ಕೋಳಿ ಸ್ವಚ್ಚ ಮಾಡುವ ಯಂತ್ರದಿಂದ ವಿದ್ಯುತ್ ಸ್ಪರ್ಶವಾಗಿ ಯುವಕನೊಬ್ಬ ಸಾವಿಗೀಡಾಗಿರುವ ಘಟನೆ ಮಂಡ್ಯ ತಾಲೂಕಿನ ಕೆರಗೋಡು ಹೋಬಳಿಯ ಬಿಳಿದೇಗಲು ಗ್ರಾಮದಲ್ಲಿ ನಡೆದಿದೆ.
ಈ ಘಟನೆಯಲ್ಲಿ ಹಂಚಹಳ್ಳಿ ಗ್ರಾಮದ ವೆಂಕಟೇಶ್ ಎಂಬುವವರ ಮಗ ಸಂಜಯ್ (22) ಎಂಬ ಯುವಕ ಸಾವಿಗೀಡಾಗಿದ್ದಾನೆ.
ಕೋಳಿ ಸ್ವಚ್ಚ ಮಾಡುವ ಗ್ಲೈಂಡರ್ ನಿಂದ ವಿದ್ಯುತ್ ಶಾಕ್ ಹೊಡೆದು ಸ್ಥಳದಲ್ಲೇ ಯುವಕ ಮೃತಪಟ್ಟಿದ್ದು, ಕುಟುಂಬಸ್ಥರು ಆಂಕ್ರದನ ಮುಗಿಲು ಮುಟ್ಟಿತ್ತು.
ಬಿಳಿದೇಗಲು ಗ್ರಾಮದ ಕೋಳಿ ಅಂಗಡಿ ಮಾಲೀಕನ ತೀವ್ರ ನಿರ್ಲಕ್ಷ್ಯ ಹಾಗೂ ಅಜಾಗರೂಕತೆಯಿಂದಾಗಿ ವಿದ್ಯುತ್ ಸ್ಪರ್ಶಿಸಿದ್ದು, ಅಂಗಡಿಗೆ ಅರ್ಥಿಂಗ್ ಮಾಡದಿರುವುದರಿಂದ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.




