Friday, May 17, 2024

ಪ್ರಾಯೋಗಿಕ ಆವೃತ್ತಿ

ಮದ್ದೂರು| ಸರ್ಕಾರಿ ಶಾಲೆಗೆ ಮಕ್ಕಳನ್ನು ದಾಖಲಿಸಿ: ಕಾಳೀರಯ್ಯ

ವರದಿ: ಪ್ರಭು ವಿ ಎಸ್

ಸರ್ಕಾರಿ ಶಾಲೆಯಲ್ಲಿ ಪ್ರತಿಭಾನ್ವಿತ ಶಿಕ್ಷಕರಿದ್ದು ಮತ್ತು ಉತ್ತಮ ಸೌಲಭ್ಯವುಳ್ಳ ಸರ್ಕಾರಿ ಶಾಲೆಗೆ ಪೋಷಕರು ತಮ್ಮ ಮಕ್ಕಳನ್ನು ದಾಖಲು ಮಾಡುವುದರ ಮೂಲಕ ಸರ್ಕಾರಿ ಶಾಲೆಗಳ ಉಳಿವಿಗೆ ಮುಂದಾಗಬೇಕೆಂದು ಬಿಇಓ ಸಿ ಎಚ್ ಕಾಳಿರಯ್ಯ ತಿಳಿಸಿದರು. ‌‌

ಮದ್ದೂರು ತಾಲೂಕಿನ ಹುಳಗನಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಕೃಷ್ಣೇಗೌಡ ಚಾರಿಟಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಯಮನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಕೃಷ್ಣೆಗೌಡ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ನಂದೀಶ್ ಗೌಡ ಹಲವಾರು ಸಮಾಜಮುಖಿ ಸೇವಾ ಕಾರ್ಯಗಳನ್ನು ಕೈಗೊಂಡು ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚಿನ ಹೊತ್ತು ನೀಡುತ್ತಿರುವುದು ಉತ್ತಮ ಬೆಳವಣಿಗೆ ಎಂದರು.

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಸರ್ಕಾರಿ ಶಾಲೆಗಳ ಉನ್ನತಿಕರಣ ಅಂಗನವಾಡಿ ಕೇಂದ್ರ ಜೀರ್ಣೋದ್ಧಾರ ಮಕ್ಕಳಿಗೆ ಸಮವಸ್ತ್ರ, ನೋಟ್ ಪುಸ್ತಕ, ಪ್ರತಿವಾರ ಮೊಟ್ಟೆ ವಿತರಣೆ ಇನ್ನಿತರ ಸೇವಾ ಕಾರ್ಯಗಳನ್ನು ಕೈಗೊಂಡು ಈ ಭಾಗದ ಮಕ್ಕಳ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿದ್ದು ಪೋಷಕರು ತಮ್ಮ ಗ್ರಾಮಗಳಲ್ಲಿರುವ ಸರ್ಕಾರಿ ಶಾಲೆಗೆ ತಮ್ಮ ಮಕ್ಕಳನ್ನು ದಾಖಲು ಮಾಡುಬೇಕಾಗಿ ಮನವಿ ಮಾಡಿದರು.

‌‌‌‌‌ಕೃಷ್ಣೆಗೌಡ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಕೆ ನಂದೀಶ್ ಗೌಡ ಮಾತನಾಡಿ, ಗ್ರಾಮ ಪಂಚಾಯತಿ ವ್ಯಾಪ್ತಿಯಿಂದ ಸಿಗುವ ಹಲವು ಸೌಲಭ್ಯಗಳನ್ನು ಸರ್ಕಾರಿ ಶಾಲೆಗಳಿಗೆ ಮತ್ತು ಅಂಗನವಾಡಿ ಕಟ್ಟಡಗಳಿಗೆ ‌ ವಿನಿಯೋಗಿಸಿದ್ದು ತಮ್ಮಲ್ಲಿರುವ ಅಲ್ಪ ಹಣದಿಂದ ಸಮಾಜಕ್ಕೆ ಏನನ್ನಾದರೂ ಸೇವೆ ಮಾಡಬೇಕೆಂಬ ಸದುದ್ದೇಶದಿಂದ ಹಲವು ಸೇವೆ ಕಾರ್ಯಗಳನ್ನು ತಮ್ಮ ತಂದೆ ಹೆಸರಿನಲ್ಲಿ ಕೈಗೊಳ್ಳುತ್ತಿರುವುದಾಗಿ ಹೇಳಿದರು.

‌‌ಮಕ್ಕಳ ಸಂಖ್ಯೆಯನ್ನು ಗಣನೀಯವಾಗಿ ಹೆಚ್ಚಿಸಬೇಕೆಂಬ ಉದ್ದೇಶ ದಿಂದ ಹಲವಾರು ವಿನೂತನ ಕಾರ್ಯಕ್ರಮ ಗಳನ್ನು ಗ್ರಾಮ ಪಂಚಾಯಿತಿ ಹಾಗೂ ಕೃಷ್ಣೇಗೌಡ ಚಾರಿಟಬಲ್ ಟ್ರಸ್ಟ್ ವತಿಯಿಂದ ಆಯೋಜಿಸುತ್ತಿದ್ದು ‌‌ ವಿದ್ಯಾರ್ಥಿಗಳಿಗೆ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಸಿಗುವಂತೆ ಎಲ್ಲಾ ಸೌಲಭ್ಯಗಳನ್ನು ಸರ್ಕಾರಿ ಶಾಲೆಗಳಲ್ಲಿ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದ್ದು ಮುಂದಿನ ದಿನಗಳಲ್ಲಿ ಪ್ರತಿ ವಾರಕ್ಕೊಮ್ಮೆ ಹಣ್ಣು ಹಂಪಲು ವಿತರಣೆ ಹಾಲು ಮೊಟ್ಟೆ ಇನ್ನಿತರ ಪ್ರೋಟೀನ್ ಯುಕ್ತ ಆಹಾರಗಳನ್ನು ವಿತರಿಸಲು ಕ್ರಮ ವಹಿಸಲಾಗುವುದೆಂದರು.

ಈ ವೇಳೆ ಗ್ರಾಪಂ ಅಧ್ಯಕ್ಷೆ ವೀಣಾ, ಉಪಾಧ್ಯಕ್ಷ ಅಪ್ಪಾಜಿಗೌಡ, ಸದಸ್ಯರಾದ ಪದ್ಮಕಮಲಾಕ್ಷಿ, ಭಾಗ್ಯಮ್ಮ, ಸಿ ಡಿ ಪಿ ಓ ನಾರಾಯಣ್, ನರೇಗಾ ಯೋಜನೆ ನಿರ್ದೇಶಕ ಮಂಜುನಾಥ್, ಪಿಡಿಒ ಲೀಲಾವತಿ, ಶಿಕ್ಷಕರ ಸಂಘದ ಅಧ್ಯಕ್ಷ ಜೋಗಿಗೌಡ, ಮುಖ್ಯ ಶಿಕ್ಷಕರಾದ ಶ್ರೀನಿವಾಸ್, ನಾಗರಾಜು, ಸಿಆರ್ಪಿ ಮಹಾದೇವ, ಸಂಯೋಜಕ ಅನುಪಮ ಎಸ್ ಡಿ ಎಂ ಸಿ ಅಧ್ಯಕ್ಷ ರವಿ, ಶಿಕ್ಷಕರು ವಿದ್ಯಾರ್ಥಿಗಳು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!