Thursday, September 19, 2024

ಪ್ರಾಯೋಗಿಕ ಆವೃತ್ತಿ

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಜವಾಬ್ದಾರಿ HDK ಹೆಗಲಿಗೆ

ವಿಧಾನಸಭೆಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಅಧಿಕಾರವನ್ನು ನಮ್ಮ ಪಕ್ಷದ ಶಾಸಕರು, ನನಗೆ ನೀಡಿದ್ದು, ದೇವೆಗೌಡರ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೇಂದ್ರ ಸಚಿವ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದರು.

ಬೆಂಗಳೂರಿನಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷ ಹಾಗೂ ಕೋರ್ ಕಮಿಟಿ ಸಭೆಗಳ ನಂತರ ಮಾಧ್ಯಮಗಳ ಜತೆ ಮಾತನಾಡಿದರು.

“ಈ ತಿಂಗಳ 15ರಿಂದ ರಾಜ್ಯ ವಿಧಾನ ಮಂಡಲ ಅಧಿವೇಶನ ಆರಂಭವಾಗುತ್ತಿದ್ದು, ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಬಗ್ಗೆ ನಮ್ಮ ಶಾಸಕರ ಜತೆ ಸುದೀರ್ಘವಾಗಿ ಚರ್ಚೆ ನಡೆಸಲಾಯಿತು ಹಾಗೂ ಅವರ ಅಭಿಪ್ರಾಯ ಸಂಗ್ರಹಿಸಲಾಯಿತು” ಎಂದರು.

“ಕಳೆದ ಲೋಕಸಭಾ ಚುನಾವಣೆ ನಂತರ, ಶಾಸಕಾಂಗ ಪಕ್ಷದ ಸ್ಥಾನಕ್ಕೆ ನಾನು ರಾಜೀನಾಮೆ ನೀಡಿದ್ದೇನೆ. ಶಾಸಕಾಂಗ ಪಕ್ಷದ ಹೊಸ ನಾಯಕನ ಆಯ್ಕೆ ಮಾಡಲು ಸರ್ವಾನುಮತದಿಂದ ಶಾಸಕರು ನನಗೆ ಜವಾಬ್ದಾರಿ ನೀಡಿದ್ದಾರೆ. ಶೀಘ್ರವೇ ಚರ್ಚೆ ನಡೆಸಿ ಶಾಸಕಾಂಗ ಪಕ್ಷದ ನಾಯಕನ ಹೆಸರನ್ನು ಘೋಷಣೆ ಮಾಡಲಾಗುವುದು” ಎಂದು ಹೇಳಿದರು.

“ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಯ ಅತ್ಯಂತ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗುವುದು. ಪದಾಧಿಕಾರಿಗಳ ಬದಲಾವಣೆ ಮಾಡಲಾಗುವುದು. ಹೊಸ ರಾಜ್ಯಾಧ್ಯಕ್ಷರ ಚುನಾವಣೆಯೂ ನಡೆಯಲಿದೆ. ಸದಸ್ಯತ್ವ ಅಭಿಯಾನಕ್ಕೆ ರಾಜ್ಯದ 31 ಜಿಲ್ಲೆಗಳಲ್ಲಿನ ವಿಧಾನಸಭೆ ಕ್ಷೇತ್ರಗಳಲ್ಲಿ ಮುಖಂಡರಿಗೆ ಉಸ್ತುವಾರಿ ಕೊಡಲಾಗುವುದು” ಎಂದರು.

“ಸಾಮೂಹಿಕ ಜವಾಬ್ದಾರಿ ಮೂಲಕ ಸಂಘಟನೆಗೆ ಹೆಚ್ಚು ಶಕ್ತಿ ತುಂಬಲು ನಿರ್ಧಾರ ಮಾಡಲಾಗಿದೆ. ನಿಖಿಲ್ ಕುಮಾರಸ್ವಾಮಿ ಅವರು ಸಂಘಟನೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ತೊಡಗಿಕೊಳ್ಳಬೇಕು ಎಂದು ಎಲ್ಲರೂ ಸಲಹೆ ನೀಡಿದ್ದಾರೆ. ನಮ್ಮ ಸಲಹೆಗಳನ್ನು ಕಾರ್ಯರೂಪಕ್ಕೆ ತರಲು ಅವರೆಲ್ಲರ ಜತೆಯಲ್ಲಿ ವಿಶ್ವಾಸದಿಂದ ಸಂಘಟನೆಯಲ್ಲಿ ತೊಡಗಿಕೊಳ್ಳುವಂತೆ ಸಲಹೆ ನೀಡಿದ್ದಾರೆ. ಅದರಂತೆ ನಿಖಿಲ್ ಅವರು ಪಕ್ಷದ ಸಂಘಟನೆಯಲ್ಲಿ ಹೆಚ್ಚು ಸಮಯ ತೊಡಗಿಕೊಳ್ಳಲಿದ್ದಾರೆ” ಎಂದು ಕುಮಾರಸ್ವಾಮಿ ಹೇಳಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!