Thursday, September 19, 2024

ಪ್ರಾಯೋಗಿಕ ಆವೃತ್ತಿ

ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭ | ಮೊದಲ ದಿನ ಕನ್ನಡ ಪರೀಕ್ಷೆ ಬರೆದ ವಿದ್ಯಾರ್ಥಿಗಳು

ಮಂಡ್ಯ ಜಿಲ್ಲೆಯಾದ್ಯಂತ ಇಂದಿನಿಂದ (ಮಾ.31) ಎಸ್ ಎಸ್ ಎಲ್ ಸಿ ಪರೀಕ್ಷೆ ಪ್ರಾರಂಭವಾಗಿದ್ದು, ಮೊದಲ ದಿನವಾದ ಶುಕ್ರವಾರ ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ 10,963 ಬಾಲಕರು ಹಾಗೂ 10,073 ಬಾಲಕಿಯರು ಸೇರಿದಂತೆ ಒಟ್ಟಾರೆ 21,036 ವಿದ್ಯಾರ್ಥಿಗಳು ಪ್ರಥಮ ಭಾಷೆ ಕನ್ನಡ ಪರೀಕ್ಷೆಯನ್ನು ಬೆಳಿಗ್ಗೆ 10.30ರಿಂದ ಮಧ್ಯಾಹ್ನ1.45ರ ವರೆಗೆ ಬರೆದರು.

ಜಿಲ್ಲೆಯಲ್ಲಿ 475 ಶಾಲೆಗಳ ವಿದ್ಯಾರ್ಥಿಗಳಿಗೆ ಒಟ್ಟು 83 ಪರೀಕ್ಷಾ ಕೇಂದ್ರಗಳನ್ನು ಪರೀಕ್ಷೆಗಳು ನಡೆಯಲಿವೆ.  ಏಪ್ರಿಲ್ 3 ರಂದು ಗಣಿತ, ಏ.6 ರಂದು ಇಂಗ್ಲಿಷ್, ಏ.10 ರಂದು ವಿಜ್ಞಾನ, ಏ. 12 ರಂದು ಹಿಂದಿ, ಏ. 15 ರಂದು ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆಯಲ್ಲಿ ಪಾರದರ್ಶಕತೆ ಕಾಪಾಡಲು ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸಲಾಗಿದೆ‌.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!