Sunday, May 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| 2,074 ಮತಗಟ್ಟೆಗಳತ್ತ ತೆರಳಿದ ಚುನಾವಣಾ ಸಿಬ್ಬಂದಿ: ನಾಳೆ ಮತದಾನ

ಮಂಡ್ಯ ಲೋಕಸಭೆಯ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ನಾಳೆ ಏ.26ರಂದು  ಶುಕ್ರವಾರ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಶಾಂತಿಯುತ ಮತದಾನಕ್ಕಾಗಿ ಜಿಲ್ಲಾಡಳಿತ ಸಕಲ ರೀತಿಯ ಸಿದ್ಥತಾ ಕಾರ‍್ಯಗಳನ್ನು ಪೂರ್ಣಗೊಳಿಸಿದೆ.

ಗುರುವಾರ ಬೆಳಿಗ್ಗೆಯಿಂದಲೇ ಮಂಡ್ಯ ವಿಧಾನಸಭಾ ಕ್ಷೇತ್ರ ಎಲ್ಲಾ ಮತಗಟ್ಟೆ ಕೇಂದ್ರಗಳ ಮತಗಟ್ಟೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಇವಿಎಂ ಯಂತ್ರ ಸೇರಿದಂತೆ ಇತರೆ ಸಾಮಾಗ್ರಿಗಳನ್ನು ಪಡೆದು ಮಂಡ್ಯ ವಿಶ್ವ ವಿದ್ಯಾಲಯದಿಂದ ತಮ್ಮ ಮತಗಟ್ಟೆಗಳಿಗೆ ಪ್ರಯಾಣ ಬೆಳೆಸಿದರು.

ಆಯಾ ವಿಧಾನಸಭಾ ಕ್ಷೇತ್ರಗಳ ತಾಲ್ಲೂಕು ಕೇಂದ್ರಗಳಲ್ಲಿ ಮಸ್ಟರಿಂಗ್ ಕಾರ್ಯ ನಡೆಯುತ್ತಿದ್ದು ಅದರಂತೆ ಮಳವಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಮಳವಳ್ಳಿ ಶಾಂತಿ ಪದವಿ ಪೂರ್ವ ಕಾಲೇಜು, ಮದ್ದೂರು ವಿಧಾನಸಭಾ ಕ್ಷೇತ್ರಕ್ಕೆ ಮದ್ದೂರು ಹೆಚ್.ಕೆ.ವೀರಣ್ಣಗೌಡ ಪದವಿ ಪೂರ್ವ ಕಾಲೇಜು, ಮೇಲುಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಪಾಂಡವಪುರದ ಪಿ.ಎಸ್.ಎಸ್.ಕೆ. ಪ್ರೌಢಶಾಲೆ (ರೈಲ್ವೆ ನಿಲ್ದಾಣ ಹತ್ತಿರ)ಯಿಂದ ಮತಕೇಂದ್ರಗಳ ಅಧಿಕಾರಿಗಳು, ಸಿಬ್ಬಂದಿ ಮತಗಟ್ಟೆಗಳತ್ತ ತೆರಳಿದರು.

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಶ್ರೀಂಗರಪಟ್ಟಣ ಸರ್ಕಾರಿ ಪದವಿ ಪೂರ್ವ ಕಾಲೇಜು, ನಾಗಮಂಗಲ ವಿಧಾನ ಸಭಾ ಕ್ಷೇತ್ರದಕ್ಕೆ-ನಾಗಮಂಗಲ ಸರ್ಕಾರಿ ಪದವಿ ಪೂರ್ವ ಕಾಲೇಜು, ಕೆ.ಆರ್. ಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಕೆ.ಆರ್.ಪೇಟೆ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಹಾಗೂ ಕೆ.ಆರ್.ನಗರದ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿಂದ ಸಿಬ್ಬಂದಿ ತೆರಳಿದರು.

ಮತಯಂತ್ರ ರವಾನೆ

ಮತಗಟ್ಟೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಗುರುವಾರ ಬೆಳಿಗ್ಗೆಯಿಂದಲೇ ಆಯಾ ಕ್ಷೇತ್ರಗಳಲ್ಲಿ ನಿಗದಿಪಡಿಸಿರುವ ಮಸ್ಟರಿಂಗ್ ಹಾಗೂ ಡಿ-ಮಸ್ಟರಿಂಗ್ ಕೇಂದ್ರಗಳಿಂದ ನಿಯೋಜನೆಗೊಂಡ ಸ್ಥಳಗಳಿಗೆ ಬಸ್‌ಗಳಲ್ಲಿ ಮತಯಂತ್ರ ಹಾಗೂ ವಿವಿ ಪ್ಯಾಟ್ ಮತ್ತು ಇತರೆ ಪರಿಕರಗಳನ್ನು ತೆಗೆದುಕೊಂಡು ತೆರಳಿದರು.

ಮಂಡ್ಯ ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 2,074 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಪ್ರತಿ ಮತಗಟ್ಟೆಗೆ ಒಬ್ಬರು ಅಧಿಕಾರಿ, ಸಹಾಯಕ ಅಧಿಕಾರಿ ಸಹಿತ ಸಿಬ್ಬಂದಿಯು ಜಿಲ್ಲಾಡಳಿತದಿಂದ ವ್ಯವಸ್ಥೆ ಕಲ್ಪಿಸಿದ ವಾಹನಗಳ ಮೂಲಕ ನಿಯೋಜಿಸಲ್ಪಟ್ಟ ಮತಗಟ್ಟೆಗಳಿಗೆ ನಿರ್ಗಮಿಸಿದರು.

17,79,243 ಮತದಾರರು

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 17,79,243 ಮತದಾರರಿದ್ದು, ಈ ಪೈಕಿ 8,76,112 ಮಂದಿ ಪುರುಷರು, 9,02,963 ಮಹಿಳೆಯರು ಹಾಗೂ 168 ತೃತೀಯ ಲಿಂಗಿಗಳು ಇದ್ದಾರೆ. 8,396 ಮತಗಟ್ಟೆ ಸಿಬ್ಬಂದಿ ಹಾಗೂ ಸಿಆರ್‌ಪಿಎಫ್, ಎಸ್‌ಎಪಿ ಗುಜರಾತ್ ತಂಡಗಳು ಸೇರಿದಂತೆ ಸ ಸಾವಿರಕ್ಕೂ ಅಧಿಕ ಭದ್ರತಾ ಸಿಬ್ಬಂದಿಗಳನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ಸಾಂಪ್ರದಾಯಿಕ ಮತಗಟ್ಟೆ ಸ್ಥಾಪನೆ

ಮಂಡ್ಯ ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರವಾರು 2 ಸಾಂಪ್ರದಾಯಿಕ ಮತಗಟ್ಟೆಗಳು, ಎರಡು ಪಿಂಕ್ ಮತಗಟ್ಟೆ, ಒಂದೊಂದು ಪಿಡಬ್ಲ್ಯೂಡಿ, ಎರಡು ಯುವ ಮತದಾರರ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!