Tuesday, May 21, 2024

ಪ್ರಾಯೋಗಿಕ ಆವೃತ್ತಿ

ಡಿ.14ಕ್ಕೆ ಬೃಹತ್ ಉದ್ಯೋಗ ಮೇಳ: ಜಿಲ್ಲಾಧಿಕಾರಿ

ಮಂಡ್ಯ ಜಿಲ್ಲಾಡಳಿತ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ‌ ವತಿಯಿಂದ ಡಿ.14 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮಂಡ್ಯನಗರದ ಪಿ.ಇ.ಎಸ್ ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ‌ಎಂದು ಜಿಲ್ಲಾಧಿಕಾರಿ ಡಾ.ಹೆಚ್.ಎನ್. ಗೋಪಾಲಕೃಷ್ಣ ‌ತಿಳಿಸಿದರು.

ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು, ಉದ್ಯೋಗ ಮೇಳದಲ್ಲಿ ಅಂದಾಜು 100 ಕ್ಕೂ ಹೆಚ್ಚು ಪ್ರಸಿದ್ಧ ಕಂಪನಿಗಳು ಭಾಗವಹಿಸಲಿದ್ದು, ಹೆಚ್ಚು ಜನರು ಹೆಸರು ನೊಂದಾಯಿಸಿಕೊಳ್ಳಬೇಕೆಂದು ತಿಳಿಸಿದರು.

5,000 ಕ್ಕೂ ಹೆಚ್ಚು ಉದ್ಯೋಗ ಅವಕಾಶಗಳಿದ್ದು, 18 ರಿಂದ 35 ವರ್ಷದೊಳಗಿನ ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೋಮಾ, ಬಿ.ಇ ಅಥವಾ ಯಾವುದೇ ಪದವಿಧರರು‌ ಉದ್ಯೋಗ ಮೇಳದಲ್ಲಿ ಭಾಗವಹಿಸಲು http://skillconnect.kaushalkar.com/candidatereg ನಲ್ಲಿ ಹೆಸರು ನೊಂದಾಯಿಸಿಕೊಳ್ಳಬಹುದು. ಹೆಸರು ನೊಂದಾಯಿಸಿಕೊಳ್ಳಲು ಸಾಧ್ಯವಾಗದಿದ್ದರೂ ಸಹ ನೇರವಾಗಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು ಎಂದರು.

ಅಭ್ಯರ್ಥಿಗಳು ತಮ್ಮ ಸ್ವವಿವರ resume ಅನ್ನು [email protected] ನಲ್ಲಿ‌ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ದೂ.ಸಂ.08232-295010, ಮೊ.9164443223, 8152882461 ಯನ್ನು ಸಂಪರ್ಕಿಸುವುದು. ಉದ್ಯೋಗ ಮೇಳದಲ್ಲಿ ಹೆಚ್ಚು ಕಂಪನಿಗಳು ಭಾಗವಹಿಸುತ್ತಿದ್ದು, ಇದಕ್ಕೆ ‌ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಿಲ್ಲೆಯ ಉದ್ಯೋಗಾಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ತಿಳಿಸಿದರು.

ಗೋಷ್ಠಿಯಲ್ಲಿ ಕೌಶಲ್ಯಾಭಿವೃದ್ಧಿ ಅಧಿಕಾರಿ ವೇಣು ಗೋಪಾಲ್, ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕ ಸ್ವಾಮಿಗೌಡ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!