Thursday, November 19, 2026

ಪ್ರಾಯೋಗಿಕ ಆವೃತ್ತಿ

ಸಂವಿಧಾನ ರಕ್ಷಣೆಗಾಗಿ ಕೋಮುವಾದಿ ಬಿಜೆಪಿ ಸೋಲಿಸಿ – ಎದ್ದೇಳು ಕರ್ನಾಟಕ ಅಭಿಯಾನದ ಘೋ‍ಷಣೆ

ಭಾತರ ಸಂವಿಧಾನ ರಕ್ಷಣೆ ಹಾಗೂ ಬಹುತ್ವದ ರಕ್ಷಣೆಗಾಗಿ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಎದ್ದೇಳು ಕರ್ನಾಟಕ ನಾಗರೀಕ ಅಭಿಯಾನವು ಕೋಮುವಾದಿ ಬಿಜೆಪಿಯನ್ನು ಸೋಲಿಸಿ, ಜಾತ್ಯತೀತ ಪಕ್ಷಗಳನ್ನು ಬೆಂಬಲಿಸಲು ತೀರ್ಮಾನಿಸಿದೆ ಎಂದು ಪ್ರಗತಿಪರ ನ್ಯಾಯವಾದಿ ಬಿ.ಟಿ.ವಿಶ್ವನಾಥ್ ಹೇಳಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುನ್ನೆಲೆಗೆ ಬರುತ್ತಿರುವ ಕೋಮುಶಕ್ತಿಗಳನ್ನು ಮಣಿಸುವ ಉದ್ದೇಶದಿಂದ ಈ ಬಾರಿಯ ಚುನಾವಣೆ ಬಹಳ ಮಹತ್ವದ್ದಾಗಿದೆ. ಸಂವಿಧಾನಕ್ಕೆ ಅಪಾಯ ಬಂದೊದಗಿರುವ ಇಂತಹ ಸಂದರ್ಭದಲ್ಲಿ ಜಾತ್ಯತೀತ ಶಕ್ತಿಗಳು ಒಗ್ಗೂಡಿ ಕೋಮುವಾದಿಗಳನ್ನು ಮಣಿಸುವ ಮೂಲಕ ಬಹುತ್ವದ ಕರ್ನಾಟಕ ನಿರ್ಮಾಣಕ್ಕೆ ಮುಂದಾಗಬೇಕೆಂದರು.

ಇಂದು ಮತದಾರರು ಹೆಚ್ಚು ಜಾಗೃತರಾಗಿದ್ದಾರೆ ಎಂದು ಅನ್ನಿಸುತ್ತಿದೆ. ಹಿಂದಿನ ಯಾವ ಚುನಾವಣೆಯಲ್ಲೂ ನಾನು ಇಷ್ಟೊಂದು ಜಾಗೃತ ಪ್ರಜ್ಞೆಯನ್ನು ಕಂಡಿಲ್ಲ ಮತಯಾಚಿಸಿ ಬಂದ ಅಭ್ಯರ್ಥಿಗಳಿಗೆ ಮತದಾರರು ಪ್ರಶ್ನೆಗಳ ಮೇಲೆ ಪ್ರಶ್ನೆ ಕೇಳುತ್ತಿದ್ದಾರೆ. ಸ್ಪರ್ಧಿಗಳಿಗೆ ಬೆವರಿಳಿಸುತ್ತಿದ್ದಾರೆ. ಇದು ಉತ್ತಮ ಪ್ರಜಾಪ್ರಭುತ್ವದ ಲಕ್ಷಣಗಳಾಗಿವೆ ಎಂದರು.

ಕರ್ನಾಟಕ ಜನಶಕ್ತಿ ಕಾರ್ಯದರ್ಶಿ ಪೂರ್ಣಿಮಾ ಮಾತನಾಡಿ, ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟವಾಗಿದೆ, ಆದರೆ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಕೋಮು ದ್ವೇಷಗಳನ್ನು ಹುಟ್ಟು ಹಾಕುವಂತಹ ಕೆಲಸಗಳಾಗಿದೆ, ಮಿತಿ ಮೀರಿದ ಬೆಲೆ ಏರಿಕೆ, 40% ಭ್ರಷ್ಟಾಚಾರ, ರೈತವಿರೋಧಿ, ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿರುವ ಬಿಜೆಪಿ ಸರ್ಕಾರದ ವಿರುದ್ದ ಮತ ಚಲಾಯಿಸಬೇಕೆಂದು ಮನವಿ ಮಾಡಿದರು.

ಮಹಿಳಾ ಕ್ರೀಡಾಪಟುಗಳಿಗೆ ಲೈಂಗಿಕ ಕಿರುಕುಳ

ದೇಶದ ಹೆಮ್ಮೆಯ ಕ್ರೀಡಾಪಟುಗಳಿಗೆ ಬಿಜೆಪಿ ಸಂಸದನೇ ಲೈಗಿಂಕ ಕಿರುಕುಳ ನೀಡಿದ್ದು, ಇದರ ವಿರುದ್ದ ದೆಹಲಿಯ ಜಂತರ್ ಮಂತರ್ ನಲ್ಲಿ ಕ್ರೀಡಾಪಟುಗಳು ಹಲವಾರು ದಿನಗಳಿಂದ ಹೋರಾಟ ನಡೆಸುತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹಸಚಿವ ಅಮಿತ್ ಶಾ ಅವರು ಕರ್ನಾಟಕದಲ್ಲಿ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದಾರೆಂದು ಕಿಡಿಕಾರಿದರು.

ಗೋಷ್ಠಿಯಲ್ಲಿ ಮುಖಂಡರಾದ ಪ್ರೊ.ಚಂದ್ರಶೇಖರ್, ರಮಾನಂದ್, ಮಂಜುಳ, ವೈದುನ ಮತ್ತಿತರರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ