Thursday, November 19, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಉದ್ಯಮಶೀಲತಾ ಅಭಿವೃದ್ಧಿ ತರಬೇತಿ : ಹೆಸರು ನೋಂದಾಯಿಸಿಕೊಳ್ಳಲು ಮನವಿ

ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್) ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಚಿಸುವವರಿಗಾಗಿ 10 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ನವೆಂಬರ್ 24 ರಂದು ಹಮ್ಮಿಕೊಳ್ಳಲಿದೆ

ತರಬೇತಿಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ, ಹಾಗೂ ಉದ್ಯಮ ನಿರ್ವಹಣೆ, ಇತ್ಯಾದಿ ವಿಷಯಗಳ ಕುರಿತು ತರಬೇತಿಯನ್ನು ನೀಡಲಾಗುವುದು.

ಎಸ್.ಎಸ್.ಎಲ್.ಸಿ. ವ್ಯಾಸಂಗ ಮಾಡಿರುವ 18 ರಿಂದ 50 ವರ್ಷ ವಯೋಮಿತಿವುಳ್ಳ ಅಭ್ಯರ್ಥಿಗಳು ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕರ ಕಛೇರಿಯಲ್ಲಿ ಆಥವಾ ದೂ.ಸಂ: 9008194396, 7760145784ಗೆ ಕರೆ ಮಾಡಿ ನವೆಂಬರ್ 21 ರೊಳಗೆ ಹೆಸರು ನೊಂದಾಯಿಸಿಕೊಳ್ಳಬಹುದಾಗಿದೆ ಎಂದು ಸಿಡಾಕ್ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ