Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮನ್ಮುಲ್ ನಿರ್ದೇಶಕರ ಚುನಾವಣೆ ; ಹಲವರಿಂದ ನಾಮಪತ್ರ ಸಲ್ಲಿಕೆ

ಮಂಡ್ಯ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಆಡಳಿತ ಮಂಡಳಿ ಚುನಾವಣೆಗೆ ಗುರುವಾರ ಹಲವರು ನಾಮಪತ್ರ ಸಲ್ಲಿಸಿದರು, ಚುನಾವಣಾಧಿಕಾರಿಯೂ ಆದ ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದ ಮೂರ್ತಿ ಅವರಿಗೆ ನಾಮಪತ್ರ ಸಲ್ಲಿಸಿದರು;

ಶ್ರೀರಂಗಪಟ್ಟಣ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿ ಬೋರೇಗೌಡ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕರಾದ ರಮೇಶ್ ಬಾಬು ಬಂಡಿ ಸಿದ್ದೇಗೌಡ, ಪುರಸಭೆ ಸದಸ್ಯರಾದ ದಿನೇಶ್ ಸೇರಿದಂತೆ ಇತರರು ಹಾಜರಿದ್ದರು.

ಕೆ.ಆರ್.ಪೇಟೆ ತಾಲೂಕಿನಿಂದ ಅಭ್ಯರ್ಥಿಯಾಗಿ ಕೆ.ರವಿ( ಡಾಲು ರವಿ) ಹಾಗೂ ಎಂ.ಬಿ.ಹರೀಶ್  ನಾಮಪತ್ರ ಸಲ್ಲಿಸಿದರು.

ಮಳವಳ್ಳಿ ತಾಲೂಕಿನಿಂದ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ವಿ.ಎಂ.ವಿಶ್ವನಾಥ್, ಮಂಡ್ಯ ತಾಲೂಕಿನಿಂದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಬಿ.ಚಂದ್ರ ನಾಮಪತ್ರ ಸಲ್ಲಿಸಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ