ವಿದ್ಯಾರ್ಥಿಗಳು ಮಾದಕ ದ್ರವ್ಯ ವಸ್ತುಗಳಿಗೆ ಮಾರು ಹೋಗದೆ ವಿದ್ಯಾಭ್ಯಾಸದತ್ತ ಹೆಚ್ಚು ಗಮನ ಹರಿಸಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್ ಡಿ ಬೆನ್ನೂರ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಶ್ರೀರಂಗಪಟ್ಟಣದ ಕಾವೇರಿ ಪ್ರೌಢಶಾಲಾ ಆವರಣದಲ್ಲಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಮಂಡ್ಯ,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಕಲ ಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಮತ್ತು ಬಿ ಜಿ ಎಸ್ ಪದವಿ ಪೂರ್ವ ಕಾಲೇಜು ಇವರುಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ 78 ನೆಯ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ “ನಶಾ ಮುಕ್ತ ಭಾರತ ಅಭಿಯಾನ” ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಮದ್ಯಪಾನ,ಧೂಮಪಾನ, ಗಾಂಜಾ,ಕೋಕೆನ,ಬ್ರೌನ್ ಶುಗರ್, ಅಫೀಮುಗಳಂತಹ ಮಾದಕ ವಸ್ತುಗಳಿಂದ ವಿದ್ಯಾರ್ಥಿಗಳು ಹಾಗೂ ತಮ್ಮ ಪಾಲಕರೂ ಕೂಡ ದೂರವಿರಬೇಕು.ಇವುಗಳಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತವೆ ಜೊತೆಗೆ ಸಮಾಜದ ಸ್ವಾಸ್ಥ್ಯ ಹಾಳಾಗುತ್ತದೆ ಕೂತುಹಲಕ್ಕಾಗಿ ಯಾರೊಬ್ಬರೂ ಮಾದಕ ದ್ರವ್ಯಗಳನ್ನು ಬಳಸಬಾರದು. ದೇಶದ ಯುವ ಜನತೆ ಮಾದಕ ವ್ಯಸನ ಎಂಬ ಜಾಲದಲ್ಲಿ ಸಿಕ್ಕಿ ನರಳುತ್ತಿದ್ದಾರೆ ಇತ್ತಿತ್ತಲಾಗಿ ಯುವ ಸಮೂಹ ಮಾದಕವೆಂಬ ವಿಷ ವರ್ತುಲದಲ್ಲಿ ಭಾಗವಹಿಸುತ್ತಿದೆ ಚಟಗಳು ಮೊದಲು ಸಂತೋಷ್ ನೀಡಿದರೂ ನಂತರ ಮನಸ್ಸಿನ ನೆಮ್ಮದಿ ಹಾಗೂ ಆರೋಗ್ಯವನ್ನು ಹಾಳು ಮಾಡುತ್ತದೆ ಎಂದರು.
ಕ್ಷಣಿಕ ಸುಖ ನೀಡುವ ಮೋಹಕ್ಕೆ ಬಿದ್ದು ಸುಂದರವಾದ ಜೀವನ ಹಾಳು ಮಾಡಿಕೊಳ್ಳುವದು ಬೇಡ, ಅಭ್ಯಾಸ ಹಾಗೂ ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸಿ ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಗುರಿಯಾಗಬೇಕು ಬನ್ನಿ “ನಶಾ ಮುಕ್ತ ಮಂಡ್ಯ ಜಿಲ್ಲೆ” ನಿರ್ಮಾಣ ಮಾಡಲು ನಾವೆಲ್ಲರೂ ಸಂಕಲ್ಪ ಮಾಡೋಣ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು
ಈ ವೇಳೆ ಮಾದಕ ವಸ್ತುಗಳ ಸೇವನೆ ಮಾಡದಿರಲು ಬಗ್ಗೆ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ಕಾಲೇಜು ಪ್ರಾಂಶುಪಾಲೆ ಜಯಶ್ರೀ ಎಂ,ಮುಖ್ಯ ಶಿಕ್ಷಕ ಮುದ್ದುರಾಜು ಎನ್,ಸಹಶಿಕ್ಷಕರಾದ ಕುಮಾರಸ್ವಾಮಿ, ಮಂಜುನಾಥ, ಚಂದ್ರಶೇಖರ್,ದೈಹಿಕ ಶಿಕ್ಷಕ ಸಿ ಆರ್ ಪಾಪಣ್ಣ, ಕಾಲೇಜು ಉಪನ್ಯಾಸಕರಾದ ಅಮ್ರಿನ ಆಲಂ, ಸರಿತ,ನಿರ್ಮಲ,ಶ್ರೀಶಾದಾಸ್ ವಿಕಲಚೇತನರ ಕಲ್ಯಾಣ ಇಲಾಖೆಯ ತಾಲ್ಲೂಕು ಸಂಯೋಜಕ ಕೃಷ್ಣ ಹಾಗೂ ಕಾಲೇಜು, ಪ್ರೌಢ ಶಾಲಾ ವಿದ್ಯಾರ್ಥಿಗಳು ಹಾಜರಿದ್ದರು. ನಂತರ ಕಾಲೇಜು ಮಕ್ಕಳಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಸಾರ್ವಜನಿಕರಿಗೆ ಅರಿವು ಮೂಡಿಸಿದರು.




