ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮಂಡ್ಯ ತಾಲ್ಲೂಕಿನ ಹಳೇ ಬೂದನೂರು ಗ್ರಾಮದ ಬಳಿ ಚರಂಡಿ ಸ್ಲಾಬ್ ಕಳಚಿ ಬಿದ್ದು ಸರ್ಕಾರಿ ಶಾಲೆಯ ಅಡುಗೆ ಸಹಾಯಕಿ ಗಾಯಗೊಂಡಿರುವ ಘಟನೆ ಜರುಗಿದೆ.
ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಅಡುಗೆ ಸಹಾಯಕಿ ಚಿಕ್ಕತಾಯಮ್ಮ ಗಾಯಗೊಂಡವರು. ಶುಕ್ರವಾರ ಬೆಳಿಗ್ಗೆ ಶಾಲೆಗೆ ಮಕ್ಕಳೊಂದಿಗೆ ಚರಂಡಿ ಮೇಲೆ ಬರುತ್ತಿದ್ದಾಗ ಸ್ಲಾಬ್ ಕುಸಿದು ಕಾಲಿಗೆ ತೀವ್ರ ಗಾಯವಾಗಿದೆ. ತಕ್ಷಣ ಸ್ಥಳೀಯ ಅಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿ ನಗರದ ಮಿಮ್ಸ್ ಅಸ್ಪತ್ರೆಗೆ ದಾಖಲಿಸಲಾಗಿದೆ. ಮಹಿಳೆಯ ಕಾಲಿಗೆ ತೀವ್ರ ಪೆಟ್ಟು ಬಿದ್ದಿದೆ.
ಸ್ಥಳಕ್ಕೆ ಬೂದನೂರು ಗ್ರಾಪಂ ಪಿಡಿಒ ವಿನಯ್ ಕುಮಾರ್ ಆಗಮಿಸಿ ಪರಿಶೀಲನೆ ನಡೆಸಿದರು. ಶಾಲೆಯ ಮುಖ್ಯ ಶಿಕ್ಷಕ ವಿಶ್ವನಾಥ್ ಹೈವೇ ಅಧಿಕಾರಿಗಳ ವಿರುದ್ದ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.




