ವಿಶ್ವದಾದ್ಯಂತ ಪ್ರವಾದಿ ಮಹಮ್ಮದ್ ಅವರ ಜನ್ಮದಿನವನ್ನು ಈದ್ ಮಿಲಾದ್ ಆಗಿ ಮುಸ್ಲಿಂ ಬಾಂಧವರು ಆಚರಿಸುತ್ತಿದ್ದು, ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮುಸ್ಲಿಂ ಬಾಂಧವರಿಗೆ ಈದ್ ಮುಬಾರಕ್ ಹೇಳಿ ಶುಭಾಶಯಗಳನ್ನು ಕೋರಿದ್ದಾರೆ.
ಈ ಬಗ್ಗೆ ತಮ್ಮ ಎಕ್ಸ್ ನಲ್ಲಿ ಬರೆದುಕೊಂಡಿರುವ ಅವರು, ಮಿಲಾದ್-ಉನ್-ನಬಿ ಸಂದರ್ಭದಲ್ಲಿ ಶುಭಾಶಯಗಳು. ಪ್ರವಾದಿ ಮಹಮ್ಮದ್ ರ ಈ ಪವಿತ್ರ ದಿನವು ನಮ್ಮ ಸಮಾಜದಲ್ಲಿ ಶಾಂತಿ ಮತ್ತು ಯೋಗಕ್ಷೇಮವನ್ನು ತರಲಿ. ಕರುಣೆ, ಸೇವೆ ಮತ್ತು ನ್ಯಾಯದ ಮೌಲ್ಯಗಳು ಯಾವಾಗಲೂ ನಮಗೆ ಮಾರ್ಗದರ್ಶನ ನೀಡಲಿ ಎಂದು ತಿಳಿಸಿದ್ದಾರೆ.
Best wishes on the occasion of Milad-un-Nabi.
May this sacred day bring with it peace and well-being in our society. May the values of compassion, service and justice always guide us.
Eid Mubarak!
— Narendra Modi (@narendramodi) September 5, 2025
“>
ಇಸ್ಲಾಮಿಕ್ ಕ್ಯಾಲೆಂಡರಿನ ಮೂರನೇ ತಿಂಗಳು ರಬೀವುಲ್ ಅವ್ವಲ್. ಪ್ರವಾದಿ ಅವರು ರಬೀವುಲ್ ಅವ್ವಲ್ ತಿಂಗಳ 12ರಂದು ಸೌದಿ ಅರೇಬಿಯಾದ ಮೆಕ್ಕಾದಲ್ಲಿ ಜನಿಸಿದರು. ಅವರ ಜನ್ಮದಿನದ ಅಂಗವಾಗಿ ಹಲವು ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ ಹಾಗೂ ಅವರ ಜೀವನಚರಿತ್ರೆ ಮತ್ತು ಸಂದೇಶಗಳನ್ನು ನೆನಪಿಸಲಾಗುತ್ತದೆ.
ಕೇರಳದಲ್ಲಿ ಇಂದು (ಶುಕ್ರವಾರ) ಓಣಂ ಹಬ್ಬವನ್ನು ಆಚರಣೆ ಮಾಡಲಾಗುತ್ತದೆ. ಕೇರಳದ ಜನರಿಗೂ ಪ್ರಧಾನಿ ಮೋದಿ ಹಬ್ಬದ ಶುಭಾಶಯ ಕೋರಿದ್ದಾರೆ.




