Saturday, May 18, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಅ.18ಕ್ಕೆ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ

ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ದಿ ಕೇಂದ್ರ (ಸಿಡಾಕ್), ಧಾರವಾಡ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರ ಮಂಡ್ಯ ಇವರ ಸಂಯುಕ್ತಾಶ್ರಯದಲ್ಲಿ ವಿಶೇಷ ಘಟಕ ಯೋಜನೆ ಅಡಿಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಬಯಸುವ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಹತ್ತು ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಅ.18 ರಂದು ಮಂಡ್ಯದಲ್ಲಿ ಆಯೋಜಿಸಲು  ತಿರ್ಮಾನಿಸಲಾಗಿದೆ.

ಕಾರ್ಯಕ್ರಮದಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಬಯಸುವ ಆಸಕ್ತರಿಗೆ ಪ್ರೇರಣೆ, ಸ್ವಂತ ಉದ್ಯಮ ಸ್ಥಾಪನೆಗಾಗಿ ಸರ್ಕಾರ ಹಾಗೂ ಹಣಕಾಸು ಸಂಸ್ಥೆಗಳಿಂದ ದೊರೆಯುವ ನೆರವು,ಪ್ರೋತ್ಸಾಹ, ಮುಂದೆ ಕೈಗೊಳ್ಳಗಾಗುವ ಉದ್ಯಮ ಶೀಲತಾಭಿವೃದ್ದಿ ತರಬೇತಿ ಬಗ್ಗೆ ಮಾಹಿತಿ ಹಾಗೂ ಇತರೆ ಕೈಗಾರಿಕಾ ವಿಷಯಗಳ ಕುರಿತು ಮಾಹಿತಿಯನ್ನು ನೀಡಲಾಗುವುದು.

ಆಸಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಯೋಜನ ಪಡೆಯಬಹುದಾಗಿದೆ. ಭಾಗವಹಿಸುವವರು ಕನಿಷ್ಠ 18 ವರ್ಷಗಳ ಮೇಲ್ಪಟ್ಟವರು ಹಾಗೂ ಓದಲು, ಬರೆಯಲು ಬರುವ, ಆಸಕ್ತ ಪರಿಶಿಷ್ಟ ಜಾತಿ ಅಭ್ಯರ್ಥಿಗಳು ಅಕ್ಟೋಬರ್ 18 ರಂದು ಬುಧವಾರ ಬೆಳಗ್ಗೆ 9.30 ಕ್ಕೆ ಮಂಡ್ಯದ ಸುಭಾಷ್ ನಗರದ ಹರ್ಡಿಕರ್ ಭವನದಲ್ಲಿ ನಡೆಯುವ ತರಬೇತಿಗೆ ನೇರವಾಗಿ ವರದಿ ಮಾಡಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.9008194396 ಹಾಗೂ 7760145784ಯನ್ನು ಸಂಪರ್ಕಿಸಬಹುದಾಗಿದೆ ಎಂದು ಸಿಡಾಕ್‌ನ ಜಂಟಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!