ಮಂಡ್ಯ ತಾಲ್ಲೂಕಿನ ಬೇಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಆಚರಣೆ ಮಾಡಲಾಯಿತು.
ಪ್ರತಿ ವರ್ಷ ಜೂನ್ 5 ರಂದು ವಿಶ್ವಾದ್ಯಂತ ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. ವಿಶ್ವ ಪರಿಸರ ದಿನವನ್ನು ವಿಶ್ವಾದ್ಯಂತ ಪರಿಸರದ ಬಗ್ಗೆ ಜಾಗೃತಿ ಮತ್ತು ಪರಿಸರದ ರಕ್ಷಣೆಗೆ ಉತ್ತೇಜಿಸಲು ಈ ದಿನವನ್ನು ಆಚರಿಸಲಾಯಿತು. ಜೀವಿಗಳ ಪೋಷಣೆಯಲ್ಲಿ ಪರಿಸರ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಪರಿಸರದ ಸಮೃದ್ಧಿ ಆರೋಗ್ಯಕರ ಜೀವನ ಮತ್ತು ಭೂಮಿಯ ಮೇಲಿನ ಪ್ರತಿಯೊಂದು ಜೀವಿಯ ಜೀವನದ ಅಸ್ತಿತ್ವಕ್ಕೆ ಕಾರಣವಾಗಿದೆ ಎಂದು ಸ್ಮರಿಸಲಾಯಿತು.

ಮಾನವ ಸೇರಿದಂತೆ ಇತರೆ ಪ್ರಾಣಿ, ಪಕ್ಷಿಗಳು, ಸೇರಿದಂತೆ ಪ್ರತಿಯೊಂದು ಜೀವ ಸಂಕುಲ ಆಹಾರ, ಗಾಳಿ, ನೀರು ಇತರೆ ಅಗತ್ಯತೆಗಳಿಗಾಗಿ ಪರಿಸರವನ್ನು ಅವಲಂಭಿಸಿದೆ ಎಂದರೆ ತಪ್ಪಾಗಲಾರದು. ಇದರೆ ಇತ್ತಿಚಿನ ದಿನಗಳಲ್ಲಿ ಮಾನವನು ಆಧುನಿಕ ಬದುಕಿನ ಗೀಳಿಗೆ ಬಿದ್ದು ಪರಿಸರವನ್ನು ನಾಶ ಮಾಡುತ್ತಿದ್ದಾನೆ. ಈಗ ಮಾನವನ ಈ ದುರಾಸೆಯಿಂದ ಗಾಳಿ, ನೀರು, ಮಣ್ಣು ಮುಂತಾದ ಪರಿಸರದ ಪ್ರತಿಯೊಂದು ಅಂಶವೂ ಕಲುಷಿತಗೊಂಡಿದೆ. ಮನುಷ್ಯ ತನ್ನ ಅಭಿವೃದ್ಧಿಗಾಗಿ ತನಗೆ ಅರಿವಿಲ್ಲದಂತೆ ಪರಿಸರವನ್ನು ಹಾಳು ಮಾಡುತ್ತಿದ್ದಾನೆ. ಇಂತಹ ಸಂದರ್ಭದಲ್ಲಿ ಪರಿಸರ ಸಂರಕ್ಷಣೆ ಮಾಡುವ ಪ್ರತಿಜ್ಞೆ ಮಾಡಲಾಯಿತು.
ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಕೃಷ್ಣ, ಶಾಲೆಯ ಮುಖ್ಯ ಶಿಕ್ಷಕ ಪವಿತ್ರ ಕೆ.ಎಂ., ಶಾಲೆಯ ಶಿಕ್ಷಕರು ಹಾಗೂ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ತೆಂಗಿನ ಹಾಗೂ ಸೀಬೆ ಗಿಡಗಳನ್ನು ನೆಡಲಾಯಿತು.
ಊರಿನ ಪ್ರಮುಖ ಬೀದಿಗಳಲ್ಲಿ ಪರಿಸರ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲಾಯಿತು. ಕಾರ್ಯಕ್ರಮದ ಜವಾಬ್ದಾರಿಯನ್ನು ಗೈಡ್ ಕ್ಯಾಪ್ಟನ್ ಉಷಾರಾಣಿ ವಹಿಸಿದ್ದರು. ನಂತರ ಮಕ್ಕಳಿಗೆ ಸಿಹಿ ವಿತರಣೆ ಮಾಡಲಾಯಿತು.




