Friday, September 20, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ವಿಶ್ವ ಹೆಪಟೈಟಿಸ್ ದಿನಾಚರಣೆ ಜಾಥಾಗೆ ಚಾಲನೆ

ವಿಶ್ವ ಹೆಪಟೈಟಿಸ್ ದಿನಾಚರಣೆ ಅಂಗವಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಅವರು ಜಾಗೃತಿ ಜಾಥಾಗೆ ಇಂದು ಜಿಲ್ಲಾ ಪಂಚಾಯತ್ ಮುಂಭಾಗ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಸುಮಾರು 2 ತಿಂಗಳಿಂದ ಹೆಚ್.ಬಿ ವೈರಸ್ ಪತ್ತೆ ಹಚ್ಚಲು ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ ಈ ವೈರಸ್ ಮಾನವ ದೇಹದ ಯಕೃತ್ತು ಅಂಗವನ್ನು ಹೆಚ್ಚಾಗಿ ಬಾಧಿಸುತ್ತದೆ ಅದರಿಂದ ಸಾರ್ವಜನಿಕರು ಇದರ ಬಗ್ಗೆ ಎಚ್ಚರದಿಂದ ಇರಬೇಕು ಎಂದರು.

ಈ ರೋಗವು ಹೆಚ್ಚಾಗಿ ಗರ್ಭಿಣಿ ಮಹಿಳೆಯರಲ್ಲಿ ಕಂಡು ಬರುತ್ತದೆ ಅದರಿಂದ ಮಂಡ್ಯ ಜಿಲ್ಲಾದ್ಯಂತ 20862 ಮಹಿಳೆಯರನ್ನು ಪರೀಕ್ಷೆಗೆ ಒಳಪಡಿಸಿದ್ದು ಅವರಲ್ಲಿ ಯಾವುದೇ ರೋಗದ ಲಕ್ಷಣಗಳು ಕಂಡು ಬಂದಿರುವುದಿಲ್ಲ. ಯಾವುದಾದರೂ ಮಗುವಿಗೆ ಪಾಸಿಟಿವ್ ಬಂದರೆ ಸೂಕ್ತ ಚಿಕಿತ್ಸೆ ನೀಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕೆ. ಮೋಹನ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಈ ರೋಗವು ರಕ್ತ ಮತ್ತು ಲೈಂಗಿಕ ಕ್ರಿಯೆಯಿಂದ ಹರಡುತ್ತದೆ ಹಾಗೂ ಕಲುಷಿತ ಆಹಾರ ಮತ್ತು ನೀರಿನಿಂದಲು ಸಹ ಹರಡುತ್ತದೆ ಇದರ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಹಲವಾರು ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದರು.

ಇದೇ ಸಂದರ್ಭದಲ್ಲಿ ಕಾರ್ಯಕ್ರಮ ಕುರಿತಾ ಸಮಗ್ರ ಮಾಹಿತಿ ಇರುವ ಕೈಪಿಡಿ ಬಿಡುಗಡೆ ಮಾಡಲಾಯಿತು. ಜಾಥಾವು ಜಿಲ್ಲಾ ಪಂಚಾಯತ್ ಯಿಂದ ಹೊರಟು ವಿಶ್ವೇಶ್ವರಯ್ಯ ಪ್ರತಿಮೆ ಹತ್ತಿರ ಕೊನೆಗೊಂಡಿತು. “”One Life One liver” ಎಂಬುದು ಈ ಕಾರ್ಯಕ್ರಮದ ಘೋಷ ವಾಕ್ಯವಾಗಿದೆ.

ಈ ಸಂದರ್ಭದಲ್ಲಿ DTO ಡಾ. ಆಶಾಲತಾ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶಶಿಧರ್, DLO ಡಾ. ಅಶ್ವಥ್, NVBDCP ಡಾ.ಕಾಂತರಾಜು, DSO ಡಾ. ಕುಮಾರ್, ತಾಲೂಕು ಆರೋಗ್ಯ ಅಧಿಕಾರಿ ಡಾ. ಜವರೇಗೌಡ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಡಾ.ವೇಣುಗೋಪಾಲ್ ಸೇರಿದಂತೆ ಇನ್ನಿತರರು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!