Saturday, October 26, 2024

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ| ಹೊಸ ಆಶ್ವಮೇಧ ಬಸ್ಸುಗಳಿಗೆ ಚಾಲನೆ ನೀಡಿದ ಶಾಸಕ ನರೇಂದ್ರಸ್ವಾಮಿ

ಗ್ರಾಮೀಣ ಭಾಗದ ಜನರಿಗೆ ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಸಾರಿಗೆ ಸೌಲಭ್ಯವನ್ನು ಕಲ್ಪಿಸಲಾಗಿದೆ ಎಂದು ಶಾಸಕ ಪಿಎಂ ನರೇಂದ್ರಸ್ವಾಮಿ ತಿಳಿಸಿದರು.

ಮಳವಳ್ಳಿ ಪಟ್ಟಣದ ಬಸ್ ನಿಲ್ದಾಣದ ಬಳಿ ಶನಿವಾರ ಮೂರು ಹೊಸ ಆಶ್ವಮೇಧ ಬಸ್ ಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಸರ್ಕಾರದ ಶಕ್ತಿ ಯೋಜನೆ ಜಾರಿಯಾದ ಬೇಡಿಕೆಗಳಿಗೆ ತಕ್ಕಂತೆ ಹೊಸ ಬಸ್ ಗಳಿಗೆ ಚಾಲನೆ ನೀಡಲಾಗಿದೆ. ಗ್ರಾಮೀಣ ಭಾಗದ ಜನರಿಗೆ ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಸುಮಾರು 18 ಹೊಸ ಮಾರ್ಗಗಳನ್ನು ಸೃಷ್ಟಿಸಿ ಬಸ್ ಸೌಲಭ್ಯ ಒದಗಿಸಲಾಗಿದೆ. ಸಂಚಾರ ದಟ್ಟಣೆಯ ಸಮಯದಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬೆಂಗಳೂರು, ಮೈಸೂರು, ಮಂಡ್ಯಕ್ಕೆ ತೆರಳಲು ಸಮಸ್ಯೆಯಾಗದಂತೆ ಹೆಚ್ಚಿನ ಬಸ್ ಗಳು ಮಳವಳ್ಳಿಯಿಂದ ಸಂಚರಿಸುವಂತೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.|

ಕಳೆದ ಆರು ತಿಂಗಳಿಂದ ಮಳವಳ್ಳಿಯಿಂದ ವಿವಿಧ ಮಾರ್ಗಗಳಿಗೆ 24 ಹೊಸ ಬಸ್ ಗಳು ಸಂಚರಿಸುತ್ತಿವೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಬಸ್ ಗಳು ಸಾರ್ವಜನಿಕರ ಸೇವೆ ಲಭ್ಯವಾಗಲಿವೆ ಎಂದರು.

ವಿಶೇಷ ಜಾತ್ರಾ ಮಹೋತ್ಸವ ಸಂದರ್ಭದಲ್ಲೂ ಸಹ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಹೆಚ್ಚುವರಿ ಬಸ್ ಗಳು ಸಂಚರಿಸುವ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಗ್ರಾಮೀಣ ಸಂಚಾರ ವ್ಯವಸ್ಥೆಯನ್ನು ಸದೃಢಗೊಳಿಸಲು ಈಗಾಗಲೇ ಸಾರಿಗೆ ಇಲಾಖೆಯ ಮನವಿ ಮಾಡಿದ್ದು, ಮುಂದಿನ ದಿನಗಳಲ್ಲಿ ಎಲ್ಲ ಗ್ರಾಮಗಳಿಗೆ ಸಾರಿಗೆ ಸಂಪರ್ಕ ಕಲ್ಪಿಸಲು ಕ್ರಮ ವಹಿಸುವ ಭರವಸೆ ನೀಡಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಚಿಕ್ಕಲಿಂಗಯ್ಯ, ವಿಭಾಗೀಯ ನಿಯಂತ್ರಣಾಧಿಕಾರಿ ನಾಗರಾಜು, ಮಳವಳ್ಳಿ ಘಟಕದ ವ್ಯವಸ್ಥಾಪಕ ಮಧುಸೂದನ್, ಪುರಸಭೆ ಸದಸ್ಯ ಎಂ.ಎನ್.ಶಿವಸ್ವಾಮಿ, ಮುಖ್ಯಾಧಿಕಾರಿ ಎಂ.ಸಿ.ನಾಗರತ್ನ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೊಡ್ಡಯ್ಯ, ಕರ್ನಾಟಕ ಪ್ರದೇಶ ಕುರುಬರ ಸಂಘದ ರಾಜ್ಯ ನಿರ್ದೇಶಕ ಬಿ.ಪುಟ್ಟಬಸವಯ್ಯ, ಮುಖಂಡರಾದ ಆರ್.ಎನ್.ವಿಶ್ವಾಸ್, ಕೆ.ಜೆ.ದೇವರಾಜು, ಸಿ.ಮಾಧು, ಬಾಲಕೃಷ್ಣ, ಗಂಗರಾಜೇ ಅರಸು, ರೋಹಿತ್ ಗೌಡ, ಬಸವರಾಜು, ನಂಜುಂಡಸ್ವಾಮಿ, ಕಿರಣ್ ಶಂಕರ್, ವೆಂಕಟೇಶ್ ಹಾಗೂ ಚೇತನ್ ನಾಯಕ್ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!