ಮಂಡ್ಯನಗರದ ಸರ್ಕಾರದ ಒಡೆತನದ ಮೈಷುಗರ್ ಸಕ್ಕರೆ ಕಾರ್ಖಾನೆಯ2024- 2025 ನೇ ಸಾಲಿನ ಕಬ್ಬು ಅರೆಯುವ ಕಾರ್ಯಕ್ಕೆ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹಾಗೂಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರು ಸೋಮವಾರ ಸಂಜೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಂಡ್ಯ ಶಾಸಕ ರವಿಕುಮಾರ್, ಮದ್ದೂರು ಶಾಸಕ ಉದಯ್ ಗೌಡ, ಶ್ರೀರಂಗಪಟ್ಟಣ ಶಾಸಕ ರಮೇಶ್ ಬಂಡಿಸಿದ್ದೇಗೌಡ, ಮೈಷುಗರ್ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಗಂಗಾಧರ್, ರೈತ ಹೋರಾಟಗಾರ್ತಿ ಸುನಂದ ಜಯರಾಂ ಸೇರಿದಂತೆ ಹಲವು ರೈತ ಮುಖಂಡರು ಉಪಸ್ಥಿತರಿದ್ದರು.




