Friday, November 20, 2026

ಪ್ರಾಯೋಗಿಕ ಆವೃತ್ತಿ

ವಿದ್ಯಾರ್ಥಿಗಳಿಗೆ ಉತ್ತೇಜನ ನೀಡಿದರೆ ಉತ್ತಮ ಸಾಧನೆ

ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲಾ ಮಕ್ಕಳಿಗೆ ಉತ್ತಮ ತರಬೇತಿ ನೀಡಿದರೇ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಉತ್ತಮ ಸಾಧನೆ ಮಾಡುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಮಂಟೇಸ್ವಾಮಿ ಮಠದ ಪೀಠಾಧಿಪತಿ ವರ್ಚಸ್ವಿ ಸಿದ್ದಲಿಂಗರಾಜೇ ಅರಸ್ ಅವರ ಧರ್ಮಪತ್ನಿ ಸುಷ್ಮಾ ಗುಬ್ಬಿವಾಣಿ ತಿಳಿಸಿದರು.

ಮದ್ದೂರು ತಾಲ್ಲೂಕಿನ ಕೆ.ಎಂ.ದೊಡ್ಡಿ ಸಮೀಪದ ಮಠದ ಹೊನ್ನಾಯಕನಹಳ್ಳಿಯಲ್ಲಿ ಧರೆಗೆ ದೊಡ್ಡವರು ಮಂಟೇಸ್ವಾಮಿ ಮಠದ ಸಹಯೋಗದಲ್ಲಿ ಶ್ರೀಮಂಟೇಸ್ವಾಮಿ ಶೈಕ್ಷಣಿಕ ಹಾಗೂ ಗ್ರಾಮೀಣ ಅಭಿವೃದ್ದಿ ಟ್ರಸ್ಟ್ ವತಿಯಿಂದ ಆರಂಭಿಸಿರುವ ಪೂರ್ವ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿ
ಮಾತನಾಡಿದ ಅವರು, ಶಿಕ್ಷಕರ ಜೊತೆ ಪೋಷಕರು ಸಹಕರಿಸಿದರೇ ಮಾತ್ರ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಲು ಸಾಧ್ಯವಾಗುತ್ತದೆ, ಪೋಷಕರು ತಮ್ಮ ಮಕ್ಕಳಿಗೆ ಶಿಸ್ತು ಕಲಿಸಬೇಕೆಂದು ಹೇಳಿದರು

ಗ್ರಾಮೀಣ ಪ್ರದೇಶದ ಮಕ್ಕಳಿಗೂ ಗುಣಾತ್ಮಕ ಶಿಕ್ಷಣ ಸಿಗಬೇಕೆಂಬ ಹಿನ್ನೆಲೆಯಲ್ಲಿ ಮಂಟೇಸ್ವಾಮಿ ಮಠದ ವತಿಯಿಂದ ಪೂರ್ವ ಪ್ರಾಥಮಿಕ ಶಾಲೆಯನ್ನು ಆರಂಭಿಸಿ ಉಚಿತವಾಗಿ ಶಿಕ್ಷಣ ನೀಡುವುದರ ಜೊತೆಗೆ ಗುಣಾತ್ಮಕ ಶಿಕ್ಷಣ ನೀಡಲಾಗುತ್ತಿದೆ, ಎಲ್‌ಕೆಜಿ ಯುಕೆಜಿಯಲ್ಲಿಯೇ ಇಂಗ್ಲೀಷ್‌ನಲ್ಲಿ ಮಾತನಾಡುವುದನ್ನು ಕಲಿಸುವುದಲ್ಲದೇ ವೇದಿಕೆಯಲ್ಲಿ ಭಯ ಪಡದೇ ಕಾರ್ಯಕ್ರಮವನ್ನು ನಡೆಸಿಕೊಡುವಂತೆ ವಿದ್ಯಾರ್ಥಿಗಳನ್ನು
ಸಿದ್ದಪಡಿಸಲಾಗುತ್ತಿದೆ ಎಂದರು.

ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಮಂಟೇಸ್ವಾಮಿ ಮಠ ಸೇರಿದಂತೆ ಹಲವು ಮಂದಿ ಸ್ವಯಂ ಪ್ರೇರಿತವಾಗಿ ಶ್ರಮಿಸಲಾಗುತ್ತಿದೆ, ಚವಿ ಎಂಬ ಇಂಗ್ಲೀಷ್ ಶಿಕ್ಷಕರು ಬೆಂಗಳೂರಿನ ದೊಡ್ಡ ಶಿಕ್ಷಣ ಸಂಸ್ಥೆಯೊAದಲ್ಲಿ ಕೆಲಸ ಮಾಡುತ್ತಿರುವುದನ್ನು ಬಿಟ್ಟು ಸರ್ಕಾರಿ ಶಾಲೆಯ ಮಕ್ಕಳಿಗೆ ಇಂಗ್ಲೀಷ್ ಕಲಿಸಲು ನಮ್ಮ ಜೊತೆಯಲ್ಲಿಯೇ
ಶ್ರಮಿಸುತ್ತಿದ್ದಾರೆ, ಗ್ರಾಮೀಣ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕೆಂಬುವುದೇ ನಮ್ಮ ಗುರಿಯಾಗಿದೆ ಎಂದರು.

ಎಲ್‌ಕೆಜಿ, ಯುಕೆಜಿ ವಿದ್ಯಾರ್ಥಿಗಳು ರಾಮಾಯಣ ನಾಟಕವನ್ನು ಇಂಗ್ಲೀಷ್ ಭಾಷೆಯಲ್ಲಿ ಪ್ರಸ್ತುತ ಪಡಿಸಿದರು. ಯೋಗಾಸನ ನೃತ್ಯ, ಗಾಯನ ಗಮನ ಸೆಳೆಯಿತು. ಇದೇ ಸಂದರ್ಭದಲ್ಲಿ ಧರೆಗೆ ದೊಡ್ಡವರು ಮಂಟೇಸ್ವಾಮಿ ಮಠದ ಪೀಠಾಧಿಪತಿ ವರ್ಚಸ್ವೀ ಸಿದ್ದಲಿಂಗರಾಜೇ ಅರಸ್, ಶಿಕ್ಷಕಿ ಚವಿ, ಪ್ರಕಾಶ್, ಸ್ವಾಮಿ ಸೇರಿದಂತೆ ಶಿಕ್ಷಕರು ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ