Sunday, May 5, 2024

ಪ್ರಾಯೋಗಿಕ ಆವೃತ್ತಿ

‘ಸುಪ್ರೀಂ’ ಮೆಟ್ಟಿಲೇರಿದ ಕರ್ನಾಟಕಕ್ಕೆ ಜಯ| ಬರಪರಿಹಾರ ನೀಡಲು ಒಪ್ಪಿದ ಕೇಂದ್ರ ಸರ್ಕಾರ

ಕರ್ನಾಟಕಕ್ಕೆ ಕೇಂದ್ರ ಸರ್ಕಾರದಿಂದ ಬರ ಪರಿಹಾರ ನೀಡಲಾಗಿದೆ. ಕರ್ನಾಟಕಕ್ಕೆ ಮೋಸವಾಗಿಲ್ಲವೆಂದು ಬೊಬ್ಬೆ ಹೊಡೆಯುತ್ತಿದ್ದ ಬಿಜೆಪಿ ನಾಯಕರ ಸಮರ್ಥನೆ ಸುಪ್ರೀಂ ಕೋರ್ಟ್‌ ಮುಂದೆ ಬಟಾಬಯಲಾಗಿದೆ. ರಾಜ್ಯಕ್ಕೆ ಪರಿಹಾರ ಬಿಡುಗಡೆ ಮಾಡಲು ಚುನಾವಣಾ ಆಯೋಗ ಒಪ್ಪಿಗೆ ನೀಡಿದ್ದು, ಶೀಘ್ರದಲ್ಲೇ ಪರಿಹಾರ ಒದಗಿಸಲಾಗುವುದು ಎಂದು ಸುಪ್ರೀಂ ಕೋರ್ಟ್‌ನಲ್ಲಿ ಕೇಂದ್ರ ಸರ್ಕಾರ ಹೇಳಿದೆ.

ರಾಜ್ಯಕ್ಕೆ ರಾಷ್ಟ್ರೀಯ ನೈಸರ್ಗಿಕ ವಿಪತ್ತು ನಿಧಿ (NDRF)ಯಿಂದ ಬರ ಪರಿಹಾರ ಬಿಡುಗಡೆ ಮಾಡದ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು.

ಕೇಂದ್ರ ಸರ್ಕಾರದ ಹಲವು ಇಲಾಖೆಗಳ ಅಧಿಕಾರಿಗಳ ತಂಡ ರಾಜ್ಯ ಭೇಟಿ ನೀಡಿ, ವರದಿ ಸಲ್ಲಿಸಿ ಆರು ತಿಂಗಳಾಗಿವೆ. ಆದರೂ, ಬರ ಪರಿಹಾರ ಬಿಡುಗಡೆಯಾಗಿಲ್ಲ. ಕೇಂದ್ರ ಸರ್ಕಾರದ ಧೋರಣೆಯಿಂದ ಕರ್ನಾಟಕದ ಜನರ ಮೂಲಭೂತ ಹಕ್ಕುಗಳಿಗೆ ಧಕ್ಕೆಯಾಗಿದೆ. ರಾಜ್ಯದಲ್ಲಿ ಪರಿಸ್ಥಿತಿ ಅಂತ್ಯಂತ ಶೋಚನೀಯವಾಗಿದೆ. ಪರಿಣಾಮ, ಅನಿವಾರ್ಯವಾಗಿ ನ್ಯಾಯಾಲಯದ ಮೆಟ್ಟಿಲೇರಿರುವುದಾಗಿ ಸುಪ್ರೀಂ ಕೋರ್ಟ್‌ಗೆ ಕರ್ನಾಟಕ ಸರ್ಕಾರ ತಿಳಿಸಿತ್ತು.

ಸುಪ್ರೀಂ ನ್ಯಾಯಮೂರ್ತಿಗಳಾದ ಬಿ.ಆರ್.‌ ಗವಾಯಿ ಮತು ಸಂದೀಪ್‌ ಮೆಹ್ತಾ ಅವರಿದ್ದ ವಿಭಾಗೀಯ ಪೀಠವು ವಿಚಾರಣೆ ನಡೆಸಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಸಂಘರ್ಷ ನೆಲೆಸಬಾರದು. ರಾಜ್ಯಗಳು ಪದೇಪದೇ ಸುಪ್ರೀಂ ಕೋರ್ಟಿಗೆ ಬರುವಂತಾಗಬಾರದು ಎಂದು ಹೇಳಿದೆ.

ವಿಚಾರಣೆ ವೇಳೆ ಹಾಜರಿದ್ದ ಕೇಂದ್ರ ಸರ್ಕಾರದ ಅಟಾರ್ನಿ ಜನರಲ್‌ ಆರ್‌ ವೆಂಕಟರಮಣಿ, “ಶೀಘ್ರವೇ ಬರ ಪರಿಹಾರ ಬಿಡುಗಡೆ ಮಾಡಲಾಗುತ್ತದೆ” ಎಂದು ಹೇಳಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!