Saturday, May 18, 2024

ಪ್ರಾಯೋಗಿಕ ಆವೃತ್ತಿ

ಶ್ರೀರಂಗಪಟ್ಟಣ| ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ಕೆ ಚಾಲನೆ

ಸಾರ್ವಜನಿಕರು ತಮ್ಮ ಎಲ್ಲಾ ಐದು ವರ್ಷದೊಳಗಿನ ಮಕ್ಕಳಿಗೆ ಈ ಹಿಂದೆ ಎಷ್ಟೋ ಬಾರಿ ಲಸಿಕೆ ಹಾಕಿಸಿದ್ದರು ಸಹ ಈ ದಿನ ಎರಡು ಹನಿ ಪೋಲಿಯೋ ಯನ್ನು ಹಾಕಿಸುವುದು ಪ್ರತಿಯೊಬ್ಬ ಪಾಲಕರ ಜವಾಬ್ದಾರಿಯಾಗಿದೆ ಎಂದು ಪಲ್ಸ್ ಪೋಲಿಯೋ ತಾಲ್ಲೂಕು ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ( ಅಭಿವೃದ್ಧಿ) ಅನಂತ್ ಕುಮಾರ್ ಹೇಳಿದರು.

ಶ್ರೀರಂಗಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಮಗುವಿಗೆ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ನಂತರ ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಮಾತನಾಡಿ, ತಾಲೂಕಿನಾದ್ಯಂತ 69 ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದ್ದು ಹಾಗೂ 10,000 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದ್ದು, ವಲಸೆ ಜನಾಂಗದವರ ಮಕ್ಕಳಿಗೂ ಕೂಡ ಲಸಿಕೆ ಹಾಕಿಸುವ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು ಹಾಗಾಗಿ ಸಾರ್ವಜನಿಕರು ತಪ್ಪದೆ ಸಮೀಪದ ಲಸಿಕಾ ಕೇಂದ್ರಕ್ಕೆ ಮಕ್ಕಳನ್ನು ಕರೆ ತಂದು ಲಸಿಕೆ ಹಾಕಿಸಬೇಕೆಂದು ಮನವಿ ಮಾಡಿದರು.

ಈ ವೇಳೆ ತಾಪಂ ಕಾರ್ಯ ನಿರ್ವಹಣಾಧಿಕಾರಿ ವೇಣು, ಮುಖ್ಯ ವೈದ್ಯಾಧಿಕಾರಿ ಡಾ.ಪಿ ಮಾರುತಿ,ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಪ್ರಕಾಶ್, ಪುರಸಭಾ ಸದಸ್ಯರಾದ ದಿನೇಶ್, ನಂದೀಶ್ ಮುಖಂಡರಾದ ಲೋಕೇಶ, ಸೋಮು, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್ ಡಿ ಬೆನ್ನೂರ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ ಮೋಹನ್,ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಬಿ ಮಂಗಳಾ, ಆರೋಗ್ಯ ನಿರೀಕ್ಷಣಾಧಿಕಾರಿ ಚಂದನ ಹಾಗೂ ಆಸ್ಪತ್ರೆಯ ಅಧಿಕಾರಿಗಳು,ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!