ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಹೆಚ್.ಎನ್.ಗೋಪಾಲಕೃಷ್ಣ ಅವರು ಮದ್ದೂರು ಮತ್ತು ಮಳವಳ್ಳಿ ತಾಲ್ಲೂಕಿನ ವಿವಿಧೆಡೆ ಬೇಟಿ ನೀಡಿ, ಚುನಾವಣಾ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದರು.
ಹನಕೆರೆ ಮತ್ತು ನಿಡಘಟ್ಟ ಚೆಕ್ ಪೋಸ್ಟ್ ಹಾಗೂ ಮಳವಳ್ಳಿ ಸ್ಟ್ರಾಂಗ್ ರೂಮ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಾಲ್ಲೂಕಿನ ಲೋಕೋಪಯೋಗಿ, ತೊರೆಕಾಡನಹಳ್ಳಿ, ಮನ್’ಮುಲ್, ವಿ.ಸಿ ಫಾರಂಗಳಲ್ಲಿನ ಗೆಸ್ಟ್ ಹೌಸ್ ಹಾಗೂ ಪ್ತವಾಸಿ ಮಂದಿರಗಳಲ್ಲಿ ಚುನಾವಣಾ ವೀಕ್ಷಕರಿಗೆ ಹಾಗೂ ಪೊಲೀಸ್ ವೀಕ್ಷಕರಿಗೆ ಕಚೇರಿ ಹಾಗೂ ವಸತಿ ವ್ಯವಸ್ಥೆ ಮಾಡುವ ಸಂಬಂಧ ಕೈಗೊಂಡಿರುವ ಕ್ರಮಗಳ ಬಗ್ಗೆ ವೀಕ್ಷಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಉಪಸ್ಥಿತರಿದ್ದರು.