Thursday, September 19, 2024

ಪ್ರಾಯೋಗಿಕ ಆವೃತ್ತಿ

ದ್ರೌಪದಿ ಮುರ್ಮು ಆಯ್ಕೆ ಜಗತ್ತಿಗೆ ಪ್ರಜಾಪ್ರಭುತ್ವದ ಸಂದೇಶ ಸಾರಲಿದೆ: ರವೀಂದ್ರ ಶ್ರೀಕಂಠಯ್ಯ

ಭಾರತ ಪ್ರಜಾಪ್ರಭುತ್ವ ರಾಷ್ಟವಾಗಿದ್ದು,ದೇಶದ ಎಲ್ಲಾ ವರ್ಗದ ಜನರಿಗೂ ಅಧಿಕಾರ ನೀಡುವ ನಿಟ್ಟಿನಲ್ಲಿ ಬುಡಕಟ್ಟು ಜನಾಂಗದ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಅಭ್ಯರ್ಥಿ ಮಾಡುವ ಮೂಲಕ ಜಗತ್ತಿಗೆ ಸಂದೇಶ ಸಾರಲಾಗಿದೆ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು.

ಶ್ರೀರಂಗಪಟ್ಟಣ ತಾಲ್ಲೂಕಿನ ಕೊಡಿಯಾಲ ಗ್ರಾಮದಲ್ಲಿ ಸುಸಜ್ಜಿತ ಆಸ್ಪತ್ರೆ ಲೋಕಾರ್ಪಣೆ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಜೆಡಿಎಸ್ ಬೆಂಬಲಿಸುವುದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಶ್ರೀ ಸಾಮಾನ್ಯ ಹಾಗೂ ಬಡವರ ಪರ ದನಿಯಾಗಲಿದೆ ಎಂದರು.

ರಾಷ್ಟ್ರಪತಿ ಹುದ್ದೆ ದೇಶದ ಆಡಳಿತ ವ್ಯವಸ್ಥೆಯ ಅತ್ಯುನ್ನತ ಹುದ್ದೆಯಾಗಿದ್ದು, ಆ ಹುದ್ದೆಗೆ ಪಕ್ಷಾತೀತವಾಗಿ ಹಾಗೂ ವ್ಯಕ್ತಿಗತವಾಗಿ ಹಲವರು ಬೆಂಬಲ ಸೂಚಿಸಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಭಿನ್ನ ನಿಲುವುಗಳಿರುವುದು ಸಹಜವಾದರೂ ಎಲ್ಲ ವರ್ಗದ ಜನತೆಗೂ ಆಯ್ಕೆಯ ಅವಕಾಶ ಕಲ್ಪಿಸುವುದು ಪ್ರಜಾಪ್ರಭುತ್ವದ ಗೌರವವನ್ನು ವೃದ್ದಿಸುತ್ತದೆ. ಆ ಮೂಲಕ ಜಗತ್ತಿಗೆ ನಮ್ಮ ಆಡಳಿತ ವ್ಯವಸ್ಥೆಯ ಸಂದೇಶವನ್ನು ಸಾರಿದೆ ಎಂದರು.

ಪ್ರಾದೇಶಿಕ ಪಕ್ಷ ಬೇಕು

ನೆರೆಯ ಆಂಧ್ರಪ್ರದೇಶ, ತಮಿಳುನಾಡು ಹಾಗೂ ತೆಲಂಗಾಣ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳಿಗೆ ಅಲ್ಲಿನ ಜನತೆ ಬೆಂಬಲಿಸುತ್ತಾರೆ. ಅದೇ ರೀತಿ ಕನ್ನಡ ನಾಡಿನ ಸಾರ್ವಭೌಮತೆ ಎತ್ತಿ ಹಿಡಿಯಲು ಕನ್ನಡ ನೆಲದ ಪ್ರಾದೇಶಿಕ ಪಕ್ಷದ ಅವಶ್ಯಕತೆ ಇದ್ದು, ಜಾತ್ಯಾತೀತ ನೆಲೆಗಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಜೆಡಿಎಸ್ ಬೆಂಬಲಕ್ಕೆ ಜನತೆ ನಿಲ್ಲಬೇಕಿದೆ ಎಂದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!