ‌ಮುಂದಿನ ಚುನಾವಣೆಯಲ್ಲಿ ತಕ್ಕಪಾಠ ಕಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಬಳಿಕ ತಹಸೀಲ್ದಾರ್ ಕಚೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಹರೀಶ್, ಚಂದ್ರು, ಕುಮಾರ್, ಸತೀಶ್, ಮುತ್ತುರಾಜು,ಮಂಜು, ಸಿದ್ದರಾಜು ಸೇರಿದಂತೆ ಹಲವರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ