Tuesday, September 17, 2024

ಪ್ರಾಯೋಗಿಕ ಆವೃತ್ತಿ

ಡಾ.ಸರ್ವಪಲ್ಲಿ ರಾಧಾಕೃಷ್ಣನ್ ದೊಡ್ಡ ವಿದ್ವಾಂಸ- ತತ್ವಜ್ಞಾನಿ: ರವಿಕುಮಾರ್

ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರು ದೇಶದ ದೊಡ್ಡ ವಿದ್ವಾಂಸ ಹಾಗೂ ತತ್ವಜ್ಞಾನಿ ಆಗಿದ್ದರು. ಶಿಕ್ಷಕರ ಬಗ್ಗೆ ಅಪಾರವಾದ ಪ್ರೀತಿಯನ್ನು ಇಟ್ಟುಕೊಂಡಿದ್ದರು ಅವರ ಜನ್ಮ ದಿನಾಚರಣೆಯನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸಿ ಎಂದು ತಿಳಿಸಿದ ಮಹಾನ್ ವ್ಯಕ್ತಿತ್ವ ಅವರದ್ದಾಗಿದೆ ಎಂದು ಮಂಡ್ಯ ಶಾಸಕ ಪಿ ರವಿಕುಮಾರ್ ತಿಳಿಸಿದರು.

ಮಂಡ್ಯನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ – 2024 ರ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಹಾಗೂ ನಿವೃತ್ತ ಶಿಕ್ಷಕರ ಅಭಿನಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರತಿ ವರ್ಷ ಸೆಪ್ಟೆಂಬರ್ 5 ರಂದು ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಶಿಕ್ಷಕರ ಆತ್ಮ ಗೌರವಕ್ಕೆ ಭದ್ರ ಬುನಾದಿಯನ್ನು ಹಾಕಿಕೊಟ್ಟಂತ ವ್ಯಕ್ತಿ ಡಾ ಸರ್ವಪಲ್ಲಿ ರಾಧಾಕೃಷ್ಣನ್ ರವರು ಎಂದು ಹೇಳಿದರು.

nudikarnataka.com

ಪ್ರತಿ ಮಕ್ಕಳ ಎರಡನೇ ತಾಯಿಯಾಗಿ, ಗುರುವಾಗಿ ತಿದ್ದುತ್ತಿರುವ ಹಾಗೂ ಮಕ್ಕಳ ಜೀವನದ ಬಾಳಿಗೆ ಬೆಳಕಾಗಿ, ಯಾವುದೇ ಆಸೆ ಆಕಾಂಕ್ಷೆಗಳನ್ನು ಇಟ್ಟುಕೊಳ್ಳದೇ ಸಮಾಜದಲ್ಲಿ ಒಬ್ಬ ಉತ್ತಮ ಮನುಷ್ಯನನ್ನಾಗಿ ರೂಪಿಸುತ್ತಿರುವವರು ಎಂದರೆ ಶಿಕ್ಷಕರು ಮಾತ್ರ. ಆದ್ದರಿಂದ ಇಡೀ ಭಾರತ ದೇಶವು ಶಿಕ್ಷಕರ ದಿನವನ್ನು ಆಚರಿಸುತ್ತಿದ್ದು, ಇಡೀ ಶಿಕ್ಷಕ ವೃಂದಕ್ಕೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳು ಎಂದು ತಿಳಿಸಿದರು.

ಶಿಕ್ಷಕರ ಸಂಘದ ಅಧ್ಯಕ್ಷರಾದ ನಾಗೇಶ್ ಗೌಡ ರವರು ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ 3 ಬೇಡಿಕೆಗಳನ್ನು ಅವರ ಮುಂದಿಟ್ಟಿದ್ದಾರೆ. ಸರ್ಕಾರದ ಯೋಜನೆಗಳಾದ 5 ಗ್ಯಾರಂಟಿಗಳು ಹೇಗೆ ಚಾಲ್ತಿಯಲ್ಲಿದ್ದು, ಅದು ನಿಲ್ಲುವುದಿಲ್ಲ, ಹಾಗೆಯೇ ಶಿಕ್ಷಕರ ಮೂರು ಬೇಡಿಕೆಗಳನ್ನು ಸರ್ಕಾರ ಜಾರಿಗೆ ತರುತ್ತದೆ. ಅದರಲ್ಲಿ ಯಾವ ಸಂಶಯವು ಬೇಡ, ನೀವು ಸರ್ಕಾರದ ಮೇಲೆ ನಂಬಿಕೆ ಇಟ್ಟು ಮಕ್ಕಳಿಗೆ ಒಳ್ಳೆಯ ವಿದ್ಯಾಬ್ಯಾಸ ನೀಡಿ ಮಕ್ಕಳನ್ನು ಭಾರತ ದೇಶದ ವೀರ ಯೋಧರನ್ನಾಗಿ ಮಾಡಿ ಎಂದು ತಿಳಿಸಿದರು.

ವಿದ್ಯಾರ್ಥಿಗಳ ಫಲಿತಾಂಶವನ್ನು ಉತ್ತಮಗೊಳಿಸುವಲ್ಲಿ ಶಿಕ್ಷಕರ ಪರಿಶ್ರಮ ಅತ್ಯವಶ್ಯಕ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಸಂದೇಶದ ಮೂಲಕ ಶಿಕ್ಷಕರ ದಿನಾಚರಣೆಗೆ ಎಲ್ಲಾ ಶಿಕ್ಷಕರಿಗೆ ಶುಭ ಹಾರೈಸಿದ್ದು, ಸದರಿ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಫಲಿತಾಂಶ ಉತ್ತಮಗೊಳಿಸಲು ಶಿಕ್ಷಕರ ಪರಿಶ್ರಮ ಅತ್ಯವಶ್ಯಕ ಎಂದು ಸಂದೇಶದಲ್ಲಿ ತಿಳಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅವರು ಕಾರ್ಯಕ್ರಮದಲ್ಲಿ ತಿಳಿಸಿದರು.

ಸಿ.ಆರ್.ಎಸ್ ಅನುದಾನದಲ್ಲಿ 200 ಕ್ಕೂ ಹೆಚ್ಚು ಮಕ್ಕಳು ದಾಖಲಾಗಿರುವ ಶಾಲೆಗಳ ಅಭಿವೃದ್ಧಿಗೆ ವಿಸ್ತೃತ ಯೋಜನೆ ರೂಪಿಸಲಾಗುತ್ತಿದೆ ಎಂದರು.

ಸಮಾಜದ ಪರಿವರ್ತನೆ ಶಿಕ್ಷಕರಿಂದ ಮಾತ್ರ ಸಾಧ್ಯ

ಸಮಾಜದಲ್ಲಿ ಉತ್ತಮ ಹಾಗೂ ಆದರ್ಶ ಪ್ರಜೆಗಳನ್ನು ರೂಪಿಸುವವರು ಶಿಕ್ಷಕರಾಗಿದ್ದು, ಇಡೀ ಸಮಾಜದಲ್ಲಿ ಉತ್ತಮ ಪರಿವರ್ತನೆ ಶಿಕ್ಷಕರಿಂದ ಮಾತ್ರ ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ತಿಳಿಸಿದರು.

ತಂದೆ, ತಾಯಿ, ಗುರುಗಳು ಈ ಮೂವರಿಗಿಂತ ಮಿಗಿಲಾದ ವ್ಯಕ್ತಿಗಳಿಲ್ಲ. ಪ್ರತಿಯೊಬ್ಬರೂ ತಮ್ಮ ತಂದೆ, ತಾಯಿಯನ್ನು ಬಿಟ್ಟರೆ ಶಿಕ್ಷಕರಿಗೆ ಮಾತ್ರ ಪೂಜ್ಯಸ್ಥಾನ ನೀಡುತ್ತಾರೆ, ಪ್ರತಿಯೊಬ್ಬ ಶಿಕ್ಷಕರು ವಿದ್ಯಾರ್ಥಿಗಳಿಗೆ ಗುಣಾತ್ಮಕ ಪಾಠವನ್ನು ಬೋಧಿಸುವ ಮೂಲಕ ಮೌಲ್ಯಯುತ ಶಿಕ್ಷಣವನ್ನು ನೀಡುವರು. ಗುರುವಿನ ಸ್ಥಾನಕ್ಕೆ ಅದರದ್ದೇ ಆದ ಮಹತ್ವವಿದೆ ಎಂದರು.

ಶಿಕ್ಷಕರು ರಾಷ್ಟ್ರದ ಮಹಾನ್ ನಿರ್ಮಾತೃಗಳು

ತುಮಕೂರಿನ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಸ್ವಾಮಿ ವೀರೇಶಾನಂದ ಸರಸ್ವತೀ ಸ್ವಾಮೀಜಿ ಶಿಕ್ಷಕರ ಮುಂದಿರುವ ಸವಾಲುಗಳು ಮತ್ತು ಸರಿಯುತ್ತರ ಎಂಬ ವಿಷಯದ ಬಗ್ಗೆ ಮಾತನಾಡಿ, ಶಿಕ್ಷಕರು ರಾಷ್ಟ್ರದ ಮಹಾನ್ ನಿರ್ಮಾತೃಗಳಾಗಿದ್ದಾರೆ. ಪೋಷಕರು ನಿಮ್ಮನ್ನು ನಂಬಿ ತಮ್ಮ ಮಕ್ಕಳನ್ನು ನಿಮ್ಮ ಬಳಿಗೆ ಕಳುಹಿಸುತ್ತಾರೆ. ಅವರನ್ನು ತಿದ್ದಿ ತೀಡಿ ಉತ್ತಮ ನಾಯಕರನ್ನಾಗಿ ಮಾಡಿ ಎಂದರು.

ಇದೇ ಸಂದರ್ಭದಲ್ಲಿ ಗಣ್ಯರಿಂದ ಡಾ ಸರ್ವಪಲ್ಲಿ ರಾಧಾಕೃಷ್ಣನ್ ರವರ ಭಾವಚಿತ್ರವನ್ನು ಅನಾವರಣಗೊಳಿಸಿ ಪುಷ್ಪಾರ್ಚನೆ ನೆರವೇರಿಸಲಾಯಿತು. ತದನಂತರ ಜಿಲ್ಲಾಮಟ್ಟದ ಉತ್ತಮ ಶಿಕ್ಷಕರಿಗೆ ಹಾಗೂ ನಿವೃತ್ತ ಶಿಕ್ಷಕರುಗಳಿಗೆ ಪ್ರಶಸ್ತಿ ವಿತರಿಸಿ ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶೇಕ್ ತನ್ವಿರ್ ಆಸೀಫ್, ರೆಡ್ ಕ್ರಾಸ್ ಸಂಸ್ಥೆಯ ಉಪಾಧ್ಯಕ್ಷೆ ಡಾ ಮೀರಾಶಿವಲಿಂಗಯ್ಯ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಂಭುಗೌಡ, ಜಿಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಪುಟ್ಟರಾಜಯ್ಯ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಕೆ ನಾಗೇಶ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಜೆ ವೈ ಮಂಜುನಾಥ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ ಚಿಕ್ಕೇಗೌಡ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಚ್ ಶಿವರಾಮೇಗೌಡ, ಡಯಟ್ ಶಿಕ್ಷಣ ಸಂಸ್ಥೆಯ ಉಪನಿರ್ದೇಶಕ ಪುರುಷೋತ್ತಮ್, ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ರಮೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ದೇವರಾಜು, ಜಿಲ್ಲಾ ಪಂಚಾಯತ್ ನ ತಾಲ್ಲೂಕು ಕಾರ್ಯ ನಿರ್ವಹಣಾಧಿಕಾರಿ, ವೀಣಾ, ಸೇರಿದಂತೆ ಎಲ್ಲಾ ಕ್ಷೇತ್ರ ಶಿಕ್ಷಕಣಾಧಿಕಾರಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!