Sunday, May 19, 2024

ಪ್ರಾಯೋಗಿಕ ಆವೃತ್ತಿ

ದಕ್ಷಿಣ ಶಿಕ್ಷಕರ ಕ್ಷೇತ್ರದ ಕರಡು ಮತದಾರರ ಪಟ್ಟಿ ಪ್ರಕಟ: ಡಾ.ಹೆಚ್.ಎಲ್ ನಾಗರಾಜು

ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಕರಡು ಮತದಾರರ ಪಟ್ಟಿಯು ಬಿಡುಗಡೆಯಾಗಿದ್ದು, ಹಕ್ಕು ಮತ್ತು ಆಕ್ಷೇಪಣೆಗಳಿಗಾಗಿ ಡಿಸೆಂಬರ್ 9 ರವರೆಗೆ ಅವಕಾಶ ನೀಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಹೆಚ್ ಎಲ್ ನಾಗರಾಜು ತಿಳಿಸಿದರು.

ಇಂದು ಮಂಡ್ಯ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಸಭೆ ನಡೆಸಿ ಮಾತನಾಡಿದರು.

ಮತದಾರರ ಪಟ್ಟಿಯನ್ನು ಜಿಲ್ಲಾಧಿಕಾರಿ ಕಛೇರಿ, ಜಿಲ್ಲೆಯ 8 ಮತಗಟ್ಟೆಗಳಲ್ಲಿ (ಕೆ‌ಆರ್.ಪೇಟೆ, ನಾಗಮಂಗಲ, ಪಾಂಡವಪುರ, ಮಂಡ್ಯ, ಮದ್ದೂರು, ಶ್ರೀರಂಗಪಟ್ಟಣ, ಮಳವಳ್ಳಿ ತಾಲ್ಲೂಕು ಕಚೇರಿ ಹಾಗೂ ಮಂಡ್ಯ ತಾಲ್ಲೂಕು ಪಂಚಾಯತ್ ಕಚೇರಿ) ಯಲ್ಲಿ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದರು‌.

  • ಕೆ.ಆರ್ ಪೇಟೆ ಮತಗಟ್ಟಯಲ್ಲಿ 247 ಪುರುಷ ಹಾಗೂ 114 ಮಹಿಳಾ ಮತದಾರರು ಸೇರಿದಂತೆ ಒಟ್ಟು361 ಮತದಾರರು ಹೆಸರು ನೊಂದಾಯಿಸಿಕೊಂಡಿದ್ದಾರೆ. 
  • ನಾಗಮಂಗಲ ಮತಗಟ್ಟೆಯಲ್ಲಿ 218 ಪುರುಷ ಹಾಗೂ 108 ಮಹಿಳಾ ಮತದಾರರು ಸೇರಿದಂತೆ ಒಟ್ಟು 318 ಮತದಾರರು ಹೆಸರು ನೊಂದಾಯಿಸಿಕೊಂಡಿದ್ದಾರೆ.
  • ಪಾಂಡವಪುರ ಮತಗಟ್ಟೆ ವ್ಯಾಪ್ತಿಯಲ್ಲಿ 219 ಪುರುಷ ಹಾಗೂ 163 ಮಹಿಳಾ ಮತದಾರರು ಸೇರಿದಂತೆ ಒಟ್ಟು 382 ಮತದಾರರು ಹೆಸರು ನೊಂದಾಯಿಸಿಕೊಂಡಿದ್ದಾರೆ.
  • ಮಂಡ್ಯ ತಾಲ್ಲೂಕು ಕಚೇರಿ ಮತಗಟ್ಟೆಯಲ್ಲಿ 482 ಪುರುಷ ಹಾಗೂ 521 ಮಹಿಳಾ ಮತದಾರರು ಸೇರಿದಂತೆ ಒಟ್ಟು 1003 ಮತದಾರರು ಹೆಸರು ನೊಂದಾಯಿಸಿಕೊಂಡಿದ್ದಾರೆ.
  • ಮಂಡ್ಯ ತಾಲ್ಲೂಕು ಪಂಚಾಯತ್ ಮತಗಟ್ಟೆಯಲ್ಲಿ 351 ಪುರುಷ ಹಾಗೂ 256 ಮಹಿಳಾ ಮತದಾರರು ಸೇರಿದಂತೆ ಒಟ್ಟು 607 ಮತದಾರರು ಹೆಸರು ನೊಂದಾಯಿಸಿಕೊಂಡಿದ್ದಾರೆ.
  • ಮದ್ದೂರು ವ್ಯಾಪ್ತಿಯಲ್ಲಿ 486 ಪುರುಷ ಹಾಗೂ 351 ಮಹಿಳಾ ಮತದಾರರು ಸೇರಿದಂತೆ ಒಟ್ಟು 819 ಮತದಾರರು ಹೆಸರು ನೊಂದಾಯಿಸಿಕೊಂಡಿದ್ದಾರೆ.

    ಶ್ರೀರಂಗಪಟ್ಟಣ ವ್ಯಾಪ್ತಿಯಲ್ಲಿ 109 ಪುರುಷ ಹಾಗೂ 130 ಮಹಿಳಾ ಮತದಾರರು ಸೇರಿದಂತೆ ಒಟ್ಟು 239 ಮತದಾರರು ಹೆಸರು ನೊಂದಾಯಿಸಿಕೊಂಡಿದ್ದಾರೆ.

  • ಮಳವಳ್ಳಿ ವ್ಯಾಪ್ತಿಯಲ್ಲಿ 378 ಪುರುಷ ಹಾಗೂ 170 ಮಹಿಳಾ ಮತದಾರರು ಸೇರಿದಂತೆ ಒಟ್ಟು 548 ಮತದಾರರು ಹೆಸರು ನೊಂದಾಯಿಸಿಕೊಂಡಿದ್ದಾರೆ.
  • ಜಿಲ್ಲೆಯ ಒಟ್ಟು 8 ಮತಗಟ್ಟೆಗಳಲ್ಲಿ ಒಟ್ಟಾರೆ ಸೇರಿದಂತೆ 2472 ಪುರುಷ ಹಾಗೂ 1813 ಮಹಿಳೆಯರು ಸೇರಿದಂತೆ ಒಟ್ಟು 4277 ಮತದಾರರು ಹೆಸರು ನೊಂದಾಯಿಸಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು.

ಮುಖ್ಯ ಚುನಾವಣಾಧಿಕಾರಿಗಳ ಕಾರ್ಯಾಲಯದ ನಿರ್ದೇಶನದಂತೆ ಭಾವಚಿತ್ರವಿರುವ ಮುದ್ರಿತ ಕರಡು ಮತದಾರರ ಪಟ್ಟಿಯನ್ನು ಮತ್ತು ಭಾವಚಿತ್ರವಿಲ್ಲದ ಕರಡು ಮತದಾರರ ಪಟ್ಟಿಯ ದತ್ತಾಂಶವನ್ನು ನೋಂದಾಯಿತ ರಾಜಕೀಯ ಪಕ್ಷಗಳ ಜಿಲ್ಲಾ ಮಟ್ಟದ ಪ್ರತಿನಿಧಿಗಳಿಗೆ ವಿತರಿಸಲಾಗಿದೆ ಎಂದರು.

ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡ ಸುಂಡಹಳ್ಳಿ ಮಂಜುನಾಥ್, ಜೆಡಿಎಸ್ ಪಕ್ಷದ ಮುಖಂಡ ನವೀನ್, ಬಿಎಸ್ಪಿ ಪಕ್ಷದ ಮುಖಂಡ ದಿನೇಶ್, ಬಿಜೆಪಿ ಪಕ್ಷದ ಮುಖಂಡ ವೆಂಕಟೇಶ್, ಎಎಪಿ ಪಕ್ಷದ ಮುಖಂಡ ಬೂದನೂರು ಬೊಮ್ಮಯ್ಯ ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!