Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ| ”ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯಡೆಗೆ” ಅಭಿಯಾನ ಚಾಲನೆ

ಮಳವಳ್ಳಿ ತಾಲ್ಲೂಕಿನ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯ 2024-25ನೇ ಸಾಲಿನ ಕಾರ್ಮಿಕ ಆಯವ್ಯಯ ಒಂದು ತಿಂಗಳ ಕಾಲ ತಾಲ್ಲೂಕಿನ 39 ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯಡೆಗೆ ಅಭಿಯಾನವನ್ನು ಹಮ್ಮಿಕೊಂಡಿದ್ದೇವೆಂದು ಕಾರ್ಯನಿರ್ವಾಹಕ ಅಧಿಕಾರಿ ಮಮತ.ಎಲ್ ತಿಳಿಸಿದ್ದರು.

ಕೇಂದ್ರ ಗಾಮೀಣಾಭಿವೃದ್ಧಿ ಮಂತ್ರಾಲಯದ ಸೂಚನೆಯಂತೆ ನರೇಗಾ ಯೋಜನೆಯ 2024-25ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸಲು ವೇಳಾ ಪಟ್ಟಿ ನಿಗದಿಪಡಿಸಿ, ಕಾಲ ಮಿತಿಯೊಳಗೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ತಿಳಿಸಿರುವ ಹಿನ್ನಲೆಯಲ್ಲಿ ಎಲ್ಲಾ ಗ್ರಾಮ ಪಂಚಾಯಿತಿಗಳು ತಮ್ಮ ವ್ಯಾಪ್ತಿಯಲ್ಲಿ ಮನೆ ಮನೆ ಜಾಥಾ ಹಾಗೂ ವಿಶೇಷ ರೋಜ್ಗರ್ ದಿನಾಚರಣೆ ಕಾರ್ಯಕ್ರಮವನ್ನು ಕೈಗೊಳ್ಳಬೇಕು ಎಂದರು.

ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಪ್ರತಿಯೊಂದು ಮನೆ ಮನೆಗೆ ಭೇಟಿ ನೀಡಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ದೊರೆಯುವ ವೈಯಕ್ತಿಕ ಕಾಮಗಾರಿಗಳ ಸೌಲಭ್ಯಗಳು, ಹಾಗೂ ವೈಯಕ್ತಿಕ ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆಗಳು, ಯೋಜನೆಯಡಿ ದೊರೆಯುವ ಕೂಲಿಯ ಮೊತ್ತ ಗಂಡು ಹೆಣ್ಣಿಗೆ ಸಮಾನ ಕೂಲಿ, ಒಂದು ದಿನದ ಕೂಲಿ ಪಡೆಯಲು ಮಾಡಬೇಕಾದ ಪ್ರಮಾಣ ಮತ್ತು ಕೆಲಸದ ಅವಧಿಯ ಕುರಿತು ಜನರಿಗೆ ಮಾಹಿತಿ ನೀಡಲಾಗುವುದು ಎಂದರು.

ಕೆಲಸದ ಪ್ರಮಾಣದಲ್ಲಿ ಹಿರಿಯ ನಾಗರಿಕರಿಗೆ ಮತ್ತು ವಿಶೇಷ ಚೇತನರಿಗೆ ಶೇ. 50 ರಿಯಾಯಿತಿ, ಕಾಮಗಾರಿ ಸ್ಥಳದಲ್ಲಿ ಒದಗಿಸಲಾಗುವ ಸೌಲಭ್ಯಗಳು, ಅಕುಶಲ ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ನಿರ್ವಹಿಸುವ ಕೆಲಸಕ್ಕೆ ಹೆಚ್ಚುವರಿಯಾಗಿ ಶೇ.20ರಷ್ಟು ಕೆಲಸದ ಪ್ರಮಾಣದಲ್ಲಿ ರಿಯಾಯಿತಿ ಇದೆ ಎಂದರು.

ಸ್ವ-ಸಹಾಯ ಸಂಘಗಳಲ್ಲಿ ಮಹಿಳೆಯರಿಗೆ ಸಿಗುವ ಸೌಲಭ್ಯಗಳು, ಹಾಗೂ ಯೋಜನೆಯಡಿ ರೈತರಿಗೆ ದೊರೆಯವ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ಒದಗಿಸಿ ಕೂಲಿ ಬೇಡಿಕೆ ಹಾಗೂ ಕಾಮಗಾರಿ ಬೇಡಿಕೆಯನ್ನು ಹಾಗೂ ಅರ್ಜಿಗಳನ್ನು ಅಭಿಯಾನದಡಿ ಸಂಗ್ರಹಿಸಲಾಗುತ್ತದೆ.

ಇದೇ ವೇಳೆ ಸಹಾಯಕ ನಿರ್ದೇಶಕರಾಗಿ ದೀಪು ರವರು ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯಡೆಗೆ ಅಭಿಯಾನವನ್ನು ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗುತ್ತಿದ್ದು, ಈ ಕುರಿತು ಐಇಸಿ ಚಟುವಟಿಗಳು ಹಾಗೂ ಗ್ರಾಮ ಪಂಚಾಯತಿ ಮಟ್ಟದಲ್ಲಿ ಆಟೋ ಪ್ರಚಾರ ಮಾಡುವ ಮೂಲಕ ಸಾರ್ವಜನಿಕರಿಗೆ ಯೋಜನೆಯಡಿ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ಒದಗಿಸಲಾಗುತ್ತಿವೆ. ಈ ಅಭಿಯಾನದಲ್ಲಿ ಸಾರ್ವಜನಿಕರು ಈ ಯೋಜನೆಗಳ ಸೌಲಭ್ಯವನ್ನು ಪಡೆದುಕೊಳ್ಳುವಂತೆ ತಿಳಿಸಿದರು.

ಇದೇ ಸಂದರ್ಭದಲ್ಲಿ ಟಿ.ಸಿ.ಸುಹಾಸ್, ತಾಲ್ಲೂಕು ಐಇಸಿ ಸಂಯೋಜಕರಾದ ಸುನಿಲ್ ಕುಮಾರ್.ಹೆಚ್, ತಾಲ್ಲೂಕಿನ ಎಲ್ಲಾ ಪಿಡಿಒಗಳು, ಕಾರ್ಯದರ್ಶಿಗಳು, ತಾಂತ್ರಿಕ ಸಹಾಯಕರುಗಳು, ಎಂಐಎಸ್ ಸಂಯೋಜಕರು, ಬಿ.ಎಫ್.ಟಿಗಳು, ಡಿಇಒಗಳು, ಜಿಕೆಎಂಗಳು ಮತ್ತು ತಾಲ್ಲೂಕು ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!