Tuesday, November 24, 2026

ಪ್ರಾಯೋಗಿಕ ಆವೃತ್ತಿ

ಶಿಕ್ಷಣದ ಜೊತೆಗೆ ಕ್ರೀಡೆ ಅತ್ಯವಶ್ಯಕ: ಡಾ.ಹರೀಶ್

ವೈದ್ಯಕೀಯ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆ ಅತ್ಯವಶ್ಯಕ ಎಂದು ಮಿಮ್ಸ್ ನಿರ್ದೇಶಕ ಡಾ.ಎಂ.ಆರ್.ಹರೀಶ್ ಹೇಳಿದರು.

ನಗರದಲ್ಲಿರುವ ಪಿಇಟಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ರಾಜೀವ್ ಗಾಂಧಿ ವೈದ್ಯಕೀಯ ವಿಶ್ವವಿದ್ಯಾನಿಲಯ ಬೆಂಗಳೂರು ಮತ್ತು ಮಿಮ್ಸ್ ಮಂಡ್ಯ ಇವರು ಆಯೋಜಿಸಿದ್ದ ಮೈಸೂರು ವಿಭಾಗ ಮಟ್ಟದ 5 ದಿನಗಳ ವೈದ್ಯಕೀಯ ವಿದ್ಯಾರ್ಥಿಗಳ ಕ್ರಿಕೆಟ್ ಪಂದ್ಯಾವಳಿ-2022 ಚಾಲನೆ ನೀಡಿ ಅವರು ಮಾತನಾಡಿದರು.

ಇಂದಿನ ವೈದ್ಯಕೀಯ ವಿದ್ಯಾರ್ಥಿಗಳು ಓದಿನಲ್ಲೇ ಹೆಚ್ಚು ತಲ್ಲೀನರಾಗಿಬಿಡುತ್ತಾರೆ. ಓದಿನೊಂದಿಗೆ ವಿವಿಧ ಕ್ರೀಡೆಗಳು ಮತ್ತು ವಿವಿಧ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ಮಾನಸಿಕವಾಗಿ ಮತ್ತು ದೈಹಿಕವಾಗಿ ಗಟ್ಟಿಗೊಳ್ಳಲು ಸಾಧ್ಯವಿದೆ ಎಂದು ಕಿವಿಮಾತೇಳಿದರು.

ಎಲ್ಲಾ ವೈದ್ಯಕೀಯ ಕಾಲೇಜುಗಳಲ್ಲಿ ಕ್ರೀಡೆಗಳು ಮತ್ತು ವಿವಿಧ ಕ್ಷೇತ್ರಗಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವುದು ಉತ್ತಮ‌. ಪ್ರತಿವರ್ಷ ವಿದ್ಯಾರ್ಥಿಗಳ ಭೌದ್ಧಿಕ ಬೆಳೆವಣಿಗೆಗೆ ಹತ್ತಾರು ಕಾರ್ಯಕ್ರಮಗಳು ನಡೆಯುತ್ತಿರುತ್ತವೆ.

ರಾಜೀವ್ ಗಾಂಧಿ ವೈದ್ಯಕೀಯ ವಿಶ್ವವಿದ್ಯಾನಿಲಯವು ನಮ್ಮ ಕಾಲೇಜಿಗೆ ಹೆಚ್ಚಿನ ಕಾರ್ಯಕ್ರಮಗಳನ್ನು ಆಯೋಜಿಸಲು ಆದ್ಯತೆ ನೀಡಲಿ ಎಂದರು.

ಇದೇ ಸಂಧರ್ಭದಲ್ಲಿ ಮೈಸೂರು ವಿಭಾಗಮಟ್ಟದಿಂದ 17 ತಂಡಗಳು ಪಂದ್ಯಾವಳಿಯಲ್ಲಿ ಪಾಲ್ಗೊಂಡು 5ದಿನಗಳ ಕಾಲ ಗೆಲುವಿಗಾಗಿ ಸೆಣಸಾಡಿ ಜು.22ರಂದು ಅಂತಿಮ ಪಂದ್ಯದಲ್ಲಿ ಗೆಲುವು ಸಾಧಿಸುವ ತಂಡಗಳಿಗೆ ಗಣ್ಯರು ಬಹುಮಾನ ಮತ್ತು ಪಾರಿತೋಷಕ ನೀಡಲಿದ್ದಾರೆ.

ಈ ಸಂದರ್ಭದಲ್ಲಿ ರಾಜೀವ್ ಗಾಂಧಿ ವೈದ್ಯಕೀಯ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಡಾ.ಪಿ.ವಿ.ಶ್ರೀಧರ್, ಮಿಮ್ಸ್ ಪ್ರಾಂಶುಪಾಲ ಡಾ. ತಮ್ಮಣ್ಣ, ದೈಹಿಕ ಶಿಕ್ಷಣ ನಿರ್ದೇಶಕ ಡಾ.ಸುರೇಶ್, ಕೆವಿಜಿ ಮೆಡಿಕಲ್ ಕಾಲೇಜಿನ ಮಿಥುನ್ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ