Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಕೆಂಪೇಗೌಡರ ಕುರಿತು ಪ್ರಬಂಧ-ಚರ್ಚಾ ಸ್ಪರ್ಧೆ

ನಾಡಪ್ರಭು ಕೆಂಪೇಗೌಡರ ಕುರಿತು ಶಾಲಾ-ಕಾಲೇಜುಗಳಲ್ಲಿ ಪ್ರಬಂಧ/ಚರ್ಚಾ ಸ್ಪರ್ಧೆನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮವನ್ನು ಅದ್ದೂರಿಯಾಗಿ ಜಿಲ್ಲಾ/ತಾಲ್ಲೂಕು ಮಟ್ಟದಲ್ಲಿ ಆಚರಿಸಲು ತೀರ್ಮಾನಿಸಲಾಗಿದೆ.

ಮಂಡ್ಯ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡುವ ಉದ್ದೇಶದಿಂದ ಬೆಂಗಳೂರು ಸ್ಥಾಪಕರಾದ ನಾಡಪ್ರಭು ಕೆಂಪೇಗೌಡರ ಜೀವನ ಸಾಧನೆ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು ಪ್ರಾಥಮಿಕ, ಪ್ರೌಢಶಾಲೆ ಹಾಗೂ ಕಾಲೇಜು ಮಟ್ಟದಲ್ಲಿ ಪ್ರಬಂಧ ಸ್ಪರ್ಧೆ/ಚರ್ಚಾ ಸ್ಪರ್ಧೆ ಏರ್ಪಡಿಸಲಾಗಿದೆ.

ತಾಲ್ಲೂಕು ಮಟ್ಟದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಥಮ- ರೂ.1500, ದ್ವಿತೀಯ-ರೂ1000, ಹಾಗೂ ತೃತೀಯ-ರೂ 500 ಬಹುಮಾನವನ್ನು ಜೂನ್ 27 ರಂದು ನಡೆಯುವ ತಾಲ್ಲೂಕು ಮಟ್ಟದ ಕಾರ್ಯಕ್ರಮದಲ್ಲಿ ವಿತರಿಸಲಾಗುವುದು.

ಜಿಲ್ಲಾ ಮಟ್ಟದಲ್ಲಿ ವಿಜೇತರಾದವರಿಗೆ ಪ್ರಥಮ-ರೂ 2500, ದ್ವಿತೀಯ-ರೂ1500, ತೃತೀಯ-ರೂ1000 ಬಹುಮಾನವನ್ನು ಜೂನ್ 30 ಮಂಡ್ಯನಗರದ ಅಂಬೇಡ್ಕರ್ ಭವನದಲ್ಲಿ ನಡೆಯುವ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!