Thursday, July 25, 2024

ಪ್ರಾಯೋಗಿಕ ಆವೃತ್ತಿ

ದೇಶದ ಸುಸ್ಥಿರ ಅಭಿವೃದ್ಧಿಗೆ ಶಿಕ್ಷಣ ನೀತಿ ಮಾರ್ಗಸೂಚಿ: ಡಾ.ಪುಟ್ಟರಾಜು

ಮಂಡ್ಯ ವಿಶ್ವವಿದ್ಯಾಲಯದಲ್ಲಿ ‘ಶಿಕ್ಷಣ ನೀತಿ: ಒಳಗೊಳ್ಳುವಿಕೆ ಮತ್ತು ಸುಸ್ಥಿರ ಅಭಿವೃದ್ಧಿ’ ಎಂಬ ವಿಷಯದ ಕುರಿತಾಗಿ ಆಯೋಜಿಸಲಾಗಿದ್ದ ಒಂದು ದಿನದ ಅಂತರರಾಷ್ಟ್ರೀಯ ವಿಚಾರ ಸಂಕಿರಣವನ್ನು ಮಂಡ್ಯ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಪುಟ್ಟರಾಜು ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಒಂದು ದೇಶದ ಸುಸ್ಥಿರ ಅಭಿವೃದ್ಧಿಗೆ ಶಿಕ್ಷಣದ ನೀತಿ ಮಾರ್ಗಸೂಚಿ ಆಗಿರುತ್ತದೆ. ದೇಶದ ಅಭಿವೃದ್ಧಿಯ ಪಥವನ್ನು ನಿರ್ಧರಿಸುವ ಶಕ್ತಿ ಶಿಕ್ಷಣಕ್ಕೆ ಮಾತ್ರ ಇದ್ದು ಇಂದಿನ ಆಧುನಿಕ ಜಗತ್ತಿನಲ್ಲಿ ತಾಂತ್ರಿಕ ಸಲಕರಣೆಗಳನ್ನು ಬಳಸಿಕೊಂಡು ಉತ್ತಮ ಶಿಕ್ಷಣವನ್ನು ನೀಡುವುದರ ಮೂಲಕ ದೇಶವನ್ನು ಸುಭದ್ರ ಗೊಳಿಸಬೇಕು ಎಂದರು.

ಮಂಡ್ಯ ವಿಶ್ವವಿದ್ಯಾಲಯದ ಕುಲ ಸಚಿವ ಚಂದ್ರಯ್ಯ ಮಾತನಾಡಿ, ಮಕ್ಕಳಿಗೆ ಭೋದಿಸುವ ಶಿಕ್ಷಕರು ಅಧ್ಯಯನಶೀಲರಾಗಬೇಕು, ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಜಗತ್ತಿನಲ್ಲಿ ಉನ್ನತ ಅವಕಾಶಗಳನ್ನು ಪಡೆದುಕೊಳ್ಳುವಂತೆ ರೂಪಿಸುವಲ್ಲಿ ಶಿಕ್ಷಕರು ಕ್ರಿಯಾಶೀಲರಾಗಬೇಕು ಎಂದರು.

ಅರ್ಥಶಾಸ್ತ್ರ ಪ್ರಾಧ್ಯಾಪಕರಾದ ಪ್ರೊ ಶಿವಚಿತ್ತಪ್ಪ ಕೆ ರವರು ವಿಚಾರ ಸಂಕೀರ್ಣದ ಉದ್ದೇಶ ಮತ್ತು ಆಶಯವನ್ನು ತಿಳಿಸಿದರು

ಇಂಡೋ ಅಮೆರಿಕನ್ ಚೇಂಬರ್ ಆಫ್ ಕಾಮರ್ಸ್ ನ ಮುಖ್ಯಸ್ಥರಾದ ಡಾ ಆರ್ ಮನೋಹರ್ ರವರು ವಿಚಾರ ಸಂಕಿರಣದ ಮುಖ್ಯ ಭಾಷಣ ಮಾಡಿದರು

ಇರಾನ್, ದಕ್ಷಿಣ ಆಫ್ರಿಕಾ, ಆಫ್ಘಾನಿಸ್ತಾನ,ಭೂತಾನ್, ಇಂಡೋನೇಷ್ಯಾ ಇವೇ ಮೊದಲಾದ ದೇಶಗಳಿಂದ ಆಗಮಿಸಿದ್ದ ಸಂಪನ್ಮೂಲ ವ್ಯಕ್ತಿಗಳು ಆಯಾಯ ದೇಶಗಳ ಶಿಕ್ಷಣ ನೀತಿ ಕುರಿತು ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಮಂಡ್ಯ ಜಿಲ್ಲೆಯ ಹಲವು ಶೈಕ್ಷಣಿಕ ಸಂಸ್ಥೆಗಳು ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಆಧ್ಯಾಪಕರು ಮುಖ್ಯಸ್ಥರು ಸಂಶೋಧನಾ ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಡಾ ದಿಲ್ಸಾದ್ ಬೇಗಂ ಕಾರ್ಯಕ್ರಮ ನಿರೂಪಿಸಿದರು. ವಿಚಾರ ಸಂಕಿರಣದ ಸಂಘಟನಾ ಕಾರ್ಯದರ್ಶಿ ಡಾ. ಕೆ ಯೋಗನರಸಿಂಹಚಾರಿ ವಂದನೆಗಳನ್ನು ಸಲ್ಲಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!