Thursday, November 19, 2026

ಪ್ರಾಯೋಗಿಕ ಆವೃತ್ತಿ

ಕಾವೇರಿ ಸಂಕಷ್ಟ| ತುರ್ತು ವಿಧಾನಮಂಡಲ ಅಧಿವೇಶನ ಕರೆಯಲು ರೈತ ಹಿತರಕ್ಷಣಾ ಸಮಿತಿ ಆಗ್ರಹ

ಕಾವೇರಿ ಕೊಳ್ಳದ ಜನರ ಹಿತ ಕಾಪಾಡುವ ದೃಷ್ಠಿಯಿಂದ ರಾಜ್ಯ ಸರ್ಕಾರ ಕೂಡಲೇ ತುರ್ತು ವಿಧಾನಮಂಡಲ ಅಧಿವೇಶನ ಕರೆಯಬೇಕೆಂದು ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ನಿರ್ಣಯ ಅಂಗೀಕರಿಸಿದೆ.

ಮಂಡ್ಯದಲ್ಲಿ ಹೋರಾಟ ನಡೆಸುತ್ತಿರುವ ಸಮಿತಿಯು ಸಭೆ ನಡೆಸಿ ಹಲವು ನಿರ್ಣಯಗಳನ್ನು ಕೈಗೊಂಡಿದೆ. ಕಾವೇರಿ ನದಿ ನೀರಿನ ವಿಚಾರದಲ್ಲಿ ಸಂಕಷ್ಟ ಸನ್ನಿವೇಶ ಎದುರಿಸುತ್ತಿರುವ ರೈತರ ಪರ ರಾಜ್ಯ ಸರ್ಕಾರ ನಿಲ್ಲಬೇಕಿದ್ದು, ತುರ್ತು ಅಧಿವೇಶನ ನಡೆಸಿ ಸಮಗ್ರ ಚರ್ಚೆ ನಡೆಸಿ ರೈತರ ಹಿತ ಕಾಪಾಡಬೇಕೆಂದು ಸಮಿತಿ ಒತ್ತಾಯಿಸಿದೆ.

ಸರ್ವಪಕ್ಷ ನಿಯೋಗದೊಂದಿಗೆ ಪ್ರಧಾನಿಯವರನ್ನು ಭೇಟಿಯಾಗಿ ವಾಸವಾಂಶವನ್ನು ಮನವರಿಕೆ ಮಾಡಿಕೊಡಲು ಮುಂದಾಗಬೇಕು. ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಪ್ರಶ್ನಿಸಿಸಿ ಸುಪ್ರೀಂಕೋರ್ಟ್ ನಲ್ಲಿ ವಾಸ್ತವಾಂಶದ ಅಂಕಿ ಅಂಶಗಳ ಸಮೇತ ಸಮರ್ಥವಾದ ಮಂಡನೆಗೆ ಸರ್ಕಾರ ಮುಂದಾಗಬೇಕು, ಪ್ರಾಧಿಕಾರದ ಆದೇಶ ಪಾಲನೆ ಮಾಡಿ ಯಾವುದೇ ಕಾರಣಕ್ಕೂ ಒಂದು ಹನಿ ನೀರನ್ನು ಸರ್ಕಾರ ಬಿಡುಗಡೆ ಮಾಡಬಾರದು ಎಂದು ನಿರ್ಣಯ ಕೈಗೊಂಡಿದೆ.

ಸಂಕಷ್ಟ ಸೂತ್ರಕ್ಕೆ ಒತ್ತಾಯಿಸಿ 

ರಾಜ್ಯದ ಎಲ್ಲಾ ಸಂಸದರು ಪಕ್ಷಾತೀತವಾಗಿ ಒಗ್ಗೂಡಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಕಾವೇರಿ ವಿಚಾರದಲ್ಲಿ ಸಂಕಷ್ಟದ ಸಮಯದಲ್ಲಿ ಸಂಕಷ್ಟ ಸೂತ್ರ ರಚಿಸಲು ಒತ್ತಾಯ ಮಾಡಬೇಕು, ಒಕ್ಕೂಟ ವ್ಯವಸ್ಥೆಯಲ್ಲಿ ಪ್ರಧಾನ ಮಂತ್ರಿ ಮಧ್ಯ ಪ್ರವೇಶಿಸಿ ಸಂಕಷ್ಟ ಸಮಯದಲ್ಲಿ ಸಮಸ್ಯೆ ಪರಿಹಾರಕ್ಕೆ ಮುಂದಾಗಿ ಕರ್ನಾಟಕ ರಾಜ್ಯಕ್ಕೆ ನ್ಯಾಯ ದೊರಕಿಸಿ ಕೊಡಬೇಕೆಂದು ಸಮಿತಿಯು ಆಗ್ರಹಿಸಿದೆ.

ರೈತರ ಗುಳೆ; ಅಣಕು ಪ್ರದರ್ಶನ ಮಾಡಿ ಪ್ರತಿಭಟನೆ

nudikarnataka.com

ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರ ರೈತರಿಗೆ ಗುಳೆ ಭಾಗ್ಯ ನೀಡಿದೆ ಎಂದು ರೈತರು ಅಣಕು ಗುಳೆ ಯಾತ್ರೆ ಮೂಲಕ ಶ್ರೀರಂಗಪಟ್ಟಣದಲ್ಲಿ ಪ್ರತಿಭಟಿಸಿದರು.

ಭೂಮಿ ತಾಯಿ ಹೋರಾಟ ಸಮಿತಿ ಆಶ್ರಯದಲ್ಲಿ ರೈತರು ಕಾವೇರಿ ನದಿಯ ಸ್ನಾನಘಟ್ಟದ ಬಳಿ ಅಣಕು ಗುಳೆ ಯಾತ್ರೆ ಆರಂಭಕ್ಕೆ ಮುನ್ನ ಪ್ರದಕ್ಷಿಣೆ ಹಾಕಿ ಯಾತ್ರೆ ಹೊರಟರು. ಕದ್ದು ಮುಚ್ಚಿ ನೀರು ಬಿಡುತ್ತಿರುವ ಸರ್ಕಾರದ ದಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ತಮಿಳುನಾಡಿಗೆ ನೀರು ಬಿಡುವ ಮೂಲಕ ಸರ್ಕಾರ ರೈತರ ಗುಳೆ ಭಾಗ್ಯ ಕಲ್ಪಿಸಿದೆ ಎಂದು ಕಿಡಿಕಾರಿದರು.

ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಕೆ ಎಸ್ ನಂಜುಂಡೇಗೌಡ, ರಾಮಕೃಷ್ಣೇಗೌಡ ಮತ್ತಿತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ