Friday, April 19, 2024

ಪ್ರಾಯೋಗಿಕ ಆವೃತ್ತಿ

ಡಾ.ಶಂಕರೇಗೌಡರ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಬೇಡಿ

ನಿಮ್ಮೆಲ್ಲರ ನೆಚ್ಚಿನ ಡಾಕ್ಟರ್ ಶಂಕರೇಗೌಡರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗಾಗಿ ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಅವರು ಆರೋಗ್ಯವಾಗಿದ್ದು, ಯಾರೂ ಆತಂಕಪಡಬೇಕಾಗಿಲ್ಲ.

ದಯವಿಟ್ಟು ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಬಾರದು ಎಂದು ಡಾ.ಶಂಕರೇಗೌಡರ ಪತ್ನಿ ರುಕ್ಮಿಣಿ ಅವರು ಮನವಿ ಮಾಡಿದ್ದಾರೆ.

ಶಂಕರೇಗೌಡರ ಮರಣ ಹೊಂದಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಾಕುತ್ತಿರುವುದನ್ನು ನೋಡಿದರೆ ಬಹಳ ನೋವಾಗುತ್ತದೆ‌.

ಶಂಕರೇಗೌಡರು ಆರೋಗ್ಯವಾಗಿದ್ದು, ಫೋರ್ಟಿಸ್ ಆಸ್ಪತ್ರೆಯ ವೈದ್ಯ ಡಾ. ಜವಳಿಯವರ ಸೂಚನೆಯಂತೆ ದಾಖಲಾಗಿದ್ದಾರೆ.

ಜವಳಿ ಅವರು ಒಂದೆರಡು ದಿನಗಳಲ್ಲಿ ಅವರಿಗೆ ಶಸ್ತ್ರಚಿಕಿತ್ಸೆ ಮಾಡುವುದಾಗಿ ತಿಳಿಸಿದ್ದಾರೆ.ನಾಗರಿಕರು ಶಂಕರೇಗೌಡರ ಆರೋಗ್ಯದ ಬಗ್ಗೆ ಆತಂಕ ಪಡಬೇಕಾಗಿಲ್ಲ.

ಶಂಕರೇಗೌಡರನ್ನು ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ ಕರೆತರುವಾಗ ಮೈಸೂರು, ಮಂಡ್ಯ, ರಾಮನಗರ ಹಾಗೂ ಬೆಂಗಳೂರು ಗ್ರಾಮಾಂತರ ಪೊಲೀಸರು ಬಹಳ ಸಹಾಯ ಮಾಡಿದ್ದಾರೆ. ಅವರ ಉಪಕಾರವನ್ನು ಎಂದಿಗೂ ಮರೆಯುವುದಿಲ್ಲ ಎಂದು ರುಕ್ಮಿಣಿ ಶಂಕರೇಗೌಡ ಅವರು ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!